ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಆಕ್ಟೋಬರ್ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಬಿಎಂಡಬ್ಲ್ಯು ಜಿ 310 ಟ್ವಿನ್ ಬೈಕುಗಳ ಬೆಲೆಯನ್ನು ಹೆಚ್ಚಿಸಿದೆ.

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳ ಬೆಲೆಯನ್ನು ರೂ.5,000 ಗಳವರೆಗೆ ಹೆಚ್ಚಿಸಿದೆ. ಬೆಲೆ ಏರಿಕೆಯ ಬಳಿಕ ಇದೀಗ, ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯು ರೂ.2.50 ಲಕ್ಷಗಳಾದರೆ, ಜಿ 310 ಜಿಎಸ್ ಬೈಕಿನ ಬೆಲೆಯು ರೂ.2.90 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಮೊದಲಿಗೆ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ, ಕೆಲವು ನವೀಕರಣಗಳನ್ನು ಮಾಡಲಾಗಿದೆ.ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಡ್‌ಲ್ಯಾಂಪ್, ಟರ್ನ್ ಸಿಗ್ನಲ್‌ಗಳು ಮತ್ತು ಟೈಲ್ ಲ್ಯಾಂಪ್‌ಗಾಗಿ ಎಲ್ಇಡಿ ಲೈಟಿಂಗ್ ಅನ್ನು ನವೀಕರಿಸಲಾಗಿದೆ. 2020ರ ನವೀಕರಣದ ಭಾಗವಾಗಿ, ಜಿ 310 ಆರ್ ಪ್ಯಾಲೆಟ್‌ಗೆ ಬಿಎಂಡಬ್ಲ್ಯು ಹೊಸ ಬಣ್ಣಗಳನ್ನು ಸೇರಿಸಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್‌ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿಗ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಬೈಕುಗಳು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಯುವಗ್ರಾಹಕರನ್ನು ಸೆಳೆಯಬಹುದು.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಎರಡು ಹೊಸ ಬೈಕುಗಳು ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಇನ್ನು ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್‌ಲೈಟ್ ಪಡೆಯುತ್ತದೆ, ಇನ್ನು ಎಲ್‌ಇಡಿ ಡೇಟೈಮ್ ರನ್ನಿಂಗ್ ಜೊತೆ ಲೈಟ್ ಸ್ಟ್ರಿಪ್ ಅನ್ನು ಸಹ ಹೊಂದಿದೆ. ಈ ಬೈಕಿನಲ್ಲಿ ಜಿಎಸ್' ಅಕ್ಷರಗಳು ಈಗ ದೊಡ್ಡದಾಗಿದೆ ಮತ್ತು ಎಡಿವಿ ಶೈಲಿಯ ಬೀಕ್ ಅಪ್ ಫ್ರಂಟ್ 'ರ್ಯಾಲಿ' ಸ್ಟಿಕ್ಕರ್ ಅನ್ನು ಸಹ ಪಡೆಯುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ದೊಡ್ಡ ಬಿಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಗಳಿಂದ ಹಲವಾರು ಫೀಚರ್ ಗಳನ್ನು ಎರವಲು ಪಡೆಯಲಾಗಿದೆ. ಇದರಲ್ಲಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಯ ವಿಂಡ್‌ಸ್ಕ್ರೀನ್ ಅನ್ನು ಹೊಂದಿದೆ.

ದುಬಾರಿಯಾಯ್ತು ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು

ಹೊಸ ಬಿಎಂಡಬ್ಲ್ಯು ಜಿ 310 ಆರ್ ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 390, ಬಜಾಜ್ ಡೊಮಿನಾರ್ 400 ಮತ್ತು ಟಿವಿಎಸ್ ಅಪಾಚೆ ಆರ್‌ಆರ್‌310 ಬೈಕುಗಳಿಗೆ ಪೈಪೋಟಿ ನೀಡಿದರೆ, ಜಿ 310 ಜಿಎಸ್ ಮಾದರಿಯು ಕೆಟಿಎಂ 390 ಅಡ್ವೆಂಚರ್ ಮತ್ತು ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2021 BMW G 310 R And G 310 GS Get A Price Hike. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X