ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಬರ್ಡ್ ಗ್ರೂಪ್
ಬರ್ಡ್ ಗ್ರೂಪ್ ಹಾಗೂ ವಿಮೋಟಾ ಕಂಪನಿಗಳು ಜೊತೆಗೂಡಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಮುಂದಾಗಿವೆ. ಈ ಎರಡೂ ಕಂಪನಿಗಳು ಸೇರಿ ಸೂಪರ್ ಸೋಕೊದ ಸಿಯುಕ್ಸ್ ಹಾಗೂ ಕ್ಯುಮಿನಿ ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಶೀಘ್ರದಲ್ಲೇ ದೇಶದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿವೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಚೀನಾ ಹೊರತುಪಡಿಸಿ ವಿಶ್ವದ ಇತರ ಎಲ್ಲ ದೇಶಗಳಲ್ಲಿ ಮಾರಾಟ ಮಾಡುವುದಾಗಿ ಈ ಕಂಪನಿಗಳು ತಿಳಿಸಿವೆ. ಈಗ, ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆಯ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಎಲೆಕ್ಟ್ರಿಕ್ ವೆಹಿಕಲ್ ವೆಬ್ ಸೈಟ್ ಪ್ರಕಾರ, ಈ ಎಲೆಕ್ಟ್ರಿಕ್ ಸ್ಕೂಟರಿನ ಆರಂಭಿಕ ಬೆಲೆ ರೂ.50,000ಗಳಾಗಿದೆ. ಈ ಸ್ಕೂಟರ್ ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 50 ಕಿ.ಮೀಗಳಿಂದ 60 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಹೇಳಲಾಗಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ಬಗ್ಗೆ ಬರ್ಡ್ ಗ್ರೂಪ್'ನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇತ್ತೀಚಿಗಷ್ಟೇ ಕ್ಯುಮಿನಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಭಾರತೀಯ ರಸ್ತೆಯಲ್ಲಿ ಪರೀಕ್ಷಿಸಲಾಯಿತು. ದೆಹಲಿಯಂತಹ ಪ್ರಮುಖ ನಗರಗಳಲ್ಲಿ ಈ ಸ್ಕೂಟರ್ ಅನ್ನು ಪರೀಕ್ಷಿಸಲಾಗುತ್ತಿದೆ.

ಈ ಸ್ಕೂಟರ್ ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಎಂದು ವರದಿಯಾಗಿದೆ. ಈ ಸ್ಕೂಟರ್ ಅನ್ನು 2020ರ ಆಟೋ ಎಕ್ಸ್‌ಪೋದಲ್ಲಿ ಬರ್ಡ್ ಇಎಸ್ 1 ಹೆಸರಿನಲ್ಲಿ ಅನಾವರಣಗೊಳಿಸಲಾಗಿತ್ತು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈ ವಾಹನವನ್ನು ಮೊದಲ ಬಾರಿಗೆ ಭಾರತದಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಈ ವಾಹನಗಳನ್ನು ಮಾನೇಸರ್ ಘಟಕದಲ್ಲಿ ಉತ್ಪಾದಿಸಲಾಗುವುದು. ಉತ್ಪಾದನೆಗೆ ಅಗತ್ಯವಿರುವ ಬಿಡಿಭಾಗಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳಲಾಗುತ್ತದೆ.

ನಂತರ ಭಾರತದಲ್ಲಿ ಅಸೆಂಬಲ್ ಮಾಡಲಾಗುತ್ತದೆ. ಈ ಕಾರಣಕ್ಕೆ ಈ ವಾಹನದ ಕಡಿಮೆಯಾಗಿರಲಿದೆ. ಆರಂಭದಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶದ ಪ್ರಮುಖ ನಗರಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತದೆ.
MOST READ: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ನಂತರ ದ್ವಿತೀಯ ಹಂತದ ನಗರಗಳಲ್ಲಿ ಮಾರಾಟ ಮಾಡಲಾಗುತ್ತದೆ. ಕಡಿಮೆ ಬೆಲೆಯನ್ನು ಹೊಂದಿದ್ದರೂ ಸಹ ಈ ಸ್ಕೂಟರ್ ಹಲವು ಫೀಚರ್'ಗಳನ್ನು ಹೊಂದಿರಲಿದೆ. ಈ ಸ್ಕೂಟರ್ ಎಲ್ಇಡಿ ಹೆಡ್'ಲೈಟ್, ಎಲ್‌ಸಿಡಿ ಸ್ಕ್ರೀನ್, ಪ್ರೀಮಿಯಂ ಲುಕ್, ಅಲಾಯ್ ವ್ಹೀಲ್'ನಂತಹ ಹಲವು ಆಕರ್ಷಕ ಫೀಚರ್'ಗಳನ್ನು ಹೊಂದಿದೆ.

ಇದರ ಜೊತೆಗೆ ಡಿಸ್ಕ್ ಬ್ರೇಕ್, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಸಸ್ಪೆಂಷನ್ ಹಾಗೂ ಹಿಂಭಾಗದಲ್ಲಿ ಟ್ವಿನ್ ಸ್ಪ್ರಿಂಗ್'ಗಳನ್ನು ಅಳವಡಿಸಲಾಗಿದೆ. ಈ ಸ್ಕೂಟರ್ ಅತ್ಯುತ್ತಮ ಸವಾರಿ ಅನುಭವವನ್ನು ನೀಡುತ್ತದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಇಎಸ್ 1 ಪ್ಲಸ್ ಹೆಸರಿನಲ್ಲಿ ಪ್ರದರ್ಶಿಸಲಾದ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ 3 ಎಎಚ್ ಲಿಥಿಯಂ ಐಯಾನ್ ಬ್ಯಾಟರಿಯನ್ನು ನೀಡಲಾಗಿದೆ. ಈ ಬ್ಯಾಟರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 50 - 60 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಹೇಳಲಾಗಿದೆ. ಈ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆಗಲು 7-8 ಗಂಟೆಗಳು ಬೇಕಾಗುತ್ತವೆ. ಈ ಎಲೆಕ್ಟ್ರಿಕ್ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 55 ಕಿ.ಮೀಗಳಾಗಿದೆ.


Click it and Unblock the Notifications