Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡೋಮಿನಾರ್ ಬೈಕುಗಳ ಬೆಲೆ ಏರಿಕೆ ಮಾಡಿದ ಬಜಾಜ್ ಆಟೋ
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಬಜಾಜ್ ಆಟೋ ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಜಾಜ್ ಪಲ್ಸರ್ ಸರಣಿಯ ಬೈಕುಗಳ ಬೆಲೆ ಏರಿಕೆಯನ್ನು ಮಾಡಿದರು. ಇದೀಗ ಬಜಾಜ್ ತನ್ನ ಡೋಮಿನಾರ್ ಬೈಕುಗಳ ಬೆಲೆಯನ್ನು ಏರಿಕೆ ಮಾಡಿದ್ದಾರೆ.

ಭಾರತೀಯ ಮಾರುಕಟ್ಟೆಯಲ್ಲಿ ಡೋಮಿನಾರ್ ಸರಣಿಯ ಡೋಮಿನಾರ್ 400 ಮತ್ತು ಡೋಮಿನಾರ್ 250 ಎಂಬ ಎರಡು ಬೈಕುಗಳು ದುಬಾರಿಯಾಗಿವೆ. ಬೆಲೆ ಏರಿಕೆಯ ಬಳಿಕ ಡೋಮಿನಾರ್ 400 ಬೈಕಿನ ಬೆಲೆಯು ರೂ.1,99,755 ಗಳಾದರೆ. ಡೋಮಿನಾರ್ 250 ಬೈಕಿನ ಬೆಲೆಯು ರೂ.1,67,718 ಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಬಜಾಜ್ ಡೋಮಿನಾರ್ 250 ಬೈಕ್ ತನ್ನದೆ ಸರಣಿಯ ಡೋಮಿನಾರ್ 400 ಬೈಕಿನ ಮಾದರಿಯಲ್ಲಿದೆ. ಆದರೆ ಡೋಮಿನಾರ್ 250 ಬೈಕಿನಲ್ಲಿ ಕೆಲವು ಬದಲಾವಣೆಗಳನ್ನು ಹೊಂದಿದೆ. ಹೊಸ ಡೋಮಿನಾರ್ 250 ಬೈಕ್ 'ಡಿ250' ಬ್ಯಾಡ್ಜ್ ನೊಂದಿಗೆ ಕೆಂಪು ಬಣ್ಣವನ್ನು ಹೊಂದಿದೆ. ಬಜಾಜ್ ಡೋಮಿನಾರ್ 250 ಬೈಕ್ ಸ್ಪೂರ್ಟಿ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಡೋಮಿನಾರ್ 400 ಮತ್ತು ಹೊಸ ಡೋಮಿನಾರ್ 250 ನಡುವಿನ ಕೆಲವು ವ್ಯತ್ಯಾಸಗಳಿವೆ. ಇದು ಕಡಿಮೆ ವೆಚ್ಚದ ಸ್ವಿಂಗಾರ್ಮ್, ಯುಎಸ್ಡಿ ಫೋರ್ಕ್ ಮತ್ತು ವಿಭಿನ್ನ ಅಲಾಯ್ ವ್ಹೀಲ್ ವಿನ್ಯಾಸಗಳಾಗಿದೆ.

ಡೋಮಿನಾರ್ 400 ಬೈಕಿಗೆ ಹೋಲಿಸಿದರೆ ಹೊಸ ಬಜಾಜ್ ಡೋಮಿನಾರ್ 250 ಬೈಕಿನ ಟಯರ್ ಪ್ರೊಫೈಲ್ ಗಳು ಸಹ ಭಿನ್ನವಾಗಿದೆ. ಇನ್ನು ಈ ಬೈಕ್ ಡೋಮಿನಾರ್ 400 ಮಾದರಿಗಿಂತ ತೂಕ ಕಡಿಮೆಯಾಗಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಡೋಮಿನಾರ್ 400, ಬೈಕಿನಲ್ಲಿ 373.3 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್ ಕೂಲ್ಡ್, ಡಿಒಹೆಚ್‍ಸಿ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8800 ಆರ್‍ಪಿಎಂನಲ್ಲಿ 39.4 ಬಿಹೆಚ್‍ಪಿ ಪವರ್ ಮತ್ತು 7000 ಆರ್‍ಪಿಎಂನಲ್ಲಿ 35 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಕೆಟಿಎಂ 250 ಡ್ಯೂಕ್‍ನಲ್ಲಿರುವಂತಹ 248 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 26.6 ಬಿಹೆಚ್‍ಪಿ ಪವರ್ ಮತ್ತು 23.5 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಸಸ್ಪೆಂಕ್ಷನ್ ಗಳಿಗಾಗಿ ಮುಂಭಾಗದಲ್ಲಿ 37 ಎಂಎಂ ಯುಎಸ್ಡಿ ಫೋರ್ಕ್ಸ್ ಮತ್ತು ಹಿಂಭಾಗದ ಮೊನೊಶಾಕ್ ಅನ್ನು ಹೊಂದಿದೆ. ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಬಜಾಜ್ ಡೋಮಿನಾರ್ 400 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಜಾವಾ, ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಮತ್ತು ಮೊಜೊ 300 ಬೈಕ್‍ಗಳಿಗೆ ಪೈಪೋಟಿಯನ್ನು ನೀಡಿದರೆ, ಬಜಾಜ್ ಡೋಮಿನಾರ್ 250 ಮಾದರಿಯು ಸುಜುಕಿ ಜಿಕ್ಸರ್ 250 ಮತ್ತು ಯಮಹಾ ಎಫ್‌ಜೆಡ್ 25 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.