Just In
- 56 min ago Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- 13 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 14 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 15 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- News Bengaluru-Mysuru Expressway: ಪ್ರಯಾಣಿಕರೇ ಗಮನಿಸಿ, ಏಪ್ರಿಲ್ 18 & 19ರಂದು ಈ ಮಾರ್ಗಗಳಲ್ಲಿ ಬರುವ ಮುನ್ನ ಎಚ್ಚರ..
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Movies ಅನುಷ್ಕಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಯಾಕೆ ಸಿನಿಮಾ ಮಾಡ್ತಿಲ್ಲಾ? ನಿರ್ದೇಶಕರಿ ಕಂಡೀಷನ್ ಹಾಕ್ತಿದ್ದಾರಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
40ನೇ ಪ್ರೀಮಿಯಂ ಬೈಕ್ ಶೋರೂಂಗೆ ಭರ್ಜರಿಯಾಗಿ ಚಾಲನೆ ನೀಡಿದ ಬೆನೆಲ್ಲಿ ಇಂಡಿಯಾ
ಪ್ರೀಮಿಯಂ ಬೈಕ್ ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯ ಗ್ರಾಹಕರ ಬೇಡಿಕೆಯೆಂತೆ ಹೊಸ ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಿಸುತ್ತಿದ್ದು, ಇತ್ತೀಚೆಗೆ ಕಂಪನಿಯು ಪುಣೆಯಲ್ಲಿ ತನ್ನ 40ನೇ ಶೋರೂಂಗೆ ಚಾಲನೆ ನೀಡಿತು.
ಕೋವಿಡ್ ಪರಿಣಾಮ ಆರ್ಥಿಕ ಸಂಕಷ್ಟದ ನಡುವೆಯೂ ಬೆನೆಲ್ಲಿ ಇಂಡಿಯಾ ಕಳೆದ ವರ್ಷದ ಬೈಕ್ ಮಾರಾಟದಲ್ಲಿ ಬರೋಬ್ಬರಿ ಶೇ. 103ರಷ್ಟು ಬೆಳವಣಿಗೆ ಸಾಧಿಸಿದ್ದು, ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಆವೃತ್ತಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳತ್ತಿದೆ. ಈ ಹಿನ್ನಲೆಯಲ್ಲಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಬೈಕ್ ಮಾದರಿಗಳೊಂದಿಗೆ ಮಾರಾಟ ಮಳಿಗೆಗಳನ್ನು ಸಹ ವಿಸ್ತರಿಸುತ್ತಿದ್ದು, ಇಂದು ತನ್ನ 40ನೇ ಮಾರಾಟ ಮಳಿಗೆಗೆ ಭರ್ಜರಿ ಚಾಲನೆ ನೀಡಿದೆ.
2020ರ ಆರಂಭದಲ್ಲಿ ಕೇವಲ ಬೆರಳಣೆಯಷ್ಟು ಮಾರಾಟ ಮಳಿಗೆಗಳ ಸೌಲಭ್ಯ ಹೊಂದಿದ್ದ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳ ಜೊತೆಗೆ ಹೂಡಿಕೆ ಪ್ರಮಾಣವನ್ನು ಹೆಚ್ಚಿಸುವುದರೊಂದಿಗೆ ಕಳೆದ 1 ವರ್ಷದಲ್ಲಿ 25 ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.
ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್ 1 ಮತ್ತು ಟೈರ್ 2 ನಗರಗಳಲ್ಲೂ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಬೈಕ್ ಉತ್ಪನ್ನಗಳನ್ನು ಸಹ ಹೆಚ್ಚಿಸುತ್ತಿದ್ದು, ಪುಣೆಯಲ್ಲಿ ತೆರೆಯಲಾಗಿರುವ ಹೊಸ ಶೋರೂಂನಲ್ಲಿ ಬೈಕ್ ಮಾರಾಟ ಸೌಲಭ್ಯದೊಂದಿಗೆ ಕೆಫೆ ಜೋನ್, ಆಕ್ಸೆಸರಿಸ್ಗಾಗಿ ಪ್ರತ್ಯೇಕ ವಿಭಾಗಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದೆ.
ಇನ್ನು ಬೆನೆಲ್ಲಿ ಕಂಪನಿಯು ಸದ್ಯ ಟಿಆರ್ಕೆ 502, ಟಿಆರ್ಕೆ 505 ಎಕ್ಸ್, ಲಿಯೊನ್ಸಿನೊ 500, 302 ಎಸ್, 302 ಆರ್ ಮತ್ತು ಇತ್ತೀಚೆಗೆ ಬಿಡುಗಡೆಯಾದ ಇಂಪೀರಿಯರ್ 400 ಬಿಎಸ್-6 ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಬೈಕ್ ಮಾದರಿಗಳ ಪೈಕಿ ಇಂಪೀರಿಯರ್ 400 ಕ್ಲಾಸಿಕ್ ಬೈಕ್ ಮಾದರಿಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.
ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿರುವ ಹೊಸ ಬೈಕ್ ಮಾದರಿಯು ಹೊಸ ಮಾರಾಟ ಮಳಿಗೆಗಳಿಂದಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಾಹಾವೀರ್ ಗ್ರೂಪ್ ಜೊತೆಗೂಡಿ ಕಾರ್ಯನಿರ್ವಹಿಸುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಮಧ್ಯಮ ಕ್ರಮಾಂಕದ ಸ್ಟ್ರೀಟ್ ಬೈಕ್ ಮಾದರಿಗಳೊಂದಿಗೆ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂಪೀರಿಯಲ್ 400 ನಂತರ ನಂತರ ಮತ್ತಷ್ಟು ಹೊಸ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ಹಾಗೆಯೇ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳ ಬಳಕೆಗೆ ಆದ್ಯತೆ ನೀಡುತ್ತಿದ್ದು, ಹೊಸ ಯೋಜನೆಯ ಪರಿಣಾಮ ಬೈಕ್ ಉತ್ಪಾದನಾ ವೆಚ್ಚದಲ್ಲಿ ಸಾಕಷ್ಟು ಇಳಿಕೆಯಾಗಿರುವುದನ್ನು ಒಪ್ಪಿಕೊಂಡಿದೆ.
ಆತ್ಮ ನಿರ್ಭರ ಭಾರತ ಯೋಜನೆ ಅಡಿ ಹಲವು ವಾಹನ ಉತ್ಪಾದನಾ ಕಂಪನಿಗಳು ಸ್ಥಳೀಯವಾಗಿ ಲಭ್ಯವಾಗುವ ಆಟೋ ಬಿಡಿಭಾಗಗಳಿಗೆ ಆದ್ಯತೆ ನೀಡುತ್ತಿರುವ ಪರಿಣಾಮ ಉತ್ಪಾದನಾ ವೆಚ್ಚದಲ್ಲಿ ಇಳಿಕೆ ಕಂಡುಬರುತ್ತಿದ್ದು, ಬೆನೆಲ್ಲಿ ಇಂಡಿಯಾ ಕಂಪನಿಯು ಸಹ ತನ್ನ ಇಂಪೀರಿಯಲ್ 400 ಕ್ಲಾಸಿಕ್ ಬೈಕಿನ ಬೆಲೆಯಲ್ಲಿ ರೂ.10 ಸಾವಿರ ಇಳಿಕೆ ಮಾಡುವ ಮೂಲಕ ಕೇಂದ್ರದ ಹೊಸ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!
ಬೆನೆಲ್ಲಿ ಕಂಪನಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 1.99 ಲಕ್ಷ ಬೆಲೆ ಹೊಂದಿದ್ದ ಇಂಪೀರಿಯಲ್ 400 ಕ್ಲಾಸಿಕ್ ಬೈಕಿನ ಬೆಲೆಯನ್ನು ರೂ. 1.89 ಲಕ್ಷಕ್ಕೆ ಇಳಿಕೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಭಾರತದಲ್ಲೇ ಪೂರ್ಣ ಪ್ರಮಾಣ ಉತ್ಪಾದನೆಯಾದ ವಿವಿಧ ಹೊಸ ಬೈಕ್ಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.