ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಆರ್ 1250 ಜಿಎಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. 2021ರ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಇದೀಗ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತಮ್ಮ ಸಾಮಾಜಿಕ ಜಾಲತಾಣದ ಪೇಜ್ ನಲ್ಲಿ ಆರ್ 1250 ಜಿಎಸ್ ಅಡ್ವೆಂಚರ್ ಬೈಕ್ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.ಈ ಹೊಸ ಬೈಕ್ ಅನ್ನು ಕಂಪ್ಲೀಟ್ ಬಿಲ್ಟ್-ಅಪ್ ಯುನಿಟ್(ಸಿಬಿಯು) ಆಗಿ ಭಾರತೀಯ ಮಾರುಕಟ್ಟೆಗೆ ತರಬಹುದು. ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನ ಬೆಲೆಯು ಅಂದಾಜು ಎಕ್ಸ್ ಶೋರೂಂ ಪ್ರಕಾರ ರೂ.20 ಲಕ್ಷಗಳಾಗಿರಬಹುದು. ಈ ಆರ್ 1250 ಜಿಎಸ್ ಬಿಎಂಡಬ್ಲ್ಯು ಮೋಟೊರಾಡ್‌ನ ಪ್ರಮುಖ ಅಡ್ವೆಂಚರ್-ಟೂರಿಂಗ್ ಬೈಕ್ ಆಗಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಈ ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಅಡ್ವೆಂಚರ್ ಬೈಕನ್ನು ಹಿಂದಿನ ಮಾದರಿಗಿಂತ ಹಲವಾರು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಲಾಗುತ್ತದೆ. ಇದು ನವೀಕರಿಸಿದ ವಿನ್ಯಾಸ, ಎಂಜಿನ್, ಎಲೆಕ್ಟ್ರಾನಿಕ್ಸ್ ಪ್ಯಾಕೇಜ್ ಮತ್ತು ಹೊಸ ಬಣ್ಣಗಳನ್ನು ಒಳಗೊಂಡಿರುತ್ತದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಹೊಸ ಬಿಎಂಡಬ್ಲ್ಯು ಅಡ್ವೆಂಚರ್ ಬೈಕಿನ ಸ್ಟ್ಯಾಂಡರ್ಡ್ ರೂಪಾಂತರವು ಟ್ರಿಪಲ್ ಬ್ಲ್ಯಾಕ್, ಲೈಟ್ ವೈಟ್ ಮತ್ತು ರ್ಯಾಲಿ ಬಣ್ಣಗಳ ಆಯ್ಕೆಯನ್ನು ಹೊಂದಿದ್ದರೆ, ಅಡ್ವೆಂಚರ್ ರೂಪಾಂತರವು ಟ್ರಿಪಲ್ ಬ್ಲ್ಯಾಕ್, ಐಸ್ ಗ್ರೇ ಮತ್ತು ರ್ಯಾಲಿ ಎಂಬ ಬಣ್ಣಗಳ ಆಯ್ಕೆಯನ್ನು ಹೊಂದಿರುತ್ತದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಹಳೆಯ ಮಾದರಿಗೆ ಹೋಲಿಸಿದರೆ 2021ರ ಬಿಎಂಡಬ್ಲ್ಯು ಆರ್ 1250 ಜಿಎಸ್ ವಿನ್ಯಾಸದ ವಿಷಯದಲ್ಲಿ ಹೆಚ್ಚು ಬದಲಾಗಿಲ್ಲ. ಮುಂಭಾಗದಲ್ಲಿ ಅನನ್ಯವಾಗಿ ವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್, ಫ್ರಂಟ್ ಬೀಕ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್ ಅನ್ನು ಹೊಂದಿರಲಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಈ ಐಷಾರಾಮಿ ಅಡ್ವೆಂಚರ್-ಟೂರರ್ ಬೈಕಿನಲ್ಲಿ ಸಿಂಗಲ್-ಪೀಸ್ ಹ್ಯಾಂಡಲ್‌ಬಾರ್, ಮೆತ್ತನೆಯ ಸೀಟ್, ಆಫ್-ರೋಡ್ ಬಯಾಸ್ಡ್ ಗ್ರಿಪ್ಪಿ ಫುಟ್‌ಪೆಗ್‌ಗಳು ಮತ್ತು ಫ್ಯೂಯಲ್ ಟ್ಯಾಂಕ್ ಸವಾರನಿಗೆ ಎದ್ದು ನಿಂತು ಬೈಕ್ ರೈಡ್ ಮಾಡಲು ಸಾಕಷ್ಟು ಸಹಕಾರಿಯಾಗುವಂತೆ ಫುಟ್ ಪೆಗ್ ಗಳನ್ನು ಒಳಗೊಂಡಿವೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನಲ್ಲಿ ಬಾಕ್ಸರ್ ಕಾನ್ಫಿಗರೇಶನ್‌ನಲ್ಲಿ ಟ್ವಿನ್-ಸಿಲಿಂಡರ್ 1254 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಯುರೋ5 ಮತ್ತು ಬಿಎಸ್6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ,

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಈ ಎಂಜಿನ್ 7,750 ಆರ್‌ಪಿಎಂನಲ್ಲಿ 134 ಬಿಹೆಚ್‌ಪಿ ಪವರ್ ಮತ್ತು 6,250 ಆರ್‌ಪಿಎಂನಲ್ಲಿ 143 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಯಾಗಿ ಸ್ಲಿಪ್-ಅಸಿಸ್ಟ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ.

ಹೊಸ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕ್ ಟೀಸರ್ ಬಿಡುಗಡೆ

ಈ ಬಿಎಂಡಬ್ಲ್ಯು ಆರ್ 1250 ಜಿಎಸ್ ಬೈಕಿನಲ್ಲಿ 6.5-ಇಂಚಿನ ಟಿಎಫ್ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬಿಎಂಡಬ್ಲ್ಯು ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಸ್ಟ್ಯಾಂಡರ್ಡ್ ಆಗಿ ಹೊಂದಿರುತ್ತದೆ. ಇನ್ನು ಈ ಬೈಕಿನಲ್ಲಿ ಯುಎಸ್ಬಿ ಸಾಕೆಟ್, ಇಂಟಿಗ್ರಲ್ ಎಬಿಎಸ್ ಪ್ರೊ, ಹಿಲ್ ಸ್ಟಾರ್ಟ್ ಕಂಟ್ರೋಲ್ (ಎಚ್ಎಸ್ಸಿ), ಡೈನಾಮಿಕ್ ಟ್ರ್ಯಾಕ್ಷನ್ ಕಂಟ್ರೋಲ್ (ಡಿಟಿಸಿ), ಐಎಂಯು ಫುಲ್-ಎಲ್ಇಡಿ ಲೈಟಿಂಗ್ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿರಲಿವೆ.

More from DriveSpark

Article Published On: Tuesday, June 22, 2021, 18:20 [IST]
English summary
2021 BMW R 1250 GS Teased Ahead Of India Debut. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+