ಹೊಸ ಪಲ್ಸರ್ ಆರ್‍ಎಸ್200 ಬೈಕಿನ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಬಜಾಜ್
ಜನಪ್ರಿಯ ಬೈಕ್ ತಯಾರಕ ಕಂಪನಿಯಾದ ಬಜಾಜ್ ಆಟೋ ತನ್ನ ಹೊಸ ಪಲ್ಸರ್ ಆರ್‍ಎಸ್200 ಬೈಕಿನ ಆಕರ್ಷಕ ಟಿವಿಸಿಯನ್ನು ಬಿಡುಗಡೆಗೊಳಿಸಿದೆ. ಇನ್ನು ಈ ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.52 ಲಕ್ಷಗಳಾಗಿದೆ.

ಬಜಾಜ್ ಪಲ್ಸರ್ ಆರ್‍ಎಸ್200 ಬೈಕ್ ಮೊದಲ ಬಾರಿಗೆ ಮಾರಾಟವಾದಾಗಿನಿಂದ ಅದರ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಈ ಬೈಕು ಸಂಪೂರ್ಣ ಫೇರ್ಡ್ ಸ್ಟೈಲಿಂಗ್ ಅನ್ನು ಮುಂದುವರೆಸಿದೆ, ಬಜಾಜ್ ಪಲ್ಸರ್ ಆರ್‍ಎಸ್200 ಬೈಒಕಿನಲ್ಲಿ ಡ್ಯುಯಲ್-ಪ್ರೊಜೆಕ್ಟರ್ ಹೆಡ್ ಸೆಟಪ್, ಟ್ವಿನ್ ರನ್ನಿಂಗ್ ಎಲ್ಇಡಿ ಡಿಆರ್ಎಲ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಅನ್ನು ಒಳಗೊಂಡಿವೆ.

ಹೊಸ ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನಲ್ಲಿ 199.5 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್, 4-ವಾಲ್ವ್, ಫ್ಯೂಯಲ್-ಇಂಜೆಕ್ಟ್, ಟ್ರಿಪಲ್ ಸ್ಪಾರ್ಕ್, ಡಿಟಿಎಸ್-ಐ ಎಂಜಿನ್ ಅನ್ನು ಅಳವಡಿಸಳಾಗಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಈ ಎಂಜಿನ್ 9,750 ಆರ್‌ಪಿಎಂನಲ್ಲಿ 24.15 ಬಿಹೆಚ್‍ಪಿ ಪವರ್ ಮತ್ತು 8,000 ಆರ್‌ಪಿಎಂನಲ್ಲಿ 18.7 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಪಲ್ಸರ್ ಆರ್‍ಎಸ್ 200 ಬೈಕಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 141 ಮೀ.ಮೀ ಗಳಾಗಿದೆ.

ಹೊಸ ಪಲ್ಸರ್ ಆರ್‍ಎಸ್200 ಬೈಕಿನಲ್ಲಿರುವ ಹಾರ್ಡ್‌ವೇರ್ ಸ್ಪೆಸಿಫಿಕೇಶನ್‍ಗಳನ್ನು ತನ್ನ ಪ್ರತಿಸ್ಪರ್ಧಿ ಬೈಕುಗಳಿಗೆ ಪೈಪೋಟಿ ನೀಡುವಂತೆ ಬಜಾಜ್ ಕಂಪನಿಯು ಅಪ್‍ಗ್ರೇಡ್ ಮಾಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಬಿಎಸ್-6 ಬಜಾಜ್ ಪಲ್ಸರ್ ಆರ್‍ಎಸ್ 200 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಹೊಂದಿದೆ.

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ನೋಡುವುದಾದದರೆ ಮುಂಭಾಗದಲ್ಲಿ 300 ಎಂಎಂ ಡೀಸ್ಕ್ ಬ್ರೇಕ್ ಹಾಗೂ ಹಿಂಭಾಗದಲ್ಲಿ 230 ಎಂಎಂ ಪೆಟಲ್ ಟೈಪ್ ಡಿಸ್ಕ್ ಬ್ರೇಕ್‌ಗಳಿವೆ. ಇದರೊಂದಿಗೆ ಎಬಿಎಸ್ ಅನ್ನು ಕೂಡ ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್
ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನಲ್ಲಿ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕ್ಲಸ್ಟರ್ ನಲ್ಲಿ ಎಲ್ಇಡಿ ಟರ್ನ್ ಇಂಡಿಕೇಟರ್ಸ್, ಸರ್ವಿಸ್ ಬಗ್ಗೆಗಿನ ಮಾಹಿತಿ ಮತ್ತು ಇನ್ನಿತ ಮಾಹಿತಿಗಳನ್ನು ಪ್ರದರ್ಶಿಸುತ್ತದೆ. ಬಜಾಜ್ ಪಲ್ಸರ್ ಆರ್‍ಎಸ್ 200 ಬೈಕಿನಲ್ಲಿ ಬ್ಯಾಕ್‌ಲಿಟ್ ಸ್ವಿಚ್‌ಗಳನ್ನು ನೀಡುತ್ತದೆ.

ಬಜಾಜ್ ಪಲ್ಸರ್ ಸರಣಿಯ ಬೈಕ್‍ಗಳ ಜನಪ್ರಿಯತೆ ಕಳೆದುಕೊಂಡಿಲ್ಲ. ಹೆಚ್ಚಿನ ಯುವಕರಿಗೆ ಇಂದಿಗೂ ಪಲ್ಸರ್ ಬೈಕ್‍ಗಳ ಕ್ರೇಜ್ ಇದೆ. ಇದರಿಂದ ಬಜಾಝ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಲ್ಸರ್ ಸರಣಿಯಲ್ಲಿರುವ ಮಾದರಿಗಳನ್ನು ನವೀಕರಿಸಲಾಗುತ್ತಿದೆ. ಅಲ್ಲದೇ ಹೊಸ ಮಾದರಿಗಳನ್ನು ಪರಿಚಯಿಸಿ ಪಲ್ಸರ್ ಸರಣಿಯನ್ನು ವಿಸ್ತರಿಸಲು ಬಜಾಜ್ ಕಂಪನಿಯು ಮುಂದಾಗಿದೆ.


Click it and Unblock the Notifications