Just In
- 28 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ವಿಜಯನಗರ ಜಿಲ್ಲೆ; ಮೇಲುಸ್ತುವಾರಿಗೆ ಐಎಎಸ್ ಅಧಿಕಾರಿ ನೇಮಕ
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇಂಪೀರಿಯಲ್ ಸರಣಿಯಲ್ಲಿ ಹೊಸದಾಗಿ ಇಂಪೀರಿಯಲ್ 530 ಬೈಕ್ ಬಿಡುಗಡೆ ಮಾಡಲಿದೆ ಬೆನೆಲ್ಲಿ
ಬೆನೆಲ್ಲಿ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಪ್ರೀಮಿಯಂ ಬೈಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಬೈಕ್ ಮಾರಾಟ ಮಳಿಗೆಗಳ ಹೆಚ್ಚಳದೊಂದಿಗೆ ಹೊಸ ಉತ್ಪನ್ನಗಳನ್ನು ಸಹ ಹೆಚ್ಚಿಸುತ್ತಿದೆ.

ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಸದ್ಯ ಇಂಪೀರಿಯಲ್ 400 ಬೈಕ್ ಮಾದರಿಯೊಂದಿಗೆ ರಾಯಲ್ ಎನ್‌ಫೀಲ್ಡ್ ನಿರ್ಮಾಣದ 350ಸಿಸಿ ಬೈಕ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಬೆನೆಲ್ಲಿ ಕಂಪನಿಯು ಇಂಪೀರಿಯಲ್ ಸರಣಿಯಲ್ಲಿ ಮತ್ತೊಂದು ಹೊಸ ಕ್ಲಾಸಿಕ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಇಂಪೀರಿಯಲ್ 530 ಬೈಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ಕಂಪನಿಯ 650 ಸಿಸಿ ಸಾಮರ್ಥ್ಯದ ಟ್ವಿನ್ ಬೈಕ್‌ಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಇಂಪೀರಿಯಲ್ 530 ಬೈಕ್ ಮಾದರಿಯನ್ನು ಬಿಡುಗಡೆಯ ಹಂತದಲ್ಲಿರುವ ಹೊರತಾಗಿ ಹೊಸ ಬೈಕ್ ಕುರಿತು ಯಾವುದೇ ಮಾಹಿತಿ ಹಂಚಿಕೊಳ್ಳದ ಬೆನೆಲ್ಲಿ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದು ಮತ್ತು ಬೈಕ್ ಮಾರಾಟದ ನಂತರ ಗ್ರಾಹಕರ ಸೇವೆಗಳನ್ನು ಶಕ್ತಗೊಳಿಸುವತ್ತ ಗಮನಹರಿಸಲಾಗುತ್ತಿದೆ ಎನ್ನುವ ಮಾಹಿತಿ ಹಂಚಿಕೊಂಡಿದೆ.

ಇನ್ನು ಬೆನೆಲ್ಲಿ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಬೈಕ್ ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಮಾರಾಟ ಮಳಿಗೆಗಳನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಿಸುತ್ತಿರುವುದು ಹೊಸ ಬೈಕ್ ಮಾರಾಟದಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಕರೋನಾ ವೈರಸ್‌ನಿಂದಾದ ಆರ್ಥಿಕ ಸಂಕಷ್ಟದ ನಡುವೆಯೂ ಬೆನೆಲ್ಲಿ ಇಂಡಿಯಾ ಕಂಪನಿಯು ಕಳೆದ ವರ್ಷದ ಬೈಕ್ ಮಾರಾಟದಲ್ಲಿ ಬರೋಬ್ಬರಿ ಶೇ. 103ರಷ್ಟು ಬೆಳವಣಿಗೆ ಸಾಧಿಸಿದ್ದು, ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಆವೃತ್ತಿಯು ಬೆನೆಲ್ಲಿ ಬೈಕ್ ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ಕಂಪನಿಯು ಮತ್ತಷ್ಟು ಹೊಸ ಬೈಕ್ ಮಾದರಿಗಳೊಂದಿಗೆ ಮಾರಾಟ ಮಳಿಗೆಗಳನ್ನು ವಿಸ್ತರಿಸುತ್ತಿದ್ದು, ಇತ್ತೀಚೆಗೆ 38ನೇ ಮಾರಾಟ ಮಳಿಗೆಗೆ ಚಾಲನೆ ನೀಡಿದೆ.

ಗ್ರಾಹಕರ ಬೇಡಿಕೆ ಬೇಡಿಕೆಗೆ ಅನುಗುಣವಾಗಿ ಈ ಹಿಂದೆ 15ಕ್ಕಿಂತಲೂ ಕಡಿಮೆ ಮಾರಾಟ ಮಳಿಗೆಗಳ ಸೌಲಭ್ಯ ಹೊಂದಿದ್ದ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳ ಜೊತೆಗೆ ಹೂಡಿಕೆ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಕಳೆದ 1 ವರ್ಷದಲ್ಲಿ 20ಕ್ಕೂ ಹೆಚ್ಚು ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಬೆನೆಲ್ಲಿಯ 38 ಮಾರಾಟ ಮಳಿಗೆಗಳೊಂದಿಗೆ ದೇಶದ ನಗರಗಳಲ್ಲಿ ಗ್ರಾಹಕರನ್ನು ತಲುಪಲು ಯಶಸ್ವಿಯಾಗುತ್ತಿದ್ದು, 2021ರ ಮಧ್ಯಂತರದ ವೇಳೆಗೆ ಮಾರಾಟ ಮಳಿಗೆಗಳ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸಲಾಗುತ್ತಿದೆ.

ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್ 1 ಮತ್ತು ಟೈರ್ 2 ನಗರಗಳಲ್ಲೂ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಬೈಕ್ ಉತ್ಪನ್ನಗಳನ್ನು ಸಹ ಹೆಚ್ಚಿಸುತ್ತಿದ್ದು, ಬೆನೆಲ್ಲಿ ಕಂಪನಿಯು ಸದ್ಯ ಟಿಆರ್‌ಕೆ 502, ಟಿಆರ್‌ಕೆ 505 ಎಕ್ಸ್, ಲಿಯೊನ್ಸಿನೊ 500, 302 ಎಸ್, 302 ಆರ್ ಮತ್ತು ಇತ್ತೀಚೆಗೆ ಬಿಡುಗಡೆಯಾದ ಇಂಪೀರಿಯರ್ 400 ಬಿಎಸ್-6 ಮಾದರಿಗಳನ್ನು ಮಾರಾಟ ಮಾಡುತ್ತಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಬೆನೆಲ್ಲಿ ಹೊಸ ಬೈಕ್ ಮಾದರಿಗಳ ಪೈಕಿ ಇಂಪೀರಿಯರ್ 400 ಕ್ಲಾಸಿಕ್ ಬೈಕ್ ಮಾದರಿಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿರುವ ಹೊಸ ಬೈಕ್ ಮಾದರಿಯು ಹೊಸ ಮಾರಾಟ ಮಳಿಗೆಗಳಿಂದಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.