ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಪ್ರೀಮಿಯಂ ಬೈಕ್ ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯ ಗ್ರಾಹಕರ ಬೇಡಿಕೆಯೆಂತೆ ಹೊಸ ಮಾರಾಟ ಮಳಿಗೆಗಳನ್ನು ವಿಸ್ತರಿಸುತ್ತಿದ್ದು, ಇತ್ತೀಚೆಗೆ ಕಂಪನಿಯು ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ತನ್ನ 41ನೇ ಶೋರೂಂಗೆ ಚಾಲನೆ ನೀಡಿತು.

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಬೆನೆಲ್ಲಿ ಇಂಡಿಯಾ ಕಳೆದ ವರ್ಷದ ಬೈಕ್ ಮಾರಾಟದಲ್ಲಿ ಬರೋಬ್ಬರಿ ಶೇ. 103ರಷ್ಟು ಬೆಳವಣಿಗೆ ಸಾಧಿಸಿದ್ದು, ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಆವೃತ್ತಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳತ್ತಿದೆ. ಈ ಹಿನ್ನಲೆಯಲ್ಲಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಬೈಕ್ ಮಾದರಿಗಳೊಂದಿಗೆ ಮಾರಾಟ ಮಳಿಗೆಗಳನ್ನು ಸಹ ವಿಸ್ತರಿಸುತ್ತಿದ್ದು, ಇಂದು ತನ್ನ 41ನೇ ಮಾರಾಟ ಮಳಿಗೆಗೆ ಭರ್ಜರಿ ಚಾಲನೆ ನೀಡಿದೆ.

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

2020ರ ಆರಂಭದಲ್ಲಿ ಕೇವಲ ಬೆರಳಣಿಕೆಯಷ್ಟು ಮಾರಾಟ ಮಳಿಗೆಗಳ ಸೌಲಭ್ಯವನ್ನು ಹೊಂದಿದ್ದ ಬೆನೆಲ್ಲಿ ಇಂಡಿಯಾ ಕಂಪನಿಯು ಇದೀಗ ಹೊಸ ಉತ್ಪನ್ನಗಳ ಜೊತೆಗೆ ಹೂಡಿಕೆ ಪ್ರಮಾಣವನ್ನು ಹೆಚ್ಚಿಸುವುದರೊಂದಿಗೆ ಕಳೆದ 1 ವರ್ಷದಲ್ಲಿ 26 ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್ 1 ಮತ್ತು ಟೈರ್ 2 ನಗರಗಳಲ್ಲೂ ಮಾರಾಟ ಮಳಿಗೆಗಳನ್ನು ತೆರೆಯುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಬೈಕ್ ಉತ್ಪನ್ನಗಳನ್ನು ಸಹ ಹೆಚ್ಚಿಸುತ್ತಿದ್ದು, ಹೌರಾ ತೆರೆಯಲಾಗಿರುವ ಹೊಸ ಶೋರೂಂನಲ್ಲಿ ಬೈಕ್ ಮಾರಾಟ ಸೌಲಭ್ಯದೊಂದಿಗೆ ಕೆಫೆ ಜೋನ್, ಆಕ್ಸೆಸರಿಸ್‌ಗಾಗಿ ಪ್ರತ್ಯೇಕ ವಿಭಾಗಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಇನ್ನು ಬೆನೆಲ್ಲಿ ಕಂಪನಿಯು ಸದ್ಯ ಟಿಆರ್‌ಕೆ 502, ಟಿಆರ್‌ಕೆ 502ಎಕ್ಸ್, ಟಿಆರ್‌ಕೆ 505 ಎಕ್ಸ್, ಲಿಯೊನ್ಸಿನೊ 500, 302 ಎಸ್, 302 ಆರ್ ಮತ್ತು ಇತ್ತೀಚೆಗೆ ಬಿಡುಗಡೆಯಾದ ಇಂಪೀರಿಯರ್ 400 ಬಿಎಸ್-6 ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಬೈಕ್ ಮಾದರಿಗಳ ಪೈಕಿ ಇಂಪೀರಿಯರ್ 400 ಕ್ಲಾಸಿಕ್ ಬೈಕ್ ಮಾದರಿಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿರುವ ಹೊಸ ಬೈಕ್ ಮಾದರಿಯು ಹೊಸ ಮಾರಾಟ ಮಳಿಗೆಗಳಿಂದಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಾಹಾವೀರ್ ಗ್ರೂಪ್ ಜೊತೆಗೂಡಿ ಕಾರ್ಯನಿರ್ವಹಿಸುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಮಧ್ಯಮ ಕ್ರಮಾಂಕದ ಸ್ಟ್ರೀಟ್ ಬೈಕ್ ಮಾದರಿಗಳೊಂದಿಗೆ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದು, ಇತ್ತೀಚೆಗೆ ಕಂಪನಿಯು ಹೊಸ ತಂತ್ರಜ್ಞಾನ ಪ್ರೇರಿತ ಟಿಆರ್‌ಕೆ 502ಎಕ್ಸ್ ಬಿಡುಗಡೆ ಮಾಡಿತು.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಹಾಗೆಯೇ ಬೆನೆಲ್ಲಿ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಬಿಡಿಭಾಗಗಳ ಬಳಕೆಗೆ ಆದ್ಯತೆ ನೀಡುತ್ತಿದ್ದು, ಹೊಸ ಯೋಜನೆಯ ಪರಿಣಾಮ ಬೈಕ್ ಉತ್ಪಾದನಾ ವೆಚ್ಚದಲ್ಲಿ ಸಾಕಷ್ಟು ಇಳಿಕೆಯಾಗಿರುವುದನ್ನು ಒಪ್ಪಿಕೊಂಡಿದೆ.

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಆತ್ಮ ನಿರ್ಭರ ಭಾರತ ಯೋಜನೆ ಅಡಿ ಹಲವು ವಾಹನ ಉತ್ಪಾದನಾ ಕಂಪನಿಗಳು ಸ್ಥಳೀಯವಾಗಿ ಲಭ್ಯವಾಗುವ ಆಟೋ ಬಿಡಿಭಾಗಗಳಿಗೆ ಆದ್ಯತೆ ನೀಡುತ್ತಿರುವ ಪರಿಣಾಮ ಉತ್ಪಾದನಾ ವೆಚ್ಚದಲ್ಲಿ ಇಳಿಕೆ ಕಂಡುಬರುತ್ತಿದ್ದು, ಬೆನೆಲ್ಲಿ ಇಂಡಿಯಾ ಕಂಪನಿಯು ಸಹ ತನ್ನ ಇಂಪೀರಿಯಲ್ 400 ಕ್ಲಾಸಿಕ್ ಬೈಕಿನ ಬೆಲೆಯಲ್ಲಿ ರೂ.10 ಸಾವಿರ ಇಳಿಕೆ ಮಾಡುವ ಮೂಲಕ ಕೇಂದ್ರದ ಹೊಸ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಟಿಆರ್‌ಕೆ 502ಎಕ್ಸ್ ಬಿಡುಗಡೆಯೊಂದಿಗೆ ಹೊಸ ಶೋರೂಂಗೆ ಚಾಲನೆ ನೀಡಿದ ಬೆನೆಲ್ಲಿ

ಬೆನೆಲ್ಲಿ ಕಂಪನಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.99 ಲಕ್ಷ ಬೆಲೆ ಹೊಂದಿದ್ದ ಇಂಪೀರಿಯಲ್ 400 ಕ್ಲಾಸಿಕ್ ಬೈಕಿನ ಬೆಲೆಯನ್ನು ರೂ. 1.89 ಲಕ್ಷಕ್ಕೆ ಇಳಿಕೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಭಾರತದಲ್ಲೇ ಪೂರ್ಣ ಪ್ರಮಾಣ ಉತ್ಪಾದನೆಯಾದ ವಿವಿಧ ಹೊಸ ಬೈಕ್‌ಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

More from DriveSpark

Article Published On: Friday, March 26, 2021, 10:52 [IST]
English summary
Benelli Starts 41st Dealership In Howrah. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+