ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಬಜಾಜ್ ಆಟೋ ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಜಾಜ್ ಪಲ್ಸರ್ ಸರಣಿಯ ಬೈಕುಗಳನ್ನು ಹೊಸ ಬಣ್ಣಗಳ ಆಯ್ಕೆಯಲ್ಲಿ ಪರಿಚಯಿಸುತ್ತಿದೆ. ಇದೀಗ ತನ್ನ ಡೋಮಿನಾರ್ ಬೈಕ್ ಕೂಡ ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ.

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಡೋಮಿನಾರ್ 250 ಮತ್ತು ಡೋಮಿನಾರ್ 400 ಬೈಕ್‌ಗಳನ್ನು ನಡುವೆ ವ್ಯತ್ಯಾಸವನ್ನು ತೋರಿಸಲು ಎರಡರಲ್ಲಿಯು ಒಂದೇ ರೀತಿಯ ಬಣ್ಣಗಳನ್ನು ನೀಡಿರಲಿಲ್ಲ. ಬದಲಿಗೆ ರೆಡ್ ಮತ್ತು ಮ್ಯಾಟ್ ಗ್ರೇ-ಇಶ್ ಬ್ಲ್ಯಾಕ್ ಆಯ್ಕೆಯ ನಡುವೆ ಮಾತ್ರ ಆರಿಸಬೇಕಾಗಿತ್ತು. ಇದೀಗ ಡೋಮಿನಾರ್ 400 ಬೈಕಿನಲ್ಲಿ ಕಂಡುಬರುವ ಗ್ರೀನ್ ಮತ್ತು ಗ್ಲೊಷ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿಯು 250 ಲಭ್ಯವಿದೆ. ಈ ಹೊಸ ಬಣ್ಣಗಳ ಆಯ್ಕೆಯಲ್ಲಿ ಡೋಮಿನಾರ್ 250 ಬೈಕ್ ಡೀಲರ್ ಬಳಿ ತಲುಪಿದೆ.

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಬಜಾಜ್ ತನ್ನ ಡೋಮಿನಾರ್ ಬೈಕ್‌ಗಳ ಬೆಲೆಯನ್ನು ಇತ್ತೀಚೆಗೆ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆಯ ಬಳಿಕ ಡೋಮಿನಾರ್ 400 ಬೈಕಿನ ಬೆಲೆಯು ರೂ.2,02,755 ಗಳಾದರೆ. ಡೋಮಿನಾರ್ 250 ಬೈಕಿನ ಬೆಲೆಯು ರೂ.1,70,720 ಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಬಜಾಜ್ ಡೋಮಿನಾರ್ 250 ಬೈಕ್ ತನ್ನದೆ ಹಿರಿಯಣ್ಣ ಎಂದೇ ಹೇಳಬಹುದಾದ ಡೋಮಿನಾರ್ 400 ಬೈಕಿನ ಮಾದರಿಯಲ್ಲಿದೆ. ಆದರೆ ಡೋಮಿನಾರ್ 250 ಬೈಕಿನಲ್ಲಿ ಕೆಲವು ಬದಲಾವಣೆಗಳನ್ನು ಹೊಂದಿದೆ. ಹೊಸ ಡೋಮಿನಾರ್ 250 ಬೈಕ್ 'ಡಿ250' ಬ್ಯಾಡ್ಜ್ ನೊಂದಿಗೆ ಕೆಂಪು ಬಣ್ಣವನ್ನು ಹೊಂದಿದೆ.

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಬಜಾಜ್ ಡೋಮಿನಾರ್ 250 ಬೈಕ್ ಸ್ಪೂರ್ಟಿ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ. ಇನ್ನು ಡೋಮಿನಾರ್ 400 ಮತ್ತು ಹೊಸ ಡೋಮಿನಾರ್ 250 ನಡುವಿನ ಕೆಲವು ವ್ಯತ್ಯಾಸಗಳಿವೆ. ಇದು ಕಡಿಮೆ ವೆಚ್ಚದ ಸ್ವಿಂಗಾರ್ಮ್, ಯುಎಸ್ಡಿ ಫೋರ್ಕ್ ಮತ್ತು ವಿಭಿನ್ನ ಅಲಾಯ್ ವ್ಹೀಲ್ ವಿನ್ಯಾಸಗಳಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಡೋಮಿನಾರ್ 400 ಬೈಕಿಗೆ ಹೋಲಿಸಿದರೆ ಹೊಸ ಬಜಾಜ್ ಡೋಮಿನಾರ್ 250 ಬೈಕಿನ ಟಯರ್ ಪ್ರೊಫೈಲ್‍ ಗಳು ಕೂಡ ಭಿನ್ನವಾಗಿದೆ. ಇನ್ನು ಈ ಬೈಕ್ ಡೋಮಿನಾರ್ 400 ಮಾದರಿಗಿಂತ ತೂಕ ಕಡಿಮೆ ಇದೆ.

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಕೆಟಿಎಂ 250 ಡ್ಯೂಕ್‍‍ನಲ್ಲಿರುವಂತಹ 248 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 26.6 ಬಿಹೆಚ್‍ಪಿ ಪವರ್ ಮತ್ತು 23.5 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಜೋಡಿಸಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 37 ಎಂಎಂ ಯುಎಸ್ಡಿ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ನೀಡಿದ್ದಾರೆ.

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಇನ್ನು ಸುರಕ್ಷತಾ ದೃಷ್ಠಯಿಂದ ಪ್ರಮುಖವಾದ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಹೊಸ ಬಣ್ಣಗಳ ಆಯ್ಕೆಯಲ್ಲಿ ಡೀಲರ್ ಬಳಿ ಕಾಣಿಸಿಕೊಂಡ ಬಜಾಜ್ ಡೋಮಿನಾರ್ 250 ಬೈಕ್

ಬಜಾಜ್ ಡೋಮಿನಾರ್ 400 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜಾವಾ, ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350 ಮತ್ತು ಮೊಜೊ 300 ಬೈಕ್‍‍ಗಳಿಗೆ ಪೈಪೋಟಿಯನ್ನು ನೀಡಿದರೆ, ಬಜಾಜ್ ಡೋಮಿನಾರ್ 250 ಮಾದರಿಯು ಸುಜುಕಿ ಜಿಕ್ಸರ್ 250 ಮತ್ತು ಯಮಹಾ ಎಫ್‌ಜೆಡ್ 25 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Image Courtesy: Nick Zeek

Most Read Articles

Kannada
English summary
The Bajaj Dominar 250 Now Gets All The Colours Of The Dominar 400. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X