Just In
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- News
ಸಮೀಕ್ಷೆ: ಅಸ್ಸಾಂನಲ್ಲಿ ಕಾಂಗ್ರೆಸ್ ಮಣಿಸಿ ಬಿಜೆಪಿ ಅಧಿಕಾರಕ್ಕೆ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ 2021ರ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕ್ ಬಿಡುಗಡೆ
ಜನಪ್ರಿಯ ತಯಾರಕ ಕಂಪನಿಯಾದ ಬೆನೆಲ್ಲಿ ತನ್ನ ಬಿಎಸ್-6 ಲಿಯಾನ್‍ಸಿನೊ 500 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬೆನೆಲ್ಲಿ ಬೈಕಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.4.60 ಲಕ್ಷಗಳಾಗಿದೆ.

ಈ ಹೊಸ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕ್ ಸ್ಟೀಲ್ ಗ್ರೇ ಮತ್ತು ಲಿಯೊನ್ಸಿನೊ ರೆಡ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದೆ. ಇನ್ನು ಹಿಂದಿನ ಮಾದರಿಗೆ ಹೋಲಿಸಿದರೆ ಬೆಲೆಯು ಕಡಿಮೆ ಮಾಡಲಾಗಿದೆ. ಈ ಬಿಎಸ್-6 ಬೆನೆಲ್ಲಿ ಲಿಯಾನ್‍ಸಿನೊ 500 ಬೈಕ್ ಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಈ ಹೊಸ ಬಿಎಸ್-6 ಬೆನೆಲ್ಲಿ ಲಿಯಾನ್‍ಸಿನೊ 500 ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ರೂ.10,000 ಟೋಕನ್ ಮೊತ್ತ ಪವಾತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಆದರೆ ಇದರ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಬೈಕಿನಲ್ಲಿ 499ಸಿಸಿ ಪ್ಯಾರಲಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 4500 ಆರ್‌ಪಿಎಂನಲ್ಲಿ 45 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೊಸ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕ್ ರೆಟ್ರೊ ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಹೊಂದಿದೆ. 2021ರ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿ ಇದ್ದ ಅದೇ ಫೀಚರ್ ಗಳನ್ನು ಮುಂದುವರೆಸಲಾಗಿದೆ.

ಸ್ಕ್ರ್ಯಾಂಬ್ಲರ್ ಶೈಲಿಯ ಈ ಬೈಕ್ ಟ್ಯೂಬುಲರ್ ಸ್ಟೀಲ್ ಟ್ರೆಲ್ಲಿಸ್ ಫ್ರೇಂಗಳನ್ನು ಹೊಂದಿದೆ. ಸಸ್ಪೆಂಷನ್‍ಗಳಿಗಾಗಿ ಮುಂಭಾಗದಲ್ಲಿ ಅಪ್‌ಸೈಡ್ ಡೌನ್ 50 ಎಂಎಂ ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಹೊಂದಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇವುಗಳು ಪ್ರಿ ಲೋಡ್ ಅಡ್ಜಸ್ಟ್ ಮೆಂಟ್ ಹೊಂದಿವೆ. ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ 320 ಎಂಎಂ ಟ್ವಿನ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 260 ಎಂಎಂ ಡಿಸ್ಕ್ ಗಳಿವೆ. ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ, ಹೊಸ ಬೆನೆಲ್ಲಿ ಲಿಯಾನ್‍ಸಿನೊ 500 ಕನಿಷ್ಠ ವಿನ್ಯಾಸಗಳನ್ನು ಹೊಂದಿದೆ. ಇವುಗಳಲ್ಲಿ ರೌಂಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಲೋ ಸೆಟ್ ಹ್ಯಾಂಡಲ್‌ಬಾರ್, ಹಿಂಭಾಗದಲ್ಲಿ ಮಿನಿಮಲ್ ಪ್ಯಾನೆಲ್ ಮತ್ತು ಮುಂಭಾಗದ ಫೆಂಡರ್‌ನಲ್ಲಿ ಮೆಟಾಲಿಕ್ ಆರ್ನಾಮೆಂಟ್‍ಗಳಿವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಲಿಯಾನ್‍ಸಿನೊ 500 ಪಾಡ್ ಶೈಲಿಯ ವಿನ್ಯಾಸದಲ್ಲಿರುವ ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೊತೆಗೆ ಎಲ್ಇಡಿ ಡಿಆರ್‍ಎಲ್ ಹಾಗೂ ಎಲ್ಇಡಿ ಟರ್ನ್ ಇಂಡಿಕೇಟರ್‍ಗಳನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ಗಳನ್ನು ನೀಡಲಾಗಿದೆ.