ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಭಾರತದ ಪ್ರಮುಖ ಬ್ಯಾಟರಿ ತಯಾರಕ ಕಂಪನಿಯಾದ ಒಕಾಯಾ ಗ್ರೂಪ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಕಾಲಿಟ್ಟಿರುವುದಾಗಿ ತಿಳಿಸಿದೆ. ಕಂಪನಿಯು ಇನ್ನು ಮುಂದೆ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವುದಾಗಿ ತಿಳಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದಿಸಲು ಒಕಾಯಾ ಗ್ರೂಪ್ ಹಿಮಾಚಲ ಪ್ರದೇಶ ಹಾಗೂ ಹರಿಯಾಣದಲ್ಲಿ ಉತ್ಪಾದನಾ ಘಟಕಗಳನ್ನು ತೆರೆಯುತ್ತಿದೆ. 2023ರಿಂದ 2025ರವರೆಗೆ ರಾಜಸ್ಥಾನದಲ್ಲಿ ಮೂರು ಹೆಚ್ಚುವರಿ ಉತ್ಪಾದನಾ ಘಟಕಗಳನ್ನು ತೆರೆಯಲು ಕಂಪನಿಯು ನಿರ್ಧರಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಒಕಾಯಾ ಕಂಪನಿಯು ಇತ್ತೀಚಿಗೆ ಏವಿಯನ್ ಐಕ್ಯೂ ಹಾಗೂ ಕ್ಲಾಸಿಕ್ ಐಕ್ಯೂ ಎಂಬ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು ಭಾರತದ ರಸ್ತೆಗೆ ಅಗತ್ಯವಿರುವ ಎಲ್ಲಾ ತಂತ್ರಜ್ಞಾನಗಳನ್ನು ಹೊಂದಿವೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಈ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ರೂ.39,999ಗಳಿಂದ ರೂ.60,000ಗಳಾಗಿದೆ. ಒಕಾಯಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಭಾರತದಾದ್ಯಂತ ಮಾರಾಟಕ್ಕೆ ಲಭ್ಯವಿರಲಿವೆ. ಈ ಸ್ಕೂಟರ್‌ಗಳ ಬಿಡುಗಡೆಯ ಬಗ್ಗೆ ಒಕಾಯಾ ಪವರ್ ಗ್ರೂಪ್'ನ ವ್ಯವಸ್ಥಾಪಕ ನಿರ್ದೇಶಕರಾದ ಅನಿಲ್ ಗುಪ್ತಾ ಮಾತನಾಡಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ನಾವು ಭಾರತ ಹಾಗೂ ವಿದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಎರಡು ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದೇವೆ. ಭವಿಷ್ಯದಲ್ಲಿ ಒಕಾಯಾ ಕಂಪನಿಯು ಆಕರ್ಷಕವಾದ ಎಲೆಕ್ಟ್ರಿಕ್ ಬೈಕ್ ಹಾಗೂ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಈ ವಾಹನಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ದೇಶಾದ್ಯಂತ ಶೋರೂಂ ಹಾಗೂ ಸರ್ವೀಸ್ ಸೆಂಟರ್'ಗಳನ್ನು ತೆರೆಯುವ ಗುರಿ ಹೊಂದಿದ್ದೇವೆ. ಈ ಹಣಕಾಸು ವರ್ಷದೊಳಗೆ ಈ ವಿಭಾಗದಲ್ಲಿ ನಾಲ್ಕು ವಾಹನಗಳನ್ನು ಬಿಡುಗಡೆಗೊಳಿಸುವ ಉದ್ದೇಶವನ್ನು ಹೊಂದಿದ್ದೇವೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಭಾರತದಾದ್ಯಂತ ಶೋರೂಂಗಳನ್ನು ತೆರೆಯುವ ಮೂಲಕ, 2025ರ ವೇಳೆಗೆ ಭಾರತದ ರಸ್ತೆಗಳಲ್ಲಿ ಒಂದು ಕೋಟಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿರ ಬೇಕು ಎಂಬ ಕೇಂದ್ರ ಸರ್ಕಾರದ ಗುರಿಯಲ್ಲಿ ನಾವು ಕೈಜೋಡಿಸಲಿದ್ದೇವೆ ಎಂದು ಅವರು ಹೇಳಿದರು.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಏವಿಯನ್ ಐಕ್ಯೂ ಹಾಗೂ ಕ್ಲಾಸಿಕ್ ಐಕ್ಯೂ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವ ಮೂಲಕ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಎರಡು ಕಸ್ಟಮರ್ ಎಕ್ಸ್ ಪಿರಿಯನ್ಸ್ ಕೇಂದ್ರಗಳನ್ನು ತೆರೆಯಲಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಒಕಾಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನೆ ಹಾಗೂ ಮಾರಾಟದಲ್ಲಿ ಎದುರಾಗುತ್ತಿರುವ ಮೂರು ಪ್ರಮುಖ ಸಮಸ್ಯೆಗಳನ್ನು ಗುರುತಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಗುಣಮಟ್ಟದ ಬಿಡಿಭಾಗ ಹಾಗೂ ಸರ್ವೀಸ್ ಕೊರತೆ, ಸರಿಯಾದ ಮೂಲಸೌಕರ್ಯಗಳ ಕೊರತೆ ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಗಳಿಗೆ ಧನಸಹಾಯ - ಇವು ಒಕಾಯಾ ಕಂಪನಿಯು ಗುರುತಿಸಿರುವ ಮೂರು ಪ್ರಮುಖ ಸಮಸ್ಯೆಗಳಾಗಿವೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿದ ಖ್ಯಾತ ಬ್ಯಾಟರಿ ತಯಾರಕ ಕಂಪನಿ

ಒಕಾಯಾ ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬ್ಯಾಟರಿ, ಎಲೆಕ್ಟ್ರಾನಿಕ್ಸ್ ಹಾಗೂ ಸಾಫ್ಟ್‌ವೇರ್ ಬಗ್ಗೆ ವಿಶ್ವಾಸ ಹೊಂದಿದೆ. ಸುಮಾರು 35 ವರ್ಷಗಳಿಂದ ಬ್ಯಾಟರಿ ತಯಾರಿಕೆಯಲ್ಲಿ ತೊಡಗಿರುವ ಒಕಾಯಾ ಗ್ರೂಪ್ ತಮಿಳುನಾಡಿನಲ್ಲಿ ಉತ್ಪಾದನಾ ಘಟಕವನ್ನು ಹೊಂದಿದೆ.

Most Read Articles

Kannada
English summary
Battery manufacturer Okaya power group launches two electric scooters in India. Read in Kannada.
Story first published: Saturday, July 10, 2021, 11:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X