Just In
- 45 min ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 2 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
- 3 hrs ago
ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ
Don't Miss!
- News
ಕರ್ನಾಟಕದಲ್ಲಿ ಕ್ರಿಪ್ಟೋಕರೆನ್ಸಿ ಮೇಲೆ ಟೆಕ್ಕಿಗಳಿಂದ ಹೂಡಿಕೆ ಹೆಚ್ಚು
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಣ್ಣದ ಆಯ್ಕೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ಬಜಾಜ್ ಪಲ್ಸರ್ 180 ಬೈಕ್
ಬಜಾಜ್ ಆಟೋ ಕಂಪನಿಯ 2021ರ ಪಲ್ಸರ್ 180 ಬೈಕ್ ಹೊಸ ಬ್ಲೂ ಬಣ್ಣದ ಆಯ್ಕೆಯನ್ನು ಪಡೆಯಲಿದೆ. ಈ ಹೊಸ ಬ್ಲೂ ಬಣ್ಣದ ಆಯ್ಕೆಯೊಂದಿಗೆ ಸ್ಪೋರ್ಟಿ ಗ್ರಾಫಿಕ್ಸ್ ಈ ಪಲ್ಸರ್ 180 ಬೈಕಿನ ಲುಕ್ ಅನ್ನು ಹೆಚ್ಚಿಸಿದೆ. ಶೀಘ್ರದಲ್ಲೇ ಈ ಹೊಸ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಪಲ್ಸರ್ 180 ಬೈಕ್ ಕಪ್ಪು ಕೆಂಪು ಬಣ್ಣದ ಆಯ್ಕೆಯಲ್ಲಿ ಲಭ್ಯವಿದೆ. 2021ರ ಬಜಾಜ್ ಪಲ್ಸರ್ 180 ಬೈಕಿನ ಹೊಸ ಡಾರ್ಕ್ ಮ್ಯಾಟ್ ಬ್ಲೂ ಬಣ್ಣವು ರಿಚ್ ಲುಕ್ ಅನ್ನು ನೀಡಿದೆ. ಈ ಬೈಕ್ ಹೊಸ ಡ್ಯುಯಲ್-ಟೋನ್ ಕಪ್ಪು ಮತ್ತು ಬಿಳಿ ಗ್ರಾಫಿಕ್ಸ್ ಪಡೆಯುತ್ತದೆ. ಹೆಡ್‌ಲ್ಯಾಂಪ್ ಕೌಲ್, ಎಂಜಿನ್ ಕೌಲ್, ಇಂಧನ ಟ್ಯಾಂಕ್, ಸೈಡ್ ಪ್ಯಾನೆಲ್‌ಗಳು ಮತ್ತು ಹಿಂಭಾಗದ ಟೈಲ್ ವಿಭಾಗದಲ್ಲಿ ಇವುಗಳನ್ನು ಕಾಣಬಹುದು.

ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾದರಿಗೆ ಹೋಲಿಸಿದರೆ ಹೊಸ ಗ್ರಾಫಿಕ್ಸ್ ಉತ್ತಮವಾಗಿ ಕಾಣುತ್ತದೆ.ಮತ್ತೊಂದು ಕಾಸ್ಮೆಟಿಕ್ ಅಪ್‌ಡೇಟ್ ಮುಂಭಾಗದ ಮಡ್‌ಗಾರ್ಡ್‌ನಲ್ಲಿ ಆಕರ್ಷಕ ಸ್ಟಿಕ್ಕರ್ ಆಗಿದೆ. ಒಟ್ಟಾರೆ ಥೀಮ್‌ಗೆ ಅನುಗುಣವಾಗಿ, ಬೈಕು ಬಿಳಿ ಬಣ್ಣದ ಅಲಾಯ್ ವ್ಹೀಲ್ ಡೆಕಲ್‌ಗಳನ್ನು ಸಹ ಪಡೆಯುತ್ತದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ಹೊಸ ಬೈಕಿನ ಎಕ್ಸಾಸ್ಟ್ ಹೀಟ್ ಶಿಲ್ಡ್ ಬ್ಲ್ಯಾಕ್ ಔಟ್ ಆಗಿದೆ. ಈ ಎಲ್ಲಾ ಬದಲಾವಣೆಗಳು ಬೈಕನ್ನು ಮತ್ತಷ್ಟು ಆಕರ್ಷಕವಾಗಿಸಿದೆ. ಈ ಬದಲಾವಣೆಗಳನ್ನು ಹೊರತುಪಡಿಸಿದರೆ, ಹೊಸ ಪಲ್ಸರ್ 180 ಬೈಕ್ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮಾದರಿಯಾಗಿದೆ.

ಹೊಸ ಬಜಾಜ್ ಪಲ್ಸರ್ ಬೈಕಿನ ಡಿಜಿಟಲ್-ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕನ್ಸೋಲ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಡಿಜಿಟಲ್-ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನಲ್ಲಿ ಬೈಕಿನ ವೇಗ, ಇಂಧನ ದಕ್ಷತೆ, ಇಂಧನ ಎಷ್ಟೂ ದೂರ ಸಾಗಲು ಇದೆ, ಸೈಡ್-ಸ್ಟ್ಯಾಂಡ್ ಅಲರ್ಟ್, ಓಡೋಮೀಟರ್ ಸರ್ವಿಸ್ ರಿಮೈಂಡರ್ ಮತ್ತು ಅನೇಕ ಮಾಹಿತಿಗಳನ್ನು ಪ್ರದರ್ಶಿಸುತ್ತದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಈ ಬಜಾಜ್ ಪಲ್ಸರ್ 180 ಬೈಕಿನಲ್ಲಿ ಅದೇ 178.6 ಸಿಸಿ ಏರ್-ಕೂಲ್ಡ್, ಇಂಧನ-ಇಂಜೆಕ್ಟ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17 ಬಿಹೆಚ್‍ಪಿ ಪವರ್ ಮತ್ತು 6,500 ಆರ್‌ಪಿಎಂನಲ್ಲಿ 14.52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಟ್ರಾನ್ಸ್‌ಮಿಷನ್‌ಗೆ ಜೋಡಿಸಲಾಗಿದೆ.

ಹೊಸ ಬಜಾಜ್ ಪಲ್ಸರ್ 180 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಅಬ್ಸಾರ್ ಗಳ ಸೆಟಪ್ ಅನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ ಮುಂಭಾಗದ 280 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಎಬಿಎಸ್ ಸಿಸ್ಟಂ ಅನ್ನು ನೀಡಿದೆ.

ಬಜಾಜ್ ಪಲ್ಸರ್ 180 ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍ಟಿಆರ್ 180 ಮತ್ತು ಹೋಂಡಾ ಹಾರ್ನೆಟ್ 2.0 ಬೈಕುಗಳಿಗೆ ಪೈಪೋಟಿ ನೀಡುತ್ತದೆ. ಈ ಹೊಸ ಪಲ್ಸರ್ 180 ಬೈಕ್ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿರುವುದರಿಂದ ಶೀಘ್ರದಲ್ಲೇ ಬಿಡುಯಾಗಬಹುದು.
Image Courtesy: Jet wheels