ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಹೊಸ ಇನ್ಪಿನಿಟಿ ಇ1 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಬೌನ್ಸ್(Bounce) ಕಂಪನಿಯು ಹೊಸ ಇವಿ ಸ್ಕೂಟರ್‌ ಮಾದರಿಯೊಂದಿಗೆ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಹೆಚ್ಚಿಸಲು ಮಹತ್ವದ ಯೋಜನೆಯೊಂದನ್ನು ರೂಪಿಸಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಬೌನ್ಸ್ ಕಂಪನಿಯು ತನ್ನ ಗ್ರಾಹಕರಿಗೆ ಬ್ಯಾಟರಿ ರಹಿತವಾಗಿ ಇವಿ ಸ್ಕೂಟರ್ ಅನ್ನು ಖರೀದಿಸುವ ಅವಕಾಶ ನೀಡಿದ್ದು, ಬ್ಯಾಟರಿ ಸೌಲಭ್ಯಕ್ಕಾಗಿ ಗ್ರಾಹಕರು ಪ್ರತ್ಯೇಕವಾಗಿ ವಿನಿಮಯ ಕೇಂದ್ರಗಳೊಂದಿಗೆ ಚಂದಾದಾರಿಕೆ ಪಡೆದುಕೊಂಡು ಬ್ಯಾಟರಿ ವಿನಿಮಯ ಮಾಡಿಕೊಳ್ಳಬಹುದಾಗಿದೆ. ಬ್ಯಾಟರಿ ವಿನಿಮಯ ಸೌಲಭ್ಯವನ್ನು ವಿಸ್ತರಿಸಲು ಕಂಪನಿಯು ನೋಬ್ರೊಕರ್(NoBroker.com) ಕಂಪನಿಯೊಂದಿಗೆ ಪಾಲುದಾರಿಕೆ ಪ್ರಕಟಿಸಿದ್ದು, ನೋಬ್ರೊಕರ್ ಕಂಪನಿಯು ಬೌನ್ಸ್ ಗ್ರಾಹಕರ ಆದ್ಯತೆ ಮೇರೆಗೆ ವಿನಿಮಯ ಕೇಂದ್ರಗಳನ್ನು ತೆರೆಯುವುದರ ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಬ್ಯಾಟರಿ ಸೇವೆಗಳನ್ನು ಸಹ ಒದಗಿಸಲಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ದೇಶಾದ್ಯಂತ ಬ್ಯಾಟರಿ ವಿನಿಮಯ ಕೇಂದ್ರಗಳ ಜಾಲವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಬೌನ್ಸ್ ಕಂಪನಿಯು ಸುಮಾರು 4,400 ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಸಿದ್ದವಾಗಿದ್ದು, ನೋಬ್ರೊಕರ್ ಸೇರಿದಂತೆ ಪಾರ್ಕ್ ಪ್ಲಸ್, ರೇಡಿಯೊಸಿಸ್ಟ್, ಕಿಚನ್ಸ್ ಐಟ್, ಹೆಲೋ ವರ್ಲ್ಡ್ ಮತ್ತು ಗುಡ್‌ಬಾಕ್ಸ್‌ನಂತಹ ಬ್ರ್ಯಾಂಡ್‌ಗಳೊಂದಿಗೆ ಬೌನ್ಸ್ ಕಂಪನಿಯು ಪಾಲುದಾರಿಕೆ ಪ್ರಕಟಿಸಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಬ್ಯಾಟರಿ ವಿನಿಮಯ ಕೇಂದ್ರಗಳು ಶಾಪಿಂಗ್ ಕಾಂಪ್ಲೆಕ್ಸ್‌, ಮಾಲ್‌, ಕಾರ್ಪೊರೇಟ್ ಕಚೇರಿಗಳು, ಮೆಟ್ರೋ ನಿಲ್ದಾಣಗಳು, ಪಾರ್ಕಿಂಗ್ ವಲಯಗಳಲ್ಲಿ ಹಾಗೂ ಇತರ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಲಭ್ಯವಿರಲಿದ್ದು, ಇದಕ್ಕಾಗಿಯೇ ಪ್ರತ್ಯೇಕ ಆ್ಯಪ್ ಅಭಿವೃದ್ದಿಪಡಿಸಿರುವ ಬೌನ್ಸ್ ಕಂಪನಿಯು ಬ್ಯಾಟರಿ ವಿನಿಯಮ ಮತ್ತು ಸೇವೆಗಳನ್ನು ಸರಳಗೊಳಿಸಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಇದು ಇವಿ ಸ್ಕೂಟರ್ ಮಾಲೀಕತ್ವ ಮತ್ತಷ್ಟು ಸುಲಭಗೊಳಿಸಲಿದ್ದು, ಬ್ಯಾಟರಿ ಚಾರ್ಜ್ ಮಾಡಲು ಗಂಟೆಗಟ್ಟಲೇ ಕಾಯಬೇಕಾದ ಅನಿವಾರ್ಯತೆಯನ್ನು ಇದು ತಪ್ಪಿಸಲಿದೆ. ವಿನಿಮಯ ಕೇಂದ್ರಗಳಲ್ಲಿ ಖಾಲಿಯಾಗಿರುವ ಬ್ಯಾಟರಿಗಳನ್ನು ಮರಳಿಸುವುದು ರೀಚಾರ್ಜ್ ಮಾಡಲಾದ ಬ್ಯಾಟರಿ ಪಡೆಯುವುದು ಸುಲಭವಾಗಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಬ್ಯಾಟರಿ ವಿನಿಮಯ ವ್ಯವಹಾರವನ್ನು ಗ್ರಾಹಕರು ಸಂಪೂರ್ಣವಾಗಿ ಆ್ಯಪ್ ಮೂಲಕ ನಿರ್ವಹಿಸಬಹುದಾಗಿದ್ದು, ವಿನಿಯಮ ಕೇಂದ್ರಗಳಲ್ಲಿ ಬ್ಯಾಟರಿ ಲಭ್ಯತೆ, ರೀಚಾರ್ಜ್ ದರ ಪಾವತಿಯು ಸಾಕಷ್ಟು ಸರಳವಾಗಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಇನ್ನು ಬೌನ್ಸ್ ಕಂಪನಿಯು ಪರಿಚಯಿಸಿರುವ ಹೊಸ ಇನ್ಪಿನಿಟಿ ಇ1 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 45,099(ಬ್ಯಾಟರಿ ಮತ್ತು ಚಾರ್ಜರ್ ರಹಿತ) ಬೆಲೆ ಹೊಂದಿದ್ದು, ಬ್ಯಾಟರಿ ಜೋಡಣೆ ಹೊಂದಿರುವ ಬೌನ್ಸ್ ಇವಿ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 68,999 ಬೆಲೆ ಹೊಂದಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಬೌನ್ಸ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ 2kWh ಲೀಥಿಯಂ ಅಯಾನ್ ಬ್ಯಾಟರಿ ಅಳಡಿಸಿದ್ದು, ಅತ್ಯುತ್ತಮ ರೈಡಿಂಗ್ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಹೊಸ ಇವಿ ಸ್ಕೂಟರ್‌ನಲ್ಲಿ ಬಿಎಲ್‌ಡಿಸಿ ಎಲೆಕ್ಟ್ರಿಕ್ ಮೋಟಾರ್ ಮೂಲಕ ಕೇವಲ 8 ಸೆಕೆಂಡುಗಳಲ್ಲಿ ಪ್ರತಿ ಗಂಟೆಗೆ ಸೊನ್ನೆಯಿಂದ 40 ಕಿ.ಮೀ ವೇಗ ಪಡೆದುಕೊಳ್ಳಬಹುದಾಗಿದ್ದು, ಹೊಸ ಸ್ಕೂಟರ್‌ನಲ್ಲಿ ಪ್ರತಿ ಗಂಟೆಗೆ ಗರಿಷ್ಠ 65 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಡ್ರ್ಯಾಗ್ ಮತ್ತು ರಿವರ್ಸ್ ರೈಡ್ ಮೋಡ್ ನೀಡಲಾಗಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಜೊತೆಗೆ ಬೌನ್ಸ್ ಕಂಪನಿಯು ಹೊಸ ಸ್ಕೂಟರ್ ಮೇಲೆ ಸ್ಟ್ಯಾಂಡರ್ಡ್ ಆಗಿ 3 ವರ್ಷ ಅಥವಾ 50 ಸಾವಿರ ಕಿ.ಮೀ ತನಕ ವಾರಂಟಿ ಘೋಷಣೆ ಮಾಡಿದ್ದು, ಶೋರೂಂಗಳ ಬದಲಾಗಿ ಕಂಪನಿಯು ಸಂಪೂರ್ಣವಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಸ್ಕೂಟರ್ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸಲಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಿದ್ದು, ರೌಂಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ರೆಟ್ರೊ-ಶೈಲಿಯ ಫ್ರಂಟ್ ಫೆಂಡರ್, ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕನ್ಸೋಲ್, ಸಿಂಗಲ್ ಪೀಸ್ ಸೀಟ್, 12 ಇಂಚಿನ ಸ್ಪೋರ್ಟಿ ಅಲಾಯ್ ವ್ಹೀಲ್ಸ್, ಪ್ರಮುಖ ಗ್ರ್ಯಾಬ್ ರೈಲ್ ಮತ್ತು ಹರಿತವಾದ ಟೈಲ್ ಲ್ಯಾಂಪ್‌ನಂತಹ ವೈಶಿಷ್ಟ್ಯತೆಗಳೊಂದಿಗೆ ಏರೋಡೈನಾಮಿಕ್ ಪ್ರೊಫೈಲ್ ಹೊಂದಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಹಾಗೆಯೇ ಹೊಸ ಇವಿ ಸ್ಕೂಟರ್‌ನಲ್ಲಿ 12 ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸ್ಟೊರೇಜ್, ಹೈ ಎಂಡ್ ಸ್ಕೂಟರ್‌ಗಳಲ್ಲಿ ಕಂಡುಬರುವ ಕ್ಯಾನ್ಬಸ್ ಜೊತೆ ಹೈಡ್ರಾಲಿಕ್ ಟೆಲಿಸ್ಕೋಪಿಕ್ ಫ್ರಂಟ್ ಸಸ್ಷೆಂಷನ್ ಹಾಗೂ ಹಿಂಬದಿಯಲ್ಲಿ ಟ್ವಿನ್ ಶಾಕ್ ಅಬ್ಸಾರ್ಬರ್ ಹೊಂದಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಬೌನ್ಸ್ ಸ್ಕೂಟರ್‌ನಲ್ಲಿ ಸುರಕ್ಷತೆಗಾಗಿ ಓವರ್/ಅಂಡರ್ ವೊಲ್ಟೇಜ್ ಪ್ರೊಟೆಕ್ಷನ್, ಸೈಡ್ ಸ್ಟ್ಯಾಂಡ್ ಸೆನ್ಸಾರ್, ಬ್ಯಾಟರಿ ಮತ್ತು ಮೋಟಾರ್ ಕಂಟ್ರೋಲರ್, ವಿಸಿಯು, ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಸ್ಕೂಟರ್ ಚಾಲನೆಯನ್ನು ಸರಳಗೊಳಿಸುವ ಕನೆಕ್ಟೆಡ್ ಫೀಚರ್ಸ್, ಆಂಟಿ ಥೆಪ್ಟ್ ಅಲಾರಾಂ ಸೌಲಭ್ಯ ಹೊಂದಿದೆ.

ಇವಿ ಸ್ಕೂಟರ್‌ಗಳ ಬ್ಯಾಟರಿ ವಿನಿಮಯ ಸೌಲಭ್ಯ ವಿಸ್ತರಿಸಲು ಹೊಸ ಪಾಲುದಾರಿಕೆ ಪ್ರಕಟಿಸಿದ ಬೌನ್ಸ್

ಇದರೊಂದಿಗೆ ಹೊಸ ಸ್ಕೂಟರ್ ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಸ್ಪೋರ್ಟಿ ರೆಡ್, ಸ್ಪಾರ್ಕಲ್ ಬ್ಲ್ಯಾಕ್, ಪರ್ಲ್ ವೈಟ್, ಡಿಸ್ಯಾಟ್ ಸಿಲ್ವರ್ ಮತ್ತು ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಮಾರುಕಟ್ಟೆಯಲ್ಲಿ ಪ್ರಮುಖ ಇವಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

Most Read Articles

Kannada
Read more on ಬೌನ್ಸ್ bounce
English summary
Bounce and nobroker partnered for to extend battery swapping
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X