ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಇದೀಗ ಬಿಎಂಡಬ್ಲ್ಯು ಕಂಪನಿಯು ಭಾರತದಲ್ಲಿ ಈ ಜಿ 310 ಟ್ವಿನ್ ಬೈಕುಗಳ ಬೆಲೆಯನ್ನು ಹೆಚ್ಚಿಸಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಇದರಿಂದ ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳು ಭಾರತೀಯ ಮಾರುಕಟ್ಟೆಯಲ್ಲಿ ದುಬಾರಿಯಾಗಿದೆ. ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳ ಬೆಲೆಯನ್ನು ರೂ.10,000 ಗಳವರೆಗೆ ಹೆಚ್ಚಿಸಿದೆ. ಬೆಲೆ ಏರಿಕೆಯ ಬಳಿಕ ಇದೀಗ, ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯು ರೂ.2.60 ಲಕ್ಷಗಳಾದರೆ, ಜಿ 310 ಜಿಎಸ್ ಬೈಕಿನ ಬೆಲೆಯು ರೂ.3 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಮೊದಲಿಗೆ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ, ಕೆಲವು ನವೀಕರಣಗಳನ್ನು ಮಾಡಲಾಗಿದೆ.ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಡ್‌ಲ್ಯಾಂಪ್, ಟರ್ನ್ ಸಿಗ್ನಲ್‌ಗಳು ಮತ್ತು ಟೈಲ್ ಲ್ಯಾಂಪ್‌ಗಾಗಿ ಎಲ್ಇಡಿ ಲೈಟಿಂಗ್ ಅನ್ನು ನವೀಕರಿಸಲಾಗಿದೆ. ನವೀಕರಣದ ಭಾಗವಾಗಿ, ಜಿ 310 ಆರ್ ಪ್ಯಾಲೆಟ್‌ಗೆ ಬಿಎಂಡಬ್ಲ್ಯು ಹೊಸ ಬಣ್ಣಗಳನ್ನು ಕೂಡ ಸೇರಿಸಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಈ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್‌ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿಗ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಬೈಕ್‌ಗಳು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಯುವಗ್ರಾಹಕರನ್ನು ಸೆಳೆಯಬಹುದು.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಈ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗ 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಎರಡು ಹೊಸ ಬೈಕುಗಳು ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಇನ್ನು ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್‌ಲೈಟ್ ಪಡೆಯುತ್ತದೆ, ಇನ್ನು ಎಲ್‌ಇಡಿ ಡೇಟೈಮ್ ರನ್ನಿಂಗ್ ಜೊತೆ ಲೈಟ್ ಸ್ಟ್ರಿಪ್ ಅನ್ನು ಸಹ ಹೊಂದಿದೆ. ಈ ಬೈಕಿನಲ್ಲಿ ಜಿಎಸ್' ಅಕ್ಷರಗಳು ಈಗ ದೊಡ್ಡದಾಗಿದೆ ಮತ್ತು ಎಡಿವಿ ಶೈಲಿಯ ಬೀಕ್ ಅಪ್ ಫ್ರಂಟ್ 'ರ್ಯಾಲಿ' ಸ್ಟಿಕ್ಕರ್ ಅನ್ನು ಕೂಡ ಹೊಂದಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ದೊಡ್ಡ ಬಿಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಗಳಿಂದ ಹಲವಾರು ಫೀಚರ್ ಗಳನ್ನು ಎರವಲು ಪಡೆಯಲಾಗಿದೆ. ಇದರಲ್ಲಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಯ ವಿಂಡ್‌ಸ್ಕ್ರೀನ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ 2022ರ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳ ಬಣ್ಣಗಳನ್ನು ಅಂತರರಾಷ್ಟ್ರೀಯ ಮಾರುಕಟ್ತೆಯಲ್ಲಿ ನವೀಕರಿಸಿದೆ. 2022ರ ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು ಹೊಸ ಬಣ್ಣಗಳ ಆಯ್ಜೆಯನ್ನು ಪಡೆದುಕೊಂಡಿವೆ. ಬಿಎಂಡಬ್ಲ್ಯು ಜಿ 310 ಆರ್ ಬೈಕ್ ರೆಡ್ ರಿಮ್ಸ್ ಮತ್ತು ಕಾಸ್ಮಿಕ್ ಬ್ಲ್ಯಾಕ್ ಟು ಹೊಂದಿರುವ ಕಯನೈಟ್ ಬ್ಲೂ ಮೆಟಾಲಿಕ್ ಬಣ್ಣಗಳನ್ನು ಪಡೆದುಕೊಂಡಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಈ ಬೈಕಿನ ಪೋಲಾರ್ ವೈಟ್ ಬಣ್ಣವನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲ್ಯಾಕ್ ಎಂಬ ಹೊಸ ಬಣ್ಣವನ್ನು ಪಡೆಯುತ್ತದೆ. ಈ ಬೈಕಿನ 40 ವರ್ಷಗಳ ಜಿಎಸ್ ಬಣ್ಣವನ್ನು ಸ್ಥಗಿತಗೊಳಿಸಲಾಗಿದೆ. ಹೊಸ ಬಣ್ಣಗಳ ಆಯ್ಕೆಯನ್ನು ಹೊರತುಪಡಿಸಿ 021ರ ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕ್‌ಗಳು

ಹೊಸ ಬಿಎಂಡಬ್ಲ್ಯು ಜಿ 310 ಆರ್ ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 390, ಬಜಾಜ್ ಡೊಮಿನಾರ್ 400 ಮತ್ತು ಟಿವಿಎಸ್ ಅಪಾಚೆ ಆರ್‌ಆರ್‌310 ಬೈಕುಗಳಿಗೆ ಪೈಪೋಟಿ ನೀಡಿದರೆ, ಜಿ 310 ಜಿಎಸ್ ಮಾದರಿಯು ಕೆಟಿಎಂ 390 ಅಡ್ವೆಂಚರ್ ಮತ್ತು ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್‌ಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Monday, August 9, 2021, 20:52 [IST]
English summary
Bmw g 310 r and g 310 gs price hiked by rs 10000 in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+