ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಜಮರ್ನಿ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ(BMW C 400 GT) ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಆಗಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಇದೀಗ ಬಿಎಂಡಬ್ಲ್ಯು ಕಂಪನಿಯು ತನ್ನ ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಗಾಗಿ ಹೊಸ ಆಕರ್ಷಕ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಭಾರತದಲ್ಲಿ ಬಿಎಂಡಬ್ಲ್ಯು ಮೊಟೊರಾಡ್‌ನ ಮೊದಲ ಮ್ಯಾಕ್ಸಿ-ಸ್ಕೂಟರ್ ಆಗಿದ್ದು, ಇದು 349 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್‌ನಿಂದ ನಡೆಸಲ್ಪಡುವ ಪ್ರೀಮಿಯಂ ಮ್ಯಾಕ್ಸಿ-ಸ್ಕೂಟರ್ ಆಗಿ ಸ್ಥಾನ ಪಡೆಯಲಿದೆ. ಈ ಮ್ಯಾಕ್ಸಿ-ಸ್ಕೂಟರ್ ಪ್ರೀಮಿಯಂ ಬೆಲೆಯನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಪ್ರೀಮಿಯಂ ಸ್ಕೂಟರ್ ಗ್ರಾಹಕರನ್ನು ಇದು ಸೆಳೆಯುತ್ತದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭವಾಗಿದೆ. ಈ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತವನ್ನು ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು, ಭಾರತದಲ್ಲಿ ಮುಂದಿನ ದಿನಗಳಲ್ಲಿ ಸ್ಕೂಟರ್ ಬೆಲೆಯನ್ನು ಕಂಪನಿಯು ಪ್ರಕಟಿಸುವ ಸಾಧ್ಯತೆಯಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಜಾಗತಿಕ ಪೋರ್ಟ್ಫೋಲಿಯೊದಲ್ಲಿರುವ ಬಿಎಂಡಬ್ಲ್ಯು ಕಂಪನಿಯ ಸಿ 400 ಜಿಟಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ದೊಡ್ಡ ಬದಲಾವಣೆಗಳಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ಬಿಎಂಡಬ್ಲ್ಯು ಸಿ 400 ಜಿಟಿ ಮಿಡ್ ಸೈಜ್ ಸ್ಕೂಟರ್ ಆರಾಮದಾಯಕವಾದ ಮಾದರಿಯಾಗಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಜಾಗತಿಕವಾಗಿ ಮಾರಾಟವಾಗುವ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ ಸ್ಕೂಟರ್ ನಲ್ಲಿ 350 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್‌ ಅನ್ನು ಹೊಂದಿದೆ, ಈ ಎಂಜಿನ್ ಎಂಜಿನ್‌ನೊಂದಿಗೆ ಹೊಸ 'ಇ-ಗ್ಯಾಸ್' ತಂತ್ರಜ್ಞಾನದಿಂದ (ನವೀಕರಿಸಿದ ಥ್ರೊಟಲ್-ಬೈ-ವೈರ್ ಸಿಸ್ಟಂ) ಪ್ರಯೋಜನವನ್ನು ಕೂಡ ಹೊಂದಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಪ್ರೀಮಿಯಂ ಸ್ಕೂಟರ್ ನಲ್ಲಿ ಆಕ್ಸಿಜನ್ ಸೆನ್ಸರ್ ಮತ್ತು ನವೀಕರಿಸಿದ ಎಕ್ಸಾಸ್ಟ್ ಸಿಸ್ಟಂ ಸಹ ಹೊಂದಿದೆ. ಈ ಎಲ್ಲಾ ನವೀಕರಣಗಳು ಯುರೋ5 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿದೆ. ಇನ್ನು ಈ ಎಂಜಿನ್ 7.55 ಆರ್‌ಪಿಎಂನಲ್ಲಿ 33.5 ಬಿಹೆಚ್‍ಪಿ ಪವರ್ ಮತ್ತು 5,750 ಆರ್‌ಪಿಎಂನಲ್ಲಿ 139 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಪ್ರೀಮಿಯಂ ಸ್ಕೂಟರ್ 139 ಕಿಲೋಮೀಟರ್ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯು ಮ್ಯಾಕ್ಸಿ ಸ್ಕೂಟರ್ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ. ಇದರೊಂದಿಗೆ ಹೊಸ ಕ್ಲಚ್ ಸ್ಪ್ರಿಂಗ್‌ಗಳೊಂದಿಗೆ ನವೀಕರಿಸಲಾಗಿದೆ. ಇನ್ನು ಈ ಮ್ಯಾಕ್ಸಿ-ಸ್ಕೂಟರ್ ಆಲ್ಪೈನ್ ವೈಟ್, ಮೂನ್ವಾಲ್ಕ್‌ಗ್ರೇ ಮೆಟಾಲಿಕ್ ಮತ್ತು ಬ್ಲಾಕ್‌ಸ್ಟಾರ್ಮ್ ಮೆಟಾಲಿಕ್ ಎಂಬ ಮೂರು ಬಣ್ಣಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ನಲ್ಲಿ ಎಲ್‌ಇಡಿ ಲೈಟಿಂಗ್ ಸಿಸ್ಟಂ, ಸ್ಪೋರ್ಟಿ ವಿ-ಆಕಾರದ ಟ್ರಿಮ್ ಪ್ಯಾನಲ್ ಯುನಿಟ್ ಗಳು, ದೊಡ್ಡ-ಸ್ವರೂಪದ ವಿಂಡ್‌ಸ್ಕ್ರೀನ್, ಏರೋಡೈನಾಮಿಕ್ ವಿನ್ಯಾಸಗೊಳಿಸಲಾದ ಸೀಟ್ ಮತ್ತು ಹೆಚ್ಚಿನವು ಇದರ ಕೆಲವು ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಇತ್ತೀಚೆಗೆ ನವೀಕರಿಸಿದ ಈ ಹೊಸ ಮಾದರಿಯು ಹೊಸ ಬ್ರೇಕ್‌ಗಳು ಮತ್ತು ಪರಿಷ್ಕೃತ ಆಟೋಮ್ಯಾಟಿಕ್ ಸ್ಟಿಬಿಲಿಟಿ ಕಂಟ್ರೋಲ್ (ಎಎಸ್‌ಸಿ) ಯೊಂದಿಗೆ ಬರುತ್ತದೆ. ಎರಡನೆಯದು ಲೋಡ್ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಕೂಡ ಒಳಗೊಂಡಿರುತ್ತದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಈ ಹೊಸ ಬಿಎಂಡಬ್ಲ್ಯು ಮೊಟೊರಾಡ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಬಿಎಂಡಬ್ಲ್ಯು ಜಿ 310 ಜಿಎಸ್ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ, ಇದೀಗ ಬಿಎಂಡಬ್ಲ್ಯು ಕಂಪನಿಯು ಭಾರತದಲ್ಲಿ ಈ ಹೊಸ ಜಿ 310 ಜಿಎಸ್ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದೆ. ಈ 2022ರ ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲಾಕ್. ಎಂಬ ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ, ಇತ್ತೀಚೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ 2022ರ ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲ್ಯಾಕ್ ಎಂಬ ಹೊಸ ಬಣ್ಣವನ್ನು ಪಡೆದಿದೆ.

ಈ ಹೊಸ ಬೈಕಿನಲ್ಲಿ ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಭಾರತದಲ್ಲಿ ಬಿಡುಗಡೆಯಾಗಲಿರುವ 2022ರ ಜಿ 310 ಜಿಎಸ್ ಬೈಕ್ ಕೂಡ ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಈ ಜಿ 310 ಜಿಎಸ್ ಬಿಎಂಡಬ್ಲ್ಯು ಮೋಟರ್‌ರಾಡ್‌ನ ಸಣ್ಣ ವಿಭಾಗದಲ್ಲಿ ಸಾಕಷ್ಟು ಜನಪ್ರಿಯ ಕೊಡುಗೆಯಾಗಿದೆ. ಈ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್‌ಲೈಟ್ ಒಳಗೊಂಡಿದೆ..

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್

ಭಾರತೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,6 ಲಕ್ಷಕ್ಕೆ ಬಿಡುಗಡೆಗೊಳಿಸಬಹುದು ಎಂದು ಅಂದಾಜಿಸಲಾಗಿದೆ. ಮುಂಬರುವ ದಿನಗಳಲ್ಲಿ ಬಿಎಂಡಬ್ಲ್ಯು ಮ್ಯಾಕ್ಸಿ ಸ್ಕೂಟರ್ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಲಿದೆ, ಅಲ್ಲದೇ ಈ ಹೊಸ ಬಿಎಂಡಬ್ಲ್ಯು ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Bmw motorrad revealed new teaser of c 400 gt maxi scooter launch soon in india details
Story first published: Tuesday, October 5, 2021, 20:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X