Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 5 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 15 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- News
ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; 48 ಲಕ್ಷ ವಾಚ್ ಒಡೆದ ಅಧಿಕಾರಿಗಳು!
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒನ್ ನೇಷನ್ ಡಿಫರೆಂಟ್ ಯೂನಿಫಾರಂ ಅಭಿಯಾನದಲ್ಲಿ 40,000 ಕಿ.ಮೀ ಸಾಗಲಿದ್ದಾರೆ ಬೆಂಗಳೂರಿನ ಬೈಕ್ ಸವಾರ
72ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಟಿವಿಎಸ್ ಮೋಟಾರ್ ಕಂಪನಿಯು ಒನ್ ನೇಷನ್ ಡಿಫರೆಂಟ್ ಯೂನಿಫಾರಂ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲು ಕಂಪನಿಯು ಪ್ಯಾನ್ ಇಂಡಿಯಾ ರೈಡ್ ಆಯೋಜಿಸಿದೆ.

ಈ ಅಭಿಯಾನದಲ್ಲಿ ಬೆಂಗಳೂರಿನ 24 ವರ್ಷದ ಶ್ರೀ ವಿಷ್ಣು ಎಸ್ ಎಂಬುವವರು 6 ತಿಂಗಳಲ್ಲಿ ದೇಶಾದ್ಯಂತ ಪ್ರಯಾಣಿಸಲಿದ್ದಾರೆ. ಈ ರ‍್ಯಾಲಿಯಲ್ಲಿ ಶ್ರೀ ವಿಷ್ಣು ದೇಶದ 28 ರಾಜ್ಯಗಳ ಎಲ್ಲಾ ಜಿಲ್ಲೆಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಮೂಲಕ 40,000 ಕಿ.ಮೀ ಪ್ರಯಾಣಿಸಲಿದ್ದಾರೆ. ಶ್ರೀ ವಿಷ್ಣು ತಮ್ಮ ಹೊಸ ಟಿವಿಎಸ್ ಅಪಾಚೆ ಆರ್‌ಟಿಆರ್ 200 4 ವಿ ಬೈಕ್‌ನೊಂದಿಗೆ ಪ್ರಯಾಣ ಬೆಳೆಸಲಿದ್ದಾರೆ.

ಎಲ್ಲಾ ರಾಜ್ಯಗಳ ಮೂಲಕ ಹಾದುಹೋಗುವ ಈ ಸವಾರಿಯು ಆಗಸ್ಟ್ 15ರಂದು ಮುಗಿಯಲಿದೆ. ಈ ರ‍್ಯಾಲಿಗೆ ಶ್ರೀ ವಿಷ್ಣು ಅವರನ್ನು ಸಕಲ ರೀತಿಯಲ್ಲಿ ಸಜ್ಜುಗೊಳಿಸಲಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಟಿವಿಎಸ್ ಕಂಪನಿಯು ದೇಶಾದ್ಯಂತ ಅಪಾಚೆ ಮಾಲೀಕರಿಗಾಗಿ ಬೈಕ್ ರ‍್ಯಾಲಿಯನ್ನು ಆಯೋಜಿಸಿತ್ತು. ದೆಹಲಿ, ಮುಂಬೈ, ಪುಣೆ, ಹೈದರಾಬಾದ್, ವಿಜಯವಾಡ, ಚೆನ್ನೈ ನಗರಗಳಲ್ಲಿ ಆಯೋಜಿಸಿದ್ದ ಈ ರ‍್ಯಾಲಿಯಲ್ಲಿ 400ಕ್ಕೂ ಹೆಚ್ಚು ಟಿವಿಎಸ್ ಅಪಾಚೆ ಬೈಕ್ ಮಾಲೀಕರು ಭಾಗವಹಿಸಿದ್ದರು.

ಟಿವಿಎಸ್ ಮೋಟಾರ್ ಕಂಪನಿಯು ಇತ್ತೀಚೆಗೆ ತನ್ನ ಜನಪ್ರಿಯ ಅಪಾಚೆ ಸರಣಿ ಬೈಕುಗಳ ಬೆಲೆಯನ್ನು ಹೆಚ್ಚಿಸಿದೆ. ಟಿವಿಎಸ್ ಕಂಪನಿಯು ಸದ್ಯಕ್ಕೆ ಅಪಾಚೆ ಸರಣಿಯಲ್ಲಿ ಅಪಾಚೆ ಆರ್‌ಟಿಆರ್ 160, ಅಪಾಚೆ ಆರ್‌ಟಿಆರ್ 180, ಅಪಾಚೆ ಆರ್‌ಟಿಆರ್ 160 4 ವಿ, ಅಪಾಚೆ ಆರ್‌ಟಿಆರ್ 200 4 ವಿ ಹಾಗೂ ಅಪಾಚೆ ಆರ್‌ಆರ್ 310 ಬೈಕುಗಳನ್ನು ಮಾರಾಟ ಮಾಡುತ್ತದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಅಪಾಚೆ ಬೈಕ್‌ಗಳ ಬೆಲೆಯನ್ನು ರೂ.1,520ಗಳಿಂದ ರೂ.3,000ಗಳವರೆಗೆ ಹೆಚ್ಚಿಸಲಾಗಿದೆ. ಟಿವಿಎಸ್ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಆದ ಟಿವಿಎಸ್ ಐ-ಕ್ಯೂಬ್ ಅನ್ನು ದೆಹಲಿ-ಎನ್‌ಸಿಆರ್‌ನಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಟಿವಿಎಸ್ ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮೊದಲು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿತು. ಕಂಪನಿಯ ಯೋಜನೆಯ ಪ್ರಕಾರ, ಈ ಸ್ಕೂಟರ್ ಬೇರೆ ಬೇರೆ ನಗರಗಳಲ್ಲಿ ಬಿಡುಗಡೆಯಾಗಲಿದೆ. ಟಿವಿಎಸ್ ಐ-ಕ್ಯೂಬ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ.1.15 ಲಕ್ಷಗಳಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಸಾಕಷ್ಟು ಶಕ್ತಿಯುತವಾಗಿರುವ ಈ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 75-80 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಸ್ಕೂಟರ್‌ನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 78 ಕಿ.ಮೀಗಳಾಗಿದೆ. ಟಿವಿಎಸ್ ಐಕ್ಯೂಬ್ ಸ್ಕೂಟರಿನಲ್ಲಿ ಹಲವಾರು ಆಧುನಿಕ ಫೀಚರ್'ಗಳನ್ನು ಅಳವಡಿಸಲಾಗಿದೆ.

ಟಿವಿಎಸ್ ಕಂಪನಿಯು 2020ರ ಡಿಸೆಂಬರ್ ತಿಂಗಳಿನ ಮಾರಾಟದಲ್ಲಿ ಉತ್ತಮ ನಿರ್ವಹಣೆಯನ್ನು ತೋರಿದೆ. ಕಂಪನಿಯು 2020ರ ಡಿಸೆಂಬರ್‌ನಲ್ಲಿ 2,58,239 ಯೂನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

2020ರ ಡಿಸೆಂಬರ್‌ನಲ್ಲಿ ಟಿವಿಎಸ್ ಕಂಪನಿಯು 1,19,051 ಯುನಿಟ್ ಬೈಕ್'ಗಳನ್ನು ಮಾರಾಟ ಮಾಡಿದೆ. ಈ ಮೂಲಕ ಬೈಕ್ ಮಾರಾಟವು 27%ನಷ್ಟು ಹೆಚ್ಚಾಗಿದೆ. ಡಿಸೆಂಬರ್ ತಿಂಗಳಿನಲ್ಲಿ 77,705 ಯುನಿಟ್ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ.

ಟಿವಿಎಸ್ ತನ್ನ ಗ್ರಾಹಕರಿಗಾಗಿ ಕಳೆದ ವರ್ಷ ಟಿವಿಎಸ್ ಅರೈವ್ ಎಂಬ ಮೊಬೈಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಿದೆ. ಈ ಅಪ್ಲಿಕೇಶನ್ ಟಿವಿಎಸ್ ಬೈಕ್ ಬಗ್ಗೆ ಬಳಕೆದಾರರಿಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ. ಇದರಲ್ಲಿ 360 ಡಿಗ್ರಿ ಇಮೇಜಿಂಗ್ ಮೂಲಕ, ಪ್ರತಿ ಬೈಕಿನ ಉಪಕರಣ ಹಾಗೂ ಬಿಡಿಭಾಗಗಳ ಬಗ್ಗೆ ಮಾಹಿತಿ ಪಡೆಯಬಹುದು.