Just In
- 10 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 12 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 24 hrs ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Sports
ಐಪಿಎಲ್ 2021: ಹೈದರಾಬಾದ್ ವಿರುದ್ಧ 10 ರನ್ಗಳ ಗೆಲುವು ಸಾಧಿಸಿದ ಕೊಲ್ಕತ್ತಾ
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಂಡ 2021ರ ಬಜಾಜ್ ಪಲ್ಸರ್ ಆರ್‍ಎಸ್200 ಬೈಕ್
ದ್ವಿಚಕ್ರ ತಯಾರಕ ಕಂಪನಿಯಾದ ಬಜಾಜ್ ಆಟೋ ತನ್ನ ಪಲ್ಸರ್ ಆರ್‍ಎಸ್200 ಬೈಕನ್ನು ಹೊಸ ಬಣ್ಣಗಳು ಮತ್ತು ಗ್ರಾಫಿಕ್ಸ್ ನೊಂದಿಗೆ ಮಲೇಷ್ಯಾದಲ್ಲಿ ಬಿಡುಗಡೆಗೊಳಿಸಿದೆ. ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಪಲ್ಸರ್ ಬೈಕ್‌ಗಳು ಬಹುಜನಪ್ರಿಯತೆಯನ್ನು ಗಳಿಸಿದೆ.

ಪಲ್ಸರ್ ಬೈಕ್‌ಗಳಿಗೆ ಪ್ರತ್ಯೇಕವಾದ ಅಭಿಮಾನಿ ವರ್ಗವಿದೆ. ಬಜಾಜ್ ಪಲ್ಸರ್ ಬೈಕ್‌ಗಳು ಮಾರುಕಟ್ಟೆಯಲ್ಲಿ ಪ್ರಮುಖವಾಗಿ ಟಿವಿಎಸ್ ಅಪಾಚೆ ಬೈಕುಗಳಿಗೆ ಪೈಪೋಟಿ ನೀಡುತ್ತದೆ. ಇನ್ನು 2021ರ ಬಜಾಜ್ ಪಲ್ಸರ್ ಆರ್‍ಎಸ್200 ಬೈಕ್ ಪರ್ಲ್ ಮೆಟಾಲಿಕ್ ವೈಟ್, ಪ್ಯೂಟರ್ ಗ್ರೇ ಮತ್ತು ಬರ್ನ್ಟ್ ರೆಡ್. ಪರ್ಲ್ ಮೆಟಾಲಿಕ್ ವೈಟ್ ಮತ್ತು ಪ್ಯೂಟರ್ ಗ್ರೇ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿವೆ. ಇದರೊಂದಿಗೆ ಬರ್ನ್ಟ್ ರೆಡ್ ಬಣ್ಣದ ಮ್ಯಾಟ್ ಫಿನಿಶ್ ಪಡೆಯುತ್ತದೆ.

ಎಲ್ಲಾ ಮೂರು ಹೊಸ ಬಣ್ಣದ ಆಯ್ಕೆಗಳು ಮೂಲ ಫ್ರೇಮ್ ಮತ್ತು ಅಲಾಯ್ ವ್ಹೀಲ್ ಬಿಳಿ ಬಣ್ಣದಲ್ಲಿದೆ. ಇದರ ಜೊತೆಗೆ, ಮುಂಭಾಗ ಮತ್ತು ಹಿಂಭಾಗದ ಫೆಂಡರ್‌ಗಳು ಸ್ಪೋರ್ಟ್ ಫಾಕ್ಸ್ ಕಾರ್ಬನ್-ಫೈಬರ್ ಸ್ಟಿಕ್ಕರ್‌ಗಳನ್ನು ಹೊಂದಿದ್ದು, ಇದು ಬೈಕಿಗೆ ಪ್ರೀಮಿಯಂ ಲುಕ್ ಅನ್ನು ನೀಡಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಇದು ಸೀಟ್ ಕವರ್‌ಗಳಲ್ಲಿ ಸ್ಟ್ಯಾಂಪ್ ಮಾಡಿದ "ಪಲ್ಸರ್" ಲೋಗೊವನ್ನು ಸಹ ಪಡೆಯುತ್ತದೆ. ಹೊಸ ಬಣ್ಣಗಳು ಮತ್ತು ಗ್ರಾಫಿಕ್ಸ್ ಅನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳಿಲ್ಲ.

ಹೊಸ ಬಜಾಜ್ ಪಲ್ಸರ್ ಆರ್‍ಎಸ್200 ಬೈಕಿನಲ್ಲಿ 199.5 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್, 4-ವಾಲ್ವ್, ಫ್ಯೂಯಲ್-ಇಂಜೆಕ್ಟ್, ಟ್ರಿಪಲ್ ಸ್ಪಾರ್ಕ್, ಡಿಟಿಎಸ್-ಐ ಎಂಜಿನ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಎಂಜಿನ್ 9,750 ಆರ್‌ಪಿಎಂನಲ್ಲಿ 24.15 ಬಿಹೆಚ್‍ಪಿ ಪವರ್ ಮತ್ತು 8,000 ಆರ್‌ಪಿಎಂನಲ್ಲಿ 18.7 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಪಲ್ಸರ್ ಆರ್‍ಎಸ್ 200 ಬೈಕಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 140.8 ಕಿ.ಮೀಗಳಾಗಿದೆ.

ಬಜಾಜ್ ಆಟೋ ಕಂಪನಿಯು ಈ ಪಲ್ಸರ್ ಆರ್‍ಎಸ್200 ಬೈಕಿನಲ್ಲಿರುವ ಹಾರ್ಡ್‌ವೇರ್ ಸ್ಪೆಸಿಫಿಕೇಶನ್‍ಗಳನ್ನು ಪ್ರತಿ ಸ್ಪರ್ಧಿ ಬೈಕ್‌ಗಳಿಗೆ ಪೈಪೋಟಿ ನೀಡುವಂತೆ ಅಪ್‍ಗ್ರೇಡ್ ಮಾಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಈ ಬಜಾಜ್ ಪಲ್ಸರ್ ಆರ್‍ಎಸ್ 200 ಬೈಕಿನಲ್ಲಿ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಹೊಂದಿದೆ..

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ನೋಡುವುದಾದದರೆ ಮುಂಭಾಗದಲ್ಲಿ 300 ಎಂಎಂ ಹಾಗೂ ಹಿಂಭಾಗದಲ್ಲಿ 230 ಎಂಎಂ ಪೆಟಲ್ ಟೈಪ್ ಡಿಸ್ಕ್ ಬ್ರೇಕ್‌ಗಳನ್ನು ಅಳವಡಿಸಿದೆ. ಇದರೊಂದಿಗೆ ಎಬಿಎಸ್ ಅನ್ನು ನೀಡಲಾಗಿದೆ.

ಪಲ್ಸರ್ ಆರ್‍ಎಸ್ 200 ಬೈಕಿನಲ್ಲಿ ಎಲ್ಇಡಿ ಡಿಆರ್‍ಎಲ್ ಹೊಂದಿರುವ ಟ್ವಿನ್ ಪಾಡ್ ಪ್ರೊಜೆಕ್ಟರ್‍ಗಳು, ಎಲ್ಇಡಿ ಟೇಲ್‍ಲೈಟ್, ಬ್ಲಿಂಕರ್‍ಗಳು, ಪೂರ್ಣ ಪ್ರಮಾಣದ ಫೇರಿಂಗ್ ಡಿಸೈನ್, ಮಸ್ಕ್ಯುಲರ್ ಶೇಪ್, ಕ್ಲಿಪ್ ಆನ್ ಹ್ಯಾಂಡಲ್ ಬಾರ್ ಹಾಗೂ ಸ್ಪ್ಲಿಟ್ ಸ್ಟೈಲ್ ಸೀಟುಗಳಿವೆ.

ಬಜಾಜ್ ಪಲ್ಸರ್ ಸರಣಿಯ ಬೈಕ್‍ಗಳ ಜನಪ್ರಿಯತೆ ಕಳೆದುಕೊಂಡಿಲ್ಲ. ಹೆಚ್ಚಿನ ಯುವಕರಿಗೆ ಇಂದಿಗೂ ಪಲ್ಸರ್ ಬೈಕ್‍ಗಳ ಕ್ರೇಜ್ ಇದೆ. ಇನ್ನು ಭಾರತದಲ್ಲಿ 2021ರ ಬಜಾಜ್ ಪಲ್ಸರ್ 220ಎಫ್ ಬೈಕ್ ಕೆಲವು ಹೊಸ ಅಪ್ಡೇಟ್ ಗಳನ್ನು ಪಡೆದುಕೊಂಡಿತು. ಇದೀಗ ಹೊಸ ಬಣ್ಣದ ಆಯ್ಕೆಯೊಂದಿಗೆ ಬಜಾಜ್ ಪಲ್ಸರ್ 220ಎಫ್ ಬೈಕ್ ಡೀಲರ್ ಬಳಿ ತಲಪಲು ಪ್ರಾರಂಭವಾಗಿದೆ. ಇದರಿಂದ ಶೀಘ್ರದಲ್ಲೇ ಈ ಬೈಕ್ ಭಾರತದಲ್ಲಿ ಬಿಡುಗಡೆಯಾಗುತ್ತದೆ.