ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಬಜಾಜ್ ಆಟೋ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಚೇತಕ್ ಇವಿ ಸ್ಕೂಟರ್ ಮಾರಾಟವನ್ನು ವಿವಿಧ ನಗರಗಳಿಗೆ ವಿಸ್ತರಣೆ ಮಾಡುತ್ತಿದ್ದು, ಇತ್ತೀಚೆಗೆ ಬಜಾಜ್ ಕಂಪನಿಯು ಇತ್ತೀಚೆಗೆ ನಾಗಪುರ್‌ದಲ್ಲೂ ಇವಿ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಿತು.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಹೊಸ ಸ್ಕೂಟರ್ ಬಿಡುಗಡೆಯ ಸಂದರ್ಭದಲ್ಲಿ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರ ಮಾರಾಟ ಸೌಲಭ್ಯದೊಂದಿಗೆ ಹೊಂದಿದ್ದ ಬಜಾಜ್ ಕಂಪನಿಯು ಕಳೆದ ತಿಂಗಳು ಚೆನ್ನೈ ಮತ್ತು ಹೈದ್ರಾಬಾದ್‌ನಲ್ಲಿ ಚೇತಕ್ ಇವಿ ಮಾರಾಟ ಆಂಭಿಸಿತ್ತು. ಇದೀಗ ನಾಗಪುರ್‌ದಲ್ಲಿ ಮಾರಾಟ ಆರಂಭಿಸಿದ್ದು, ಹೊಸ ಸ್ಕೂಟರ್ ಮಾರಾಟಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಅಧಿಕೃತವಾಗಿ ಚಾಲನೆ ನೀಡಿದರು.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಪೆಟ್ರೋಲ್ ಬೆಲೆ ಹೆಚ್ಚಳ ಪರಿಣಾಮ ಹೊಸ ಇವಿ ಸ್ಕೂಟರ್ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬರುತ್ತಿದೆ.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮತ್ತು ಪ್ರೀಮಿಯಂ ಎನ್ನುವ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅರ್ಬೈನ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.42 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.44 ಲಕ್ಷ ಬೆಲೆ ಹೊಂದಿದೆ.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಹೊಸ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್‍ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಹಾಗೆಯೇ ಹೊಸ ಸ್ಕೂಟರ್‌‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ನಾಗಪುರ್‌ದಲ್ಲಿ ಚೇತಕ್ ಇವಿ ಮಾರಾಟ ಆರಂಭಿಸಿದ ಬಜಾಜ್ ಆಟೋ

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.

Article Published On: Saturday, July 17, 2021, 8:15 [IST]
English summary
Bajaj Chetak Electric Scooter Launched In Nagpur. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+