130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಜಮರ್ನಿ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಅನಾವರಣಗೊಳಿಸಿದೆ.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಈ ಹೊಸ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 2022ರ ವೇಳೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಪರ್ಮೆನೆಂಟ್ ಮ್ಯಾಗ್ನೆಟ್ ಮೋಟರ್ ಅನ್ನು ಹೊಂದಿದ್ದು, ಇದನ್ನು ಬ್ಯಾಟರಿ ಮತ್ತು ಹಿಂದಿನ ಚಕ್ರದ ನಡುವೆ ಸ್ಟೀಲ್ ಫ್ರೇಮ್ ನಲ್ಲಿ ಜೋಡಿಸಲಾಗಿದೆ. ಇದು 42 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಫ್ಲೋರ್‌ಬೋರ್ಡ್‌ನ ನಡುವೆ 8.9 ಕಿಲೋವ್ಯಾಟ್ ಲಿಥಿಯಂ ಅಯಾನ್ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಮೋಟರ್‌ಗೆ ಇದು ಪವರ್ ಅನ್ನು ನೀಡುತ್ತದೆ. ಹೊಸ ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸ್ಕೂಟರ್ ಸಿಂಗಲ್ ಚಾರ್ಜ್‌ನಲ್ಲಿ 130 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಈ ಸ್ಕೂಟರ್ ಇಕೋ, ರೋಡ್ ಮತ್ತು ರೈನ್ ಎಂಬ ಸ್ಟ್ಯಾಂಡರ್ಡ್ ರೈಡಿಂಗ್ ಮೋಡ್‌ಗಳೊಂದಿಗೆ ಬರುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಡೈನಾಮಿಕ್ ಮತ್ತು ಡೈನಾಮಿಕ್ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಪ್ಯಾಕ್ ಅನ್ನು 2.3 ಕಿ.ವ್ಯಾಟ್ ಚಾರ್ಜರ್ ಮೂಲಕ 4 ಗಂಟೆ 20 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು. ಚಾರ್ಜಿಂಗ್ ಸಮಯವನ್ನು 6.9 ಕಿ.ವ್ಯಾಟ್ ಫಾಸ್ಟ್ ಚಾರ್ಜರ್ ಮೂಲಕ ಒಂದು ಗಂಟೆ 40 ನಿಮಿಷಕ್ಕೆ ಇಳಿಸಬಹುದು.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಹೊಸ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಕೇವಲ 2.6 ಸೆಕೆಂಡುಗಳಲ್ಲಿ 0 ದಿಂದ 50 ಕಿ,ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್ 120 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಈ ಎಲೆಕ್ಟ್ರಿಕ್ ಸ್ಕೂಟರ್ ಟ್ಯೂಬಲರ್ ಸ್ಟೀಲ್ ಫ್ರೇಮ್ ಅನ್ನು ಆಧರಿಸಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 35 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ ಸೈಡಡ್ ಸ್ವಿಂಗಾಮ್ ನೊಂದಿಗ್ ಪ್ರಿ-ಲೋಡ್ ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಅನ್ನು ಒಳಗೊಂಡಿದೆ

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 265 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಇದರೊಂದಿಗೆ ಎಬಿಎಸ್ ಪ್ರೊ ಸಿಸ್ಟಂ ಅನ್ನು ಆಯ್ಕೆಯಾಗಿ ನೀಡಲಾಗುತ್ತದೆ.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಈ ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸ್ಕೂಟರ್ ಸ್ಮಾರ್ಟ್ ಪೋನ್ ಕನೆಕ್ಟಿವಿಟಿ ಹೊಂದಿರುವ ದೊಡ್ಡ 10.25-ಇಂಚಿನ, ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಟಿಎಫ್ಟಿ ಡಿಸ್ ಪ್ಲೇಯನ್ನು ಹೊಂದಿದೆ. ಇದರಲ್ಲಿ ರೈಡಿಂಗ್ ಮೋಡ್ ಗಳ ಮಾಹಿತಿಯನ್ನು ಕೂಡ ಪ್ರದರ್ಶಿಸುತ್ತದೆ.

130 ಕಿ.ಮೀ ರೇಂಜ್ ಹೊಂದಿರುವ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಇನ್ನು ಈ ಸ್ಕೂಟರ್ ನಲ್ಲಿ ಟೈಪ್-ಸಿ ಯುಎಸ್ಬಿ ಚಾರ್ಜಿಂಗ್ ಪೋರ್ಟ್ ನೊಂದಿಗೆ ವೆಂಟಿಲೆಟೆಡ್ ಮೊಬೈಲ್ ಚಾರ್ಜಿಂಗ್ ಪೊರ್ಟ್ ಅನ್ನು ಹೊಂದಿದೆ. ಇನ್ನು ಈ ಸ್ಕೂಟರ್ ನಲ್ಲಿ ಫ್ರಂಟ್ ಏಪ್ರನ್, ಎಲ್ಇಡಿ ಹೆಡ್‌ಲ್ಯಾಂಪ್‌ನೊಂದಿಗೆ ವಿ-ಆಕಾರದ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್ ಮತ್ತು ದೊಡ್ಡ ಸೈಡ್ ಪ್ಯಾನೆಲ್‌ಗಳನ್ನು ಹೊಂದಿವೆ.

Most Read Articles

Kannada
English summary
BMW CE-04 Electric Scooter Revealed. Read In Kannada.
Story first published: Thursday, July 8, 2021, 12:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X