ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಬೆನೆಲ್ಲಿ ಇಂಡಿಯಾ ಕಂಪನಿಯು ಪ್ರೀಮಿಯಂ ಬೈಕ್ ಮಾರಾಟದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ವಿಧಿಸಲಾಗಿರುವ ಲಾಕ್‌ಡೌನ್ ಪರಿಣಾಮ ಕಂಪನಿಯು ತನ್ನ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಆಫರ್ ನೀಡಿದೆ.

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಲಾಕ್‌ಡೌನ್ ಅವಧಿಯಲ್ಲಿ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಬಹುತೇಕ ವಾಹನ ತಯಾಕರ ಕಂಪನಿಗಳು ವಿಸ್ತರಣೆ ಮಾಡಿದ್ದು, ಹೊಸ ವಾಹನಗಳ ನಿಗದಿತ ಅವಧಿಯ ಸೇವೆಗಳನ್ನು ಪಡೆಯಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ವಾರಂಟಿ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳಲ್ಲಿ ಸಾಕಷ್ಟು ಅಡೆತಡೆಗಳು ಉಂಟಾಗುತ್ತಿವೆ.

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಆದರೆ ಲಾಕ್‌ಡೌನ್ ಅವಧಿಯಲ್ಲಿ ಮುಕ್ತಾಯಗೊಳ್ಳಲಿರುವ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳದ ವಾಹನಗಳ ಸ್ಟ್ಯಾಂಡರ್ಡ್ ವಾರಂಟಿ ಆಫರ್ ಮುಗಿದುಹೋಗಲಿದ್ದು, ವಾರಂಟಿ ಅವಧಿ ಮುಕ್ತಾಯದಿಂದ ಉಚಿತ ಸೇವೆಗಳನ್ನು ಕಳೆದುಕೊಳ್ಳಲಿರುವ ಗ್ರಾಹಕರಿಗೆ ಬೆನೆಲ್ಲಿ ಕಂಪನಿಯು ವಾರಂಟಿ ಹೆಚ್ಚಿಸಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಬೇಕಿರುವ ಹೊಸ ಬೈಕ್‌ಗಳ ವಾರಂಟಿ ಅವಧಿಯನ್ನು ಜುಲೈ 31ರ ತನಕ ಮುಂದೂಡಲಾಗಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ವಾರಂಟಿ ಮುಕ್ತಾಯಗೊಳ್ಳುವುದನ್ನು ತಪ್ಪಿಸಲು ವಾರಂಟಿ ವಿಸ್ತರಿಸಲಾಗಿದೆ.

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಇನ್ನು ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳೊಂದಿಗೆ ಕಳೆದ ವರ್ಷದ ಬೈಕ್ ಮಾರಾಟದಲ್ಲಿ ಬರೋಬ್ಬರಿ ಶೇ. 103ರಷ್ಟು ಬೆಳವಣಿಗೆ ಸಾಧಿಸಿದ್ದು, ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಆವೃತ್ತಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳತ್ತಿದೆ. ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಬೈಕ್ ಮಾದರಿಗಳೊಂದಿಗೆ ಮಾರಾಟ ಮಳಿಗೆಗಳನ್ನು ಸಹ ವಿಸ್ತರಿಸುತ್ತಿದ್ದು, ಕಳೆದ 1 ವರ್ಷದಲ್ಲಿ ಸುಮಾರು 26 ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್ 1 ಮತ್ತು ಟೈರ್ 2 ನಗರಗಳಲ್ಲೂ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಬೈಕ್ ಉತ್ಪನ್ನಗಳನ್ನು ಸಹ ಹೆಚ್ಚಿಸುತ್ತಿದ್ದು, ಹೌರಾ ತೆರೆಯಲಾಗಿರುವ ಹೊಸ ಶೋರೂಂನಲ್ಲಿ ಬೈಕ್ ಮಾರಾಟ ಸೌಲಭ್ಯದೊಂದಿಗೆ ಕೆಫೆ ಜೋನ್, ಆಕ್ಸೆಸರಿಸ್‌ಗಾಗಿ ಪ್ರತ್ಯೇಕ ವಿಭಾಗಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಬೆನೆಲ್ಲಿ ಕಂಪನಿಯು ಸದ್ಯ ಟಿಆರ್‌ಕೆ 502, ಟಿಆರ್‌ಕೆ 502ಎಕ್ಸ್, ಟಿಆರ್‌ಕೆ 505 ಎಕ್ಸ್, ಲಿಯೊನ್ಸಿನೊ 500, 302 ಎಸ್, 302 ಆರ್ ಮತ್ತು ಇತ್ತೀಚೆಗೆ ಬಿಡುಗಡೆಯಾದ ಇಂಪೀರಿಯರ್ 400 ಬಿಎಸ್-6 ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಬೈಕ್ ಮಾದರಿಗಳ ಪೈಕಿ ಇಂಪೀರಿಯರ್ 400 ಕ್ಲಾಸಿಕ್ ಬೈಕ್ ಮಾದರಿಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿರುವ ಹೊಸ ಬೈಕ್ ಮಾದರಿಯು ಹೊಸ ಮಾರಾಟ ಮಳಿಗೆಗಳಿಂದಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ವಿವಿಧ ಬೈಕ್ ಮಾದರಿಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಬೆನೆಲ್ಲಿ

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಾಹಾವೀರ್ ಗ್ರೂಪ್ ಜೊತೆಗೂಡಿ ಕಾರ್ಯನಿರ್ವಹಿಸುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಮಧ್ಯಮ ಕ್ರಮಾಂಕದ ಸ್ಟ್ರೀಟ್ ಬೈಕ್ ಮಾದರಿಗಳೊಂದಿಗೆ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದು, ಹೊಸ ಉತ್ಪನ್ನಗಳೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳ ಬಳಕೆಗೆ ಆದ್ಯತೆ ನೀಡುತ್ತಿದೆ.

More from DriveSpark

Article Published On: Thursday, May 20, 2021, 23:12 [IST]
English summary
Benelli Extends Free Service And Warranty Validity. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+