2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಭಾರತದಲ್ಲಿ 2020ರ ವರ್ಷದ ಅವಧಿಯ ದ್ವಿಚಕ್ರ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ವರ್ಷದ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 2,563 ಯುನಿಟ್ಗಳನ್ನು ಮಾರಾಟಗೊಳಿಸಿವೆ.

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಭಾರತದಲ್ಲಿ ಕಳೆದ ವರ್ಷದ ಮಾರಾಟದಲ್ಲಿ 6.7 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ಕೊನೆಯ ತ್ರೈಮಾಸಿಕದಲ್ಲಿ (ಅಕ್ಟೋಬರ್ - ಡಿಸೆಂಬರ್) ಅನ್ನು 2019ರ ಇದೇ ಅವಧಿಯಲ್ಲಿನ ಮಾರಾಟಕ್ಕೆ ಹೋಲಿಸಿದರೆ ಶೇ.51 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಕಂಪನಿ ಹೇಳಿದೆ. ಮಾರಾಟದಲ್ಲಿ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಗೆ ಜಿ 310 ಆರ್ ಮತ್ತು ಜಿ 310 ಜಿಎಸ್ ಮಾದರಿಗಳು ಹೆಚ್ಚಿನ ಕೊಡುಗೆಯನ್ನು ನೀಡಿದೆ.

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಭಾರತದಲ್ಲಿ ಕಳೆದ ವರ್ಷದ ಮಾರಾಟದಲ್ಲಿ 6.7 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ಕೊನೆಯ ತ್ರೈಮಾಸಿಕದ (ಅಕ್ಟೋಬರ್ - ಡಿಸೆಂಬರ್) ಮಾರಾಟವನ್ನು 2019ರ ಅದೇ ಅವಧಿಯಲ್ಲಿನ ಮಾರಾಟಕ್ಕೆ ಹೋಲಿಸಿದರೆ ಶೇ.51 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಕಂಪನಿ ಹೇಳಿದೆ. ಮಾರಾಟದಲ್ಲಿ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಗೆ ಜಿ 310 ಆರ್ ಮತ್ತು ಜಿ 310 ಜಿಎಸ್ ಮಾದರಿಗಳು ಹೆಚ್ಚಿನ ಕೊಡುಗೆಯನ್ನು ನೀಡಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

ಇನ್ನು ಮಾರಾಟದಲ್ಲಿ ದೊಡ್ಡ ಕೊಡುಗೆಯನ್ನು ನೀಡಿರುವ ಜಿ 310 ಆರ್ ಮತ್ತು ಜಿ 310 ಜಿಎಸ್ ಮಾದರಿಗಳ ಬಗ್ಗೆ ಹೇಳುವುದಾದರೆ, ಕೆಲವು ನವೀಕರಣಗಳನ್ನು ಮಾಡಲಾಗಿದೆ.ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಡ್‌ಲ್ಯಾಂಪ್, ಟರ್ನ್ ಸಿಗ್ನಲ್‌ಗಳು ಮತ್ತು ಟೈಲ್ ಲ್ಯಾಂಪ್‌ಗಾಗಿ ಎಲ್ಇಡಿ ಲೈಟಿಂಗ್ ಅನ್ನು ನವೀಕರಿಸಲಾಗಿದೆ.

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

2020ರ ನವೀಕರಣದ ಭಾಗವಾಗಿ, ಜಿ 310 ಆರ್ ಪ್ಯಾಲೆಟ್‌ಗೆ ಬಿಎಂಡಬ್ಲ್ಯು ಹೊಸ ಬಣ್ಣಗಳನ್ನು ಸೇರಿಸಿದೆ. ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

ಈ ಎಂಜಿನ್ 9,700 ಆರ್‌ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್‌ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿಗ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ.

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಎರಡು ಹೊಸ ಬೈಕುಗಳು ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

ಇನ್ನು ಕಳೆದ ವರ್ಷ ಬಿಎಂಡಬ್ಲ್ಯು ಮತ್ತು ಮಿನಿ ಬ್ರ್ಯಾಂಡ್‌ಗಳು ಸುಮಾರು 6,604 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2020ರ ಅವಧಿಯಲ್ಲಿ ಬಿಎಂಡಬ್ಲ್ಯು ಬ್ರ್ಯಾಂಡ್ 6,092 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದರೆ, ಮಿನಿ ಇಂಡಿಯಾ ಬ್ರ್ಯಾಂಡ್ 512 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

2020ರ ಅವಧಿಯ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಬಿಎಂಡಬ್ಲ್ಯು ಮೋಟೊರಾಡ್

2020ರ ವರ್ಷದ ಅವಧಿಯ ದ್ವಿಚಕ್ರ ಮಾರಾಟದಲ್ಲಿ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯ ಮಾರಾಟದಲ್ಲಿ ಜಿ 310 ಆರ್ ಮತ್ತು ಜಿ 310 ಜಿಎಸ್ ಮಾದರಿಗಳು ಹೆಚ್ಚಿನ ಕೊಡುಗೆಯನ್ನು ನೀಡಿದೆ.

Most Read Articles

Kannada
English summary
MW Motorrad Registers Annual Growth Of 6.7 Percent Led By 310 Twins. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X