ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಭಾರತದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ರೂ. 100 ರ ಗಡಿ ದಾಟಿದೆ. ಪೆಟ್ರೋಲ್ ಬೆಲೆ ಏರಿಕೆಯು ವಾಹನ ಸವಾರರನ್ನು ಪರದಾಡುವಂತೆ ಮಾಡಿದೆ. ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಭಾರತದಲ್ಲಿ ಸದ್ಯಕ್ಕೆ ಎರಡು ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ಮಾತ್ರ ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಮಾರಾಟ ಮಾಡುತ್ತಿವೆ. ಇನ್ನುಳಿದಂತೆ ಹಲವು ಸ್ಟಾರ್ಟ್ ಅಪ್ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಮಾರಾಟ ಮಾಡುತ್ತವೆ. ಬಜಾಜ್ ಆಟೋ (Bajaj Auto) ಹಾಗೂ ಟಿವಿಎಸ್ ಮೋಟಾರ್ (TVS Motor) ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಮಾರಾಟ ಮಾಡುತ್ತಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಕಂಪನಿಯು ಚೇತಕ್ (Chetak) ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಮಾರಾಟ ಮಾಡಿದರೆ, ಟಿವಿಎಸ್ ಮೋಟಾರ್ ಕಂಪನಿಯು ಐಕ್ಯೂಬ್ (iQube) ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತದೆ. ಇದರ ಜೊತೆಗೆ ಎಥರ್ ಎನರ್ಜಿಯಂತಹ ವಿವಿಧ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಆದರೆ ಬಜಾಜ್ ಹಾಗೂ ಟಿವಿಎಸ್ ಕಂಪನಿಗಳು ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಗಳಾಗಿದ್ದು, ಹಲವು ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳನ್ನು ಮಾರಾಟ ಮಾಡುತ್ತಿವೆ. ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದ ಬಗ್ಗೆ ಹೇಳುವುದಾದರೆ ಬಜಾಜ್ ಚೇತಕ್ ಹಾಗೂ ಟಿವಿಎಸ್ ಐಕ್ಯೂಬ್ ಸ್ಕೂಟರ್ ಗಳ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಈ ವರ್ಷದ ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬಜಾಜ್ ಚೇತಕ್ ಅಗ್ರಸ್ಥಾನದಲ್ಲಿದೆ. ಆದರೆ ಟಿವಿಎಸ್ ಐಕ್ಯೂಬ್ ಈ ವರ್ಷದ ಜನವರಿಯಿಂದ ಅಕ್ಟೋಬರ್ ಅವಧಿಯಲ್ಲಿ ಒಟ್ಟು ಮಾರಾಟದ ವಿಷಯದಲ್ಲಿ ಪ್ರಾಬಲ್ಯ ಹೊಂದಿದೆ. ಈ ಅವಧಿಯಲ್ಲಿ ಬಜಾಜ್ ಚೇತಕ್‌ ಎಲೆಕ್ಟ್ರಿಕ್ ಸ್ಕೂಟರಿನ ಒಟ್ಟು 3,832 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಮತ್ತೊಂದೆಡೆ ಈ ಅವಧಿಯಲ್ಲಿ ಟಿವಿಎಸ್ ಐಕ್ಯೂಬ್‌ನ 4,065 ಯುನಿಟ್‌ಗಳು ಮಾರಾಟವಾಗಿವೆ. ಎರಡೂ ಸ್ಕೂಟರ್‌ಗಳು ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಹೆಚ್ಚಳವನ್ನು ದಾಖಲಿಸುತ್ತಿವೆ. ಆದರೂ ಟಿವಿಎಸ್ ಐಕ್ಯೂಬ್‌ನ ತಿಂಗಳ ಮಾಸಿಕ ಮಾರಾಟವು ಅಕ್ಟೋಬರ್‌ನಲ್ಲಿ ಕುಸಿದಿದೆ. ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ ತಿಂಗಳಲ್ಲಿ ಬಜಾಜ್ ಚೇತಕ್‌ನ 835 ಯುನಿಟ್‌ಗಳು ಮಾರಾಟವಾಗಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

2020ರ ಅಕ್ಟೋಬರ್‌ನಲ್ಲಿ ಕಂಪನಿಯು ಒಟ್ಟು 258 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಈ ವರ್ಷ ಈ ಎಲೆಕ್ಟ್ರಿಕ್ ಸ್ಕೂಟರಿನ ಮಾರಾಟವು ಕಳೆದ ವರ್ಷಕ್ಕೆ ಹೋಲಿಸಿದರೆ 223.64% ನಷ್ಟು ಹೆಚ್ಚಾಗಿದೆ. ಇನ್ನು ಪ್ರತಿ ತಿಂಗಳ ಮಾರಾಟವನ್ನು ನೋಡುವುದಾದರೆ ಈ ಸ್ಕೂಟರಿನ 642 ಯುನಿಟ್ ಗಳನ್ನು ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಮಾರಾಟ ಮಾಡಲಾಗಿತ್ತು.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಅಕ್ಟೋಬರ್‌ನಲ್ಲಿ ಈ ಸ್ಕೂಟರಿನ ಮಾರಾಟವು 30.06% ನಷ್ಟು ಹೆಚ್ಚಾಗಿದೆ. ಬಜಾಜ್ ಚೇತಕ್ ಮಾರಾಟವು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕಂಪನಿಯು ಮುಂಬರುವ ದಿನಗಳಲ್ಲಿ ಸೆಮಿಕಂಡಕ್ಟರ್ ಚಿಪ್ ಹಾಗೂ ಇತರ ಬಿಡಿಭಾಗಗಳ ಕೊರತೆಯಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಬಜಾಜ್ ಚೇತಕ್ ಇತ್ತೀಚಿನ ತಿಂಗಳುಗಳಲ್ಲಿ ಮಾರಾಟದಲ್ಲಿ ಸ್ಥಿರವಾದ ಪ್ರಗತಿಯನ್ನು ಸಾಧಿಸುತ್ತಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರಿನ 364 ಯುನಿಟ್‌ಗಳು ಮಾರಾಟವಾಗಿದ್ದರೆ, ಸೆಪ್ಟೆಂಬರ್ ತಿಂಗಳಿನಲ್ಲಿ 642 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಜುಲೈ ತಿಂಗಳಿನಲ್ಲಿ ಕಂಪನಿಯು ಚೇತಕ್‌ನ 730 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಇನ್ನು ಟಿವಿಎಸ್ ಐಕ್ಯೂಬ್‌ನ ವರ್ಷದ ಮಾರಾಟದ ಬಗ್ಗೆ ಹೇಳುವುದಾದರೆ ಈ ಸ್ಕೂಟರಿನ ಮಾರಾಟವು ಕಳೆದ ವರ್ಷದ ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ 1134% ನಷ್ಟು ಹೆಚ್ಚಳವನ್ನು ದಾಖಲಿಸಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಟಿವಿಎಸ್ ಐಕ್ಯೂಬ್ ಮಾರಾಟವು ಕೇವಲ 32 ಯುನಿಟ್‌ಗಳಾಗಿದ್ದರೆ, ಈ ವರ್ಷದ ಅಕ್ಟೋಬರ್‌ನಲ್ಲಿ ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರ್‌ನ 395 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಕಂಪನಿಯು 766 ಯುನಿಟ್‌ಗಳನ್ನು ಮಾರಾಟ ಮಾಡಿದ್ದರಿಂದ ಪ್ರತಿ ತಿಂಗಳ ಮಾರಾಟದಲ್ಲಿ 48.43% ನಷ್ಟು ಕುಸಿತ ಕಂಡುಬಂದಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಟಿವಿಎಸ್ ಐಕ್ಯೂಬ್'ನ ಸೆಪ್ಟೆಂಬರ್ ತಿಂಗಳ ಮಾರಾಟವು ಈ ವರ್ಷದಲ್ಲಿಯೇ ಅತ್ಯಧಿಕವಾಗಿದೆ. ಕೆಲವು ವಿನಾಯಿತಿಗಳೊಂದಿಗೆ ಟಿವಿಎಸ್ ಐಕ್ಯೂಬ್ ಮಾರಾಟವು ಜನವರಿಯಿಂದ ಸ್ಥಿರವಾಗಿ ಸಾಗುತ್ತಿದೆ. ಒಟ್ಟಾರೆಯಾಗಿ ಈ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳು ವರ್ಷದಿಂದ ವರ್ಷಕ್ಕೆ 324.14% ಬೆಳವಣಿಗೆಯನ್ನು ದಾಖಲಿಸಿದ್ದರೆ, ಮಾಸಿಕ ಮಾರಾಟವು 12.64% ನಷ್ಟು ಕುಸಿದಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಹಾಗೂ ಟಿವಿಎಸ್ ತಮ್ಮ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಗಳಾಗಿವೆ. ಬಜಾಜ್ ಚೇತಕ್ ಹಾಗೂ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳು ದೇಶಿಯ ಮಾರುಕಟ್ಟೆಯಲ್ಲಿ Ola, Ather 450X ಹಾಗೂ ಸಿಂಪಲ್ ಒನ್‌ ಎಲೆಕ್ಟ್ರಿಕ್ ಸ್ಕೂಟರ್ ಗಳಿಂದ ಕಠಿಣ ಪೈಪೋಟಿಯನ್ನು ಎದುರಿಸುತ್ತಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಇತ್ತೀಚಿಗೆ ಬಿಡುಗಡೆಯಾಗಿರುವ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಭಾರತದಲ್ಲಿ ಪೆಟ್ರೋಲ್ ಬೆಲೆ ನಿರಂತರವಾಗಿಏರಿಕೆಯಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಬಜಾಜ್ ಚೇತಕ್, ಟಿವಿಎಸ್ ಐಕ್ಯೂಬ್ ನಂತಹ ಎಲೆಕ್ಟ್ರಿಕ್ ಸ್ಕೂಟರ್'ಗಳ ಮಾರಾಟವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಗಳಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ Bajaj Chetak ಎಲೆಕ್ಟ್ರಿಕ್ ಸ್ಕೂಟರ್

ಈ ಎರಡು ಪ್ರಮುಖ ಕಂಪನಿಗಳ ಸ್ಕೂಟರ್‌ಗಳನ್ನು ಹೊರತುಪಡಿಸಿ ಬೇರೆ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟ ಪ್ರಮಾಣವೂ ಸಹ ಹೆಚ್ಚಾಗುವ ಸಾಧ್ಯತೆಗಳಿವೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವೂ ಸಹ ಹೆಚ್ಚಾಗುವ ಸಾಧ್ಯತೆಗಳಿವೆ.

Most Read Articles

Kannada
English summary
Bajaj chetak electric scooter tops the list in october sales details
Story first published: Friday, November 19, 2021, 11:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X