ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಚೇತಕ್ ಇವಿ ಸ್ಕೂಟರ್ ಬೆಲೆ ಹೆಚ್ಚಳ
ಬಜಾಜ್ ಕಂಪನಿಯು ಶೀಘ್ರದಲ್ಲೇ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಯಾದ ಚೇತಕ್ ಇವಿ ಮಾದರಿಯ ಉತ್ಪಾದನೆಯನ್ನು ಬೇಡಿಕೆಗೆ ಅನುಗುಣವಾಗಿ ಹೆಚ್ಚಿಸಲು ಸಿದ್ದತೆ ನಡೆಸುತ್ತಿದ್ದು, ಹೊಸ ಸ್ಕೂಟರ್ ಉತ್ಪಾದನೆ ಹೆಚ್ಚಳ ಮುನ್ನ ಸ್ಕೂಟರ್ ಬೆಲೆಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿದೆ.

ಕೋವಿಡ್ ಪರಿಣಾಮ ಚೇತಕ್ ಇವಿ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ್ದ ಬಜಾಜ್ ಕಂಪನಿಯು ಸ್ಟಾಕ್ ಪ್ರಮಾಣವನ್ನು ಈಗಾಗಲೇ ಪೂರ್ಣಗೊಳಿಸಿದ್ದು, ಉತ್ಪಾದನೆಗೆ ಮರುಚಾಲನೆ ನೀಡುವುದರ ಜೊತೆಗೆ ಹೊಸದಾಗಿ ಮತ್ತಷ್ಟು ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಎರಡನೇ ಹಂತದ ಬುಕ್ಕಿಂಗ್ ಪ್ರಕ್ರಿಯೆಯನ್ನು ಸಹ ಪೂರ್ಣಗೊಳಿಸಿದೆ. ಹೊಸ ಇವಿ ಸ್ಕೂಟರ್ ಮಾದರಿಯು ಪೆಟ್ರೋಲ್ ಬೆಲೆ ಹೆಚ್ಚಳದ ನಂತರ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮೂರನೇ ಬ್ಯಾಚ್‌ನಲ್ಲಿ ಚೇತಕ್ ಇವಿ ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಮಟ್ಟದ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಬಜಾಜ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನು ಸದ್ಯಕ್ಕೆ ತನ್ನ ಸಹಭಾಗೀತ್ವದ ಕಂಪನಿ ಕೆಟಿಎಂ ಡೀಲರ್ಸ್‌ಗಳಲ್ಲಿ ಮಾರಾಟ ಮಾಡುತ್ತಿದ್ದು, ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯಕ್ಕೆ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ.

ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆಗೊಂಡಿದ್ದ ಚೇತಕ್ ಇವಿ ಮಾದರಿಯು ಈ ವರ್ಷದ ಫೆಬ್ರವರಿ ಅವಧಿಯಲ್ಲಿ ಮೊದಲ ಬಾರಿಗೆ ಬೆಲೆ ಪಡೆದುಕೊಂಡಿತು. ಆರಂಭದಲ್ಲಿ ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮಾದರಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 1 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.15 ಲಕ್ಷ ಬೆಲೆ ನಿಗದಿಮಾಡಲಾಗಿತ್ತು.

ವಾಹನ ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಬಜಾಜ್ ಕಂಪನಿಯು ಚೇತಕ್ ಇವಿ ಸ್ಕೂಟರ್ ಬೆಲೆಯನ್ನು ಅರ್ಬೈನ್ ಮಾದರಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 1.15 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.20 ಲಕ್ಷ ಬೆಲೆ ಹೆಚ್ಚಳ ಮಾಡಿತ್ತು. ಇದೀಗ ಮತ್ತೊಮ್ಮೆ ಚೇತಕ್ ಇವಿ ಬೆಲೆಯಲ್ಲಿ ಕಳೆದ ಫೆಬ್ರವರಿ ಅವಧಿಗಿಂತಲೂ ಹೆಚ್ಚಿನ ಮಟ್ಟದ ಬೆಲೆ ಏರಿಕೆ ಮಾಡಿದ್ದು, ಅರ್ಬೈನ್ ಮಾದರಿಯು ಸದ್ಯ ಎಕ್ಸ್‌ಶೋರೂಂ ಪ್ರಕಾರ ರೂ. 1.42 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.44 ಲಕ್ಷ ಬೆಲೆ ಪಡೆದುಕೊಂಡಿದೆ.

ಈ ಮೂಲಕ ಕಳೆದ ಎರಡು ಅವಧಿಯಲ್ಲಿ ಚೇತಕ್ ಇವಿ ಸ್ಕೂಟರ್ ಬೆಲೆಯಲ್ಲಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.29 ಸಾವಿರದಿಂದ ರೂ. 44 ಸಾವಿರದಷ್ಟು ಹೆಚ್ಚುವರಿ ದರ ಪಡೆದುಕೊಂಡಿದ್ದು, ಚೇತಕ್ ಇವಿ ಖರೀದಿಯ ಯೋಜನೆಯಲಿದ್ದ ಗ್ರಾಹಕರಿಗೆ ಒಂದು ಬಾರಿಗೆ ಇಷ್ಟು ಪ್ರಮಾಣದ ಬೆಲೆ ಹೆಚ್ಚಳ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ.

ಇನ್ನು ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ಚೇತ್ ಇವಿ ಶೀಘ್ರದಲ್ಲೇ ವಿವಿಧ ನಗರಗಳಲ್ಲಿ ಮಾರಾಟಗೊಳ್ಳುವ ಸಿದ್ದತೆಯಲ್ಲಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದೆ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಚೇತಕ್ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಬ್ಯಾಟರಿ ಮೇಲೆ ಬಜಾಜ್ ಕಂಪನಿಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿಯನ್ನು ನೀಡಲಿದ್ದು, ಭವಿಷ್ಯದಲ್ಲಿ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಸೌಲಭ್ಯವನ್ನು ಒದಗಿಸುವ ಗುರಿಹೊಂದಿದೆ.

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.


Click it and Unblock the Notifications