Just In
- 12 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 13 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 14 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 14 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ವರ್ಷದಲ್ಲಿ 20ಕ್ಕೂ ಹೆಚ್ಚು ಹೊಸ ಬೈಕ್ ಶೋರೂಂ ತೆರೆದ ಬೆನೆಲ್ಲಿ ಇಂಡಿಯಾ
ಬೆನೆಲ್ಲಿ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಬೈಕ್ ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಿಸುತ್ತಿರುವುದು ಹೊಸ ಬೈಕ್ ಮಾರಾಟದಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.
ಕರೋನಾ ವೈರಸ್ನಿಂದಾದ ಆರ್ಥಿಕ ಸಂಕಷ್ಟದ ನಡುವೆಯೂ ಬೆನೆಲ್ಲಿ ಇಂಡಿಯಾ ಕಂಪನಿಯು ಕಳೆದ ವರ್ಷದ ಬೈಕ್ ಮಾರಾಟದಲ್ಲಿ ಬರೋಬ್ಬರಿ ಶೇ. 103ರಷ್ಟು ಬೆಳವಣಿಗೆ ಸಾಧಿಸಿದ್ದು, ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಆವೃತ್ತಿಯು ಬೆನೆಲ್ಲಿ ಬೈಕ್ ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ಕಂಪನಿಯು ಮತ್ತಷ್ಟು ಹೊಸ ಬೈಕ್ ಮಾದರಿಗಳೊಂದಿಗೆ ಮಾರಾಟ ಮಳಿಗೆಗಳನ್ನು ವಿಸ್ತರಿಸುತ್ತಿದ್ದು, ತಮಿಳುನಾಡಿನ ವೆಲ್ಲೂರ್ನಲ್ಲಿ ಇಂದು ತನ್ನ 38ನೇ ಮಾರಾಟ ಮಳಿಗೆಯನ್ನು ಆರಂಭಿಸಿತು.
ಗ್ರಾಹಕರ ಬೇಡಿಕೆ ಬೇಡಿಕೆಗೆ ಅನುಗುಣವಾಗಿ ಈ ಹಿಂದೆ 15ಕ್ಕಿಂತಲೂ ಕಡಿಮೆ ಮಾರಾಟ ಮಳಿಗೆಗಳ ಸೌಲಭ್ಯ ಹೊಂದಿದ್ದ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳ ಜೊತೆಗೆ ಹೂಡಿಕೆ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಕಳೆದ 1 ವರ್ಷದಲ್ಲಿ 20ಕ್ಕೂ ಹೆಚ್ಚು ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಬೆನೆಲ್ಲಿಯ 38 ಮಾರಾಟ ಮಳಿಗೆಗಳೊಂದಿಗೆ ದೇಶದ ನಗರಗಳಲ್ಲಿ ಗ್ರಾಹಕರನ್ನು ತಲುಪಲು ಯಶಸ್ವಿಯಾಗುತ್ತಿದ್ದು, 2021ರ ಮಧ್ಯಂತರದ ವೇಳೆಗೆ ಮಾರಾಟ ಮಳಿಗೆಗಳ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸಲಾಗುತ್ತಿದೆ.
ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್ 1 ಮತ್ತು ಟೈರ್ 2 ನಗರಗಳಲ್ಲೂ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಬೈಕ್ ಉತ್ಪನ್ನಗಳನ್ನು ಸಹ ಹೆಚ್ಚಿಸುತ್ತಿದ್ದು, ಬೆನೆಲ್ಲಿ ಕಂಪನಿಯು ಸದ್ಯ ಟಿಆರ್ಕೆ 502, ಟಿಆರ್ಕೆ 505 ಎಕ್ಸ್, ಲಿಯೊನ್ಸಿನೊ 500, 302 ಎಸ್, 302 ಆರ್ ಮತ್ತು ಇತ್ತೀಚೆಗೆ ಬಿಡುಗಡೆಯಾದ ಇಂಪೀರಿಯರ್ 400 ಬಿಎಸ್-6 ಮಾದರಿಗಳನ್ನು ಮಾರಾಟ ಮಾಡುತ್ತಿದೆ.
ಬೆನೆಲ್ಲಿ ಹೊಸ ಬೈಕ್ ಮಾದರಿಗಳ ಪೈಕಿ ಇಂಪೀರಿಯರ್ 400 ಕ್ಲಾಸಿಕ್ ಬೈಕ್ ಮಾದರಿಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿರುವ ಹೊಸ ಬೈಕ್ ಮಾದರಿಯು ಹೊಸ ಮಾರಾಟ ಮಳಿಗೆಗಳಿಂದಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಾಹಾವೀರ್ ಗ್ರೂಪ್ ಜೊತೆಗೂಡಿ ಕಾರ್ಯನಿರ್ವಹಿಸುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಮಧ್ಯಮ ಕ್ರಮಾಂಕದ ಸ್ಟ್ರೀಟ್ ಬೈಕ್ ಮಾದರಿಗಳೊಂದಿಗೆ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂಪೀರಿಯಲ್ 400 ನಂತರ ನಂತರ ಮತ್ತಷ್ಟು ಹೊಸ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
ಜಾರಿಗೆ ಬಂದಿರುವ ಹೊಸ ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಬೈಕ್ ಮಾದರಿಗಳನ್ನು ಉನ್ನತೀಕರಿಸಿರುವ ಬೆನೆಲ್ಲಿ ಕಂಪನಿಯು ಇಂಪೀರಿಯರ್ 400 ಬೈಕ್ ಮಾದರಿಯ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ಹೊಸ ಬೆನೆಲ್ಲಿ ಇಂಪೀರಿಯೇಲ್ 400 ಆರಂಭಿಕ ಬೆಲೆಯು ಭಾರತದಲ್ಲಿ ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ.1.99 ಲಕ್ಷಗಳಾಗಿದ್ದು, ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಿರುವ ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿದೆ.
ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮಾದರಿಯು 374-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ನೊಂದಿಗೆ 20-ಬಿಎಚ್ಪಿ, 29-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!
ಕ್ಲಾಸಿಕ್ ಲುಕ್ ನೀಡುವುದಕ್ಕಾಗಿ ವಿಶೇಷ ವಿನ್ಯಾಸವುಳ್ಳ ಹೆಡ್ಲ್ಯಾಂಪ್, ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ಬರ್ ಅಳವಡಿಸಲಾಗಿದ್ದು, ಸುರಕ್ಷತೆಗಾಗಿ ಎಬಿಎಸ್, ಡ್ಯುಯಲ್ ಚಾನೆಲ್ ಡಿಸ್ಕ್ ಬ್ರೇಕ್ಗಳನ್ನು ನೀಡಲಾಗಿದೆ.