ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಬಜಾಜ್ ಆಟೋ ಕಂಪನಿಯು ಸದ್ಯ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮೂಲಕ ಇವಿ ವಾಹನ ಉದ್ಯಮದಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದು, ಕಂಪನಿಯು ಇವಿ ವಾಹನಗಳ ಅಭಿವೃದ್ದಿಯಲ್ಲಿ ಹೊಸ ಬದಲಾವಣೆಗಾಗಿ ಬೃಹತ್ ಪ್ರಮಾಣದ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಚೇತಕ್ ಇವಿ ಬಿಡುಗಡೆಯ ನಂತರ ವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ವಿಸ್ತರಿಸುತ್ತಿರುವ ಬಜಾಜ್ ಆಟೋ ಕಂಪನಿಯು ತನ್ನ ಸಹಭಾಗೀತ್ವ ಕಂಪನಿಯಾದ ಕೆಟಿಎಂ ಡೀಲರ್ಸ್ ಮೂಲಕ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡುತ್ತಿದೆ. ಆದರೆ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹೊಸ ಯೋಜನೆ ರೂಪಿಸಿರುವ ಬಜಾಜ್ ಇವಿ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯುವ ಸಿದ್ದತೆಯಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಎಲೆಕ್ಟ್ರಿಕ್ ವಾಹನಗಳನ್ನು ಹೊಸ ಬ್ರಾಂಡ್ ಅಡಿಯಲ್ಲಿ ಅಭಿವೃದ್ದಿ ಮತ್ತು ಮಾರಾಟ ಮಾಡಲು ನಿರ್ಧರಿಸಿರುವ ಬಜಾಜ್ ಕಂಪನಿಯು ಈಗಾಗಲೇ ವಿವಿಧ ಹಂತದಲ್ಲಿ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಹೊಸ ಬ್ರಾಂಡ್ ಅಧಿಕೃತ ಹೆಸರು ಅನಾವರಣಗೊಳ್ಳಲಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಹೊಸ ಬ್ರಾಂಡ್ ಅಡಿಯಲ್ಲಿ ಎಲೆಕ್ಟ್ರಿಕ್, ಹೈಬ್ರಿಡ್ ವಾಹನಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಹೊಸ ಬ್ರಾಂಡ್ ತೆರೆಯಲು ಕಂಪನಿಯು ಆರಂಭಿಕವಾಗಿ ರೂ. 100 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಬಜಾಜ್ ಆಟೋ ಕಂಪನಿಯು ಇತ್ತೀಚೆಗೆ ತನ್ನ ಹೊಸ ಚೇತಕ್ ಇವಿ ಸ್ಕೂಟರ್ ಮಾದರಿಯನ್ನು ನಾಗಪುರ್‌ದಲ್ಲಿ ಮಾರಾಟಕ್ಕೆ ಚಾಲನೆ ನೀಡಿದ್ದು, ಇದೀಗ ಕರ್ನಾಟಕ ಮತ್ತು ಮಹಾರಾಷ್ಟ್ರದ ಮತ್ತಷ್ಟು ಹೊಸ ನಗರಗಳಲ್ಲಿ ಹೊಸ ಸ್ಕೂಟರ್ ಮಾರಾಟ ವಿಸ್ತರಿಸಲು ಸಜ್ಜಾಗಿರುವ ಬಜಾಜ್ ಕಂಪನಿಯು ಮೈಸೂರು, ಮಂಗಳೂರು ಮತ್ತು ಔರಾಂಗಾಬಾದ್ ನಗರಗಳಲ್ಲಿ ರೂ.2 ಸಾವಿರ ಮುಂಗಡ ಪಾವತಿಯೊಂದಿಗೆ ಹೊಸ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಆರಂಭಿಸಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಪೆಟ್ರೋಲ್ ಬೆಲೆ ಹೆಚ್ಚುತ್ತಿರುವ ಪರಿಣಾಮ ಹೊಸ ಸ್ಕೂಟರ್ ಖರೀದಿದಾರರು ಇವಿ ಸ್ಕೂಟರ್‌ನತ್ತ ಮುಖ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗಳು ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್-1 ಮತ್ತು ಟೈರ್-2 ನಗರಗಳಲ್ಲೂ ಇವಿ ವಾಹನ ಮಾರಾಟವನ್ನು ಕೈಗೊಳ್ಳಲು ಸಜ್ಜಾಗಿವೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಬಜಾಜ್ ಕೂಡಾ ತನ್ನ ಸಹಭಾಗಿತ್ವ ಕಂಪನಿಯಾದ ಕೆಟಿಎಂ ಶೋರೂಂಗಳ ಮೂಲಕ ಚೇತಕ್ ಇವಿ ಮಾರಾಟವನ್ನು ಹಂತ-ಹಂತವಾಗಿ ವಿವಿಧ ನಗರಗಳಿಗೆ ಮಾರಾಟ ವಿಸ್ತರಣೆ ಮಾಡುತ್ತಿದ್ದು, ಹೊಸ ಬ್ರಾಂಡ್ ನಂತರ ಪ್ರತ್ಯೇಕವಾಗಿ ಮಾರಾಟಗೊಳ್ಳಲಿವೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಇನ್ನು ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮತ್ತು ಪ್ರೀಮಿಯಂ ಎನ್ನುವ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅರ್ಬೈನ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.42 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ.1.44 ಲಕ್ಷ ಬೆಲೆ ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಬ್ರಾಂಡ್ ತೆರೆಯಲಿದೆ ಬಜಾಜ್ ಆಟೋ

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

Article Published On: Saturday, July 24, 2021, 11:32 [IST]
English summary
Bajaj EV Subsidiary To Be Setup In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+