ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ತನ್ನ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.51 ಲಕ್ಷವಾಗಿದೆ.

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಬೆನೆಲ್ಲಿ ಕಂಪನಿಯು ಈ ಹೊಸ ಟಿಆರ್‌ಕೆ 251 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಈ ಹೊಸ ಎಂಟ್ರಿ-ಲೆವೆಲ್ ಅಡ್ವೆಂಚರ್ ಟೂರರ್ ಬೈಕ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.6,000 ಪಾವತಿಸಿ ಆನ್‌ಲೈನ್ ಅಥವಾ ಭಾರತದಾದ್ಯಂತ ಅಧಿಕೃತ ಡೀಲರ್‌ಶಿಪ್‌ಗಳ ಮೂಲಕ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಹೊಸ ಅಡ್ವೆಂಚರ್ ಬೈಕ್ ಪ್ರಸ್ತುತ ಭಾರತದಲ್ಲಿ ಬೆನೆಲ್ಲಿಯ ಅತ್ಯಂತ ಕೈಗೆಟುಕುವ ಮಾದರಿಯಾಗಿದೆ.

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಹೊಸ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಸಾಕಷ್ಟು ಸ್ಟೈಲಿಂಗ್ ಅಂಶವು ಟಿಆರ್‌ಕೆ 502 ಮಾದರಿಯಿಂದ ಎರವಲು ಪಡೆದುಕೊಂಡಿದೆ. ಇದು ದೊಡ್ಡ ವಿಂಡ್‌ಸ್ಕ್ರೀನ್, ಫ್ರಂಟ್ ಹೆವಿ ಕ್ವಾರ್ಟರ್ ಫೇರಿಂಗ್, ತೆರೆದ ಟ್ರೆಲ್ಲಿಸ್ ಫ್ರೇಮ್ ಮತ್ತು ಸ್ಕಲಪಟಡ್ ಫ್ಯೂಯಲ್ ಟ್ಯಾಂಕ್‌ನಂತಹ ಸಿಗ್ನೇಚರ್ ಅಡ್ವೆಂಚರ್ ಸ್ಟೈಲಿಂಗ್ ಅಂಶಗಳನ್ನು ಪಡೆಯುತ್ತದೆ.

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಮುಂಭಾಗ ಮತ್ತು ಬದಿಯ ಫೇರಿಂಗ್ ಮತ್ತು ಟೈಲ್ ವಿಭಾಗದಲ್ಲಿ ಸ್ಪೋರ್ಟಿ ಗ್ರಾಫಿಕ್ಸ್ ನಿಂದ ಗೋಚರಿಸುತ್ತದೆ. ಅಗಲ ಮತ್ತು ಎತ್ತರದ ಹ್ಯಾಂಡಲ್‌ಬಾರ್‌ಗಳು ಸೆಂಟರ್-ಸೆಟ್ ಫುಟ್‌ಪೆಗ್‌ಗಳನ್ನು ಹೊಂದಿದೆ. 800 ಎಂಎಂ ಪ್ರವೇಶಿಸಬಹುದಾದ ಸ್ಯಾಡಲ್ ಎತ್ತರವು ಆರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ.

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಟ್ವಿನ್-ಪಾಡ್ ಎಲ್‌ಇಡಿ ಹೆಡ್‌ಲ್ಯಾಂಪ್ ಜೊತೆಗೆ ಸೈಡ್ ಫೇರಿಂಗ್‌ಗಳಲ್ಲಿ ಅಳವಡಿಸಲಾಗಿರುವ ಟರ್ನ್ ಇಂಡಿಕೇಟರ್‌ಗಳು ಬೈಕಿಗೆ ಆಕರ್ಷಣೆಯನ್ನು ನೀಡುತ್ತದೆ. ಟೂರಿಂಗ್ ಸಾಮರ್ಥ್ಯಗಳನ್ನು ಲಗೇಜ್ ಮೌಂಟಿಂಗ್ ರ್ಯಾಕ್ ಮತ್ತು ಪ್ಯಾನಿಯರ್ ಬಾಕ್ಸ್‌ಗಳನ್ನು ಒಳಗೊಂಡಿದೆ,

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಇದರೊಂದಿಗೆ ಈ ಬೈಕಿನಲ್ಲಿ ಸೈಡ್-ಆನ್ ಎಕ್ಸಾಸ್ಟ್ ಮತ್ತು ಕಡಿದಾದ ಟೇಲ್ ವಿಭಾಗ ಸೇರಿವೆ. ವೈಶಿಷ್ಟ್ಯಗಳ ವಿಷಯದಲ್ಲಿ ಟಿಆರ್‌ಕೆ 251 ಬೈಕ್ ಸಂಪೂರ್ಣ ಡಿಜಿಟಲ್ LCD ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದ್ದು ಇದ್ ಸ್ಪೀಡ್, ಆರ್ಪಿಎಂ, ಫ್ಯೂಯಲ್ ಗೇಜ್, ಗೇರ್ ಪೋಷಿಸನ್, ಟೈಮ್ ಮತ್ತು ಟ್ರಿಪ್ ಮೀಟರ್‌ನಂತಹ ವ್ಯಾಪಕ ಮಾಹಿತಿಗಳನ್ನು ಪ್ರದರ್ಶಿಸುತ್ತದೆ.

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಭಾರತದಲ್ಲಿನ ಹೆಚ್ಚಿನ ಅಡ್ವೆಂಚರ್ ಬೈಕ್ ಗಳಂತೆ ಟಿಆರ್‌ಕೆ 251 ರೋಡ್-ಆಧಾರಿತ ಟೂರರ್ ಆಗಿದೆ. ಆದ್ದರಿಂದ ಇದು ರಸ್ತೆ-ಉದ್ದೇಶದ ಟೈರ್‌ಗಳೊಂದಿಗೆ 17-ಇಂಚಿನ ಮುಂಭಾಗ ಮತ್ತು ಹಿಂಭಾಗದ ಅಲಾಯ್ ವ್ಹೀಲ್ ಗಳನ್ನು ಹೊಂದಿದೆ,

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಹೊಸ ಬೆನೆಲ್ಲಿ ಟಿಆರ್‌ಕೆ 251 ಬೈಕಿನಲ್ಲಿ 249 ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್-ಸಿಲಿಂಡರ್, DOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 9,250 ಆರ್‌ಪಿಎಂನಲ್ಲಿ 25 ಬಿಹೆಚ್‍ಪಿ ಪವರ್ ಮತ್ತು 8,000 ಆರ್‌ಪಿಎಂನಲ್ಲಿ 21 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6 ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಹೊಸ ಅಡ್ವೆಂಚರ್ ಬೈಕ್ 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ನೀಡುತ್ತದೆ

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಈ ಹೊಸ ಅಡ್ವೆಂಚರ್ ಟೂರರ್ ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಯುಎಸ್‌ಡಿ ಫೋರ್ಕ್‌ಗಳಲ್ಲಿ ಸ್ಟೀಲ್ ಟ್ರೆಲ್ಲಿಸ್ ಫ್ರೇಮ್ ಮತ್ತು ಹಿಂಭಾಗದಲ್ಲಿ ಟಿ-ಸ್ವಿಂಗರ್ಮ್ ಮಾದರಿಯ ಮೊನೊ-ಶಾಕ್ ಅಬ್ಸಾರ್ಬರ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಇನ್ನು ಪ್ರಮುಖವಾಗಿ ಈ ಹೊಸ ಅಡ್ವೆಂಚರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 4-ಪಿಸ್ಟನ್ ಕ್ಯಾಲಿಪರ್‌ಗಳೊಂದಿಗೆ 280 ಎಂಎಂ ಸಿಂಗಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್-ಪಿಸ್ಟನ್ ಕ್ಯಾಲಿಪರ್‌ನೊಂದಿಗೆ 240 ಎಂಎಂ ಸಿಂಗಲ್ ಡಿಸ್ಕ್ ಅನ್ನು ಹೊಂದಿದೆ, ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ABS ನೊಂದಿಗೆ ಆಂಕಾರೇಜ್ ನೀಡಿದೆ,

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಬೆನೆಲ್ಲಿ ತನ್ನ ಹೊಸ 502ಸಿ ಕ್ರೂಸರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಈ ವರ್ಷದ ಜುಲೈ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬ್ರ್ಯಾಂಡ್‌ನ 500 ಸಿಸಿ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಈ ಪ್ಲಾಟ್‌ಫಾರ್ಮ್ ಲಿಯಾನ್‍‍ಸಿನೊ ಮತ್ತು ಟಿಆರ್‌ಕೆ 502 ಮಾದರಿಗಳಿಗೂ ಆಧಾರವಾಗಿದೆ.ಹೊಸ ಬೆನೆಲ್ಲಿ 502ಸಿ ಬೈಕ್ ಮ್ಯಾಟ್ ಕಾಗ್ನ್ಯಾಕ್ ರೆಡ್ ಮತ್ತು ಮ್ಯಾಟ್ ಬ್ಲ್ಯಾಕ್ ಬಣ್ಣಗಳಲ್ಲಿ ಆಯ್ಕೆಗಳನ್ನು ಲಭ್ಯವಿದೆ. ಇನ್ನು ಹೊಸ ಬೈಕಿನ ಅರ್ಬನ್ ಕ್ರೂಸರ್ ವಿನ್ಯಾಸವು ಹೆಚ್ಚು ಜನಪ್ರಿಯವಾದ ಡುಕಾಟಿ ಡಯಾವೆಲ್ 1260 ನಿಂದ ಸ್ಫೂರ್ತಿ ಪಡೆದಿದೆ.

ಭಾರತದಲ್ಲಿ ಹೊಸ Benelli TRK 251 ಅಡ್ವೆಂಚರ್ ಟೂರರ್ ಬೈಕ್ ಬಿಡುಗಡೆ

ಹೊಸ ಬೆನೆಲ್ಲಿ 502ಸಿ ಕ್ರೂಸರ್ ಬೈಕಿನಲ್ಲಿ ದೊಡ್ಡ ಫ್ಯೂಯಲ್ ಟ್ಯಾಂಕ್, ಸಿಂಗಲ್ ಪೀಸ್ ಸೀಟ್, ಬಲ್-ಬ್ಯಾರೆಲ್ ಎಕ್ಸಾಸ್ಟ್ ಮತ್ತು ಲಂಬವಾಗಿ ಜೋಡಿಸಲಾದ ಸ್ಪ್ಲಿಟ್ ಟೈಲ್-ಲ್ಯಾಂಪ್‌ಗಳು ಹೊಂದಿದೆ. ಈ ಬೈಕಿನಲ್ಲಿ ಸಂಪೂರ್ಣವಾದ ಡಿಜಿಟಲ್ ಟಿಎಫ್ ಡಿಸ್ ಪ್ಲೇಯನ್ನು ಹೊಂದಿದೆ. ಇನ್ನು ಹೊಸ ಬೆನೆಲ್ಲಿ ಟಿಆರ್‌ಕೆ 251 ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಅಡ್ವೆಂಚರ್ 250, ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮತ್ತು ದುಬಾರಿ ಬಿಎಂಡಬ್ಲ್ಯು ಜಿ310 ಜಿಎಸ್ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Benelli launched new trk 251 adventure tourer motorcycle in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X