ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಹೊಸ ನಗರಗಳಲ್ಲಿ ಮಾರಾಟ ವಿಸ್ತರಣೆಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಹೆಚ್ಚಿನ ಮಟ್ಟದ ಬೇಡಿಕೆ ದಾಖಲಾಗಿದೆ.

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಸದ್ಯ ಮಾರುಕಟ್ಟೆಯಲ್ಲಿನ ಪೆಟ್ರೋಲ್ ಸ್ಕೂಟರ್ ಮಾರಾಟ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಇವಿ ಸ್ಕೂಟರ್ ಮಾರಾಟವು ಶೇ. 1ಕ್ಕಿಂತಲೂ ಕಡಿಮೆ ಪ್ರಮಾಣದ ಬೇಡಿಕೆಯಿದ್ದು, ಇತ್ತೀಚೆಗೆ ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಿಂದಾಗಿ ಇವಿ ವಾಹನ ಖರೀದಿದಾರರ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ. ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಸದ್ಯ ಎಥರ್ ಎನರ್ಜಿ, ಟಿವಿಎಸ್ ಮೋಟಾರ್, ಬಜಾಜ್ ಆಟೋ, ಹೀರೋ ಎಲೆಕ್ಟ್ರಿಕ್ ಮತ್ತು ಒಕಿನಾವ ನಡುವೆ ಉತ್ತಮ ಪೈಪೋಟಿಯಿದ್ದು, ಚೇತಕ್ ಇವಿ ಮಾದರಿಯೊಂದಿಗೆ ಬಜಾಜ್ ಕಂಪನಿಯು ಇತ್ತೀಚೆಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಕಳೆದ ವರ್ಷ ಫೆಬ್ರವರಿಯಲ್ಲೇ ಬಿಡುಗಡೆಗೊಂಡಿದ್ದ ಬಜಾಜ್ ಚೇತಕ್ ಇವಿ ಸ್ಕೂಟರ್ ಮಾದರಿಯು ಕಾರಣಾಂತರಗಳಿಂದ ಮಧ್ಯಂತರ ಅವಧಿಯಲ್ಲಿ ಸ್ಥಗಿತಗೊಂಡು ಪುನಃ ಮಾರಾಟ ಆರಂಭವಾಯಿತು. ಸೀಮಿತ ಸಂಖ್ಯೆಯಲ್ಲಿ ಮಾರಾಟ ಹೊಂದಿದ್ದ ಹೊಸ ಸ್ಕೂಟರ್ ಈ ವರ್ಷದ ಆರಂಭದಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಮಾರ್ಚ್ ಅವಧಿಯಲ್ಲಿ ಕೇವಲ 90 ಯುನಿಟ್ ಮಾರಾಟಗೊಂಡಿದ್ದ ಚೇತಕ್ ಇವಿ ಮಾದರಿಯು ಏಪ್ರಿಲ್‌ನಲ್ಲಿ 508 ಯುನಿಟ್ ಮಾರಾಟಗೊಳ್ಳುವ ಮೂಲಕ ಬಿಡುಗಡೆ ನಂತರ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಉತ್ಪಾದನೆಯನ್ನು ಸಹ ಹೆಚ್ಚಿಸಲಾಗಿದೆ.

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಹೊಸ ಸ್ಕೂಟರ್ ಬಿಡುಗಡೆಗೊಂಡಿದ್ದ ಆರಂಭದಲ್ಲಿ ಬೆಂಗಳೂರು ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಇದೀಗ ಚೆನ್ನೈ ಮತ್ತು ಹೈದ್ರಾಬಾದ್‌ನಲ್ಲೂ ಮಾರಾಟ ಆರಂಭಗೊಂಡಿದ್ದು, ಬಜಾಜ್ ಸಹಭಾಗೀತ್ವ ಕಂಪನಿಯಾದ ಕೆಟಿಎಂ ಡೀಲರ್ಸ್‌ಗಳ ಮೂಲಕ ಹೊಸ ಸ್ಕೂಟರ್ ಮಾರಾಟ ಮಾಡುತ್ತಿದೆ.

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಶೋರೂಂ ಪ್ರಕಾರ ರೂ. 1.42 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.44 ಲಕ್ಷ ಬೆಲೆ ಹೊಂದಿದ್ದು, ಕಳೆದ ವಾರವಷ್ಟೇ ಹೊಸ ಸ್ಕೂಟರ್ ಬೆಲೆ ಹೆಚ್ಚಳ ಮಾಡಿರುವುದು ಗ್ರಾಹಕರಿಗೆ ತುಸು ಹೊರೆಎನ್ನಿಸಲಿದೆ.

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಚೇತಕ್ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್‍ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಹಾಗೆಯೇ ಹೊಸ ಸ್ಕೂಟರ್‌‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍‍ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಏಪ್ರಿಲ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಗಮನಸೆಳೆದ ಬಜಾಜ್ ಚೇತಕ್ ಇವಿ

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.

Article Published On: Friday, May 21, 2021, 8:45 [IST]
English summary
Bajaj Chetak Register Highest Monthly Sales. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+