ಶೀಘ್ರದಲ್ಲೇ ಪ್ರಾರಂಭವಾಗಲಿದೆ 2021ರ ಕವಾಸಕಿ ನಿಂಜಾ 300 ಬೈಕ್ ವಿತರಣೆ
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಕವಾಸಕಿ ತನ್ನ ಹೊಸ ನಿಂಜಾ 300 ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ 2021ರ ಕವಾಸಕಿ ನಿಂಜಾ 300 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.3.18 ಲಕ್ಷಗಳಾಗಿದೆ.

ಇನ್ನು ಈ ಬಿಎಸ್ 6 ನಿಂಜಾ 300 ಬೈಕ್ ಖರೀದಿಗೆ ಪ್ರಿ-ಬುಕ್ಕಿಂಗ್ ಅನ್ನು ಈಗಾಗಲೇ ಆರಂಭಿಸಲಾಗಿದೆ. ಕವಾಸಕಿ ನಿಂಜಾ 300 ಬೈಕನ್ನು ಬಿಎಸ್6 ಮಾಲಿನ್ಯ ನಿಯಮ ಜಾರಿಯಾಗುವ ಮುನ್ನವೇ 2019ರ ಡಿಸೆಂಬರ್‌ನಲ್ಲಿ ಸ್ಥಗಿತಗೊಳಿಸಿತ್ತು. ಇದೀಗ ಬಿಎಸ್6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಹೊಸ ಕವಾಸಕಿ ನಿಂಜಾ 300 ಬೈಕನ್ನು ನವೀಕರಿಸಿ ಬಿಡುಗಡೆಗೊಳಿಸಲಾಗಿದೆ.

ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಹೊಸ ಮಾದರಿಗೆ ರೂ.20 ಸಾವಿರ ಹೆಚ್ಚಿಸಲಾಗಿದೆ. ಇನ್ನು ಈ ಹೊಸ ಕವಾಸಕಿ ನಿಂಜಾ 300 ಬೈಕ್ ಡೀಲರುಗಳ ಬಳಿ ತಲುಪಲು ಈಗಾಗಲೇ ಪ್ರಾರಂಭವಾಗಿದೆ. ಶೀಘ್ರದಲ್ಲೇ ಈ ಬೈಕಿನ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಕಂಪನಿ ಹೇಳಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಈ ಕವಾಸಕಿ ನಿಂಜಾ 300 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನ ಅತ್ಯಂತ ಉತ್ತಮ ಮಾದರಿಯಾಗಿದೆ. ಬಿಎಸ್6 ಕವಾಸಕಿ ನಿಂಜಾ 300 ಬೈಕಿನಲ್ಲಿ ಎಂಜಿನ್ ಅನ್ನು ಬದಲಾಯಿಸಲಾಗಿಲ್ಲ. ಅದೇ ಎಂಜಿನ್ ಅನ್ನು ನವೀಕರಿಸಲಾಗಿದೆ. ಇದು 296ಸಿಸಿ ಪ್ಯಾರೆಲಲ್-ಟ್ವಿನ್, ಲಿಕ್ವಿಡ್-ಕೂಲ್ಡ್ ಎಂಜಿನ್ ಆಗಿದೆ.

ಈ ಎಂಜಿನ್ 38.4 ಬಿಹೆಚ್‌ಪಿ ಪವರ್ ಮತ್ತು 27 ಎನ್‌ಎಂ ಪೀಕ್ ಟಾರ್ಕ್ ಅಭಿವೃದ್ಧಿಪಡಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದ್ದು, ಇದರೊಂದಿಗೆ ಅಸಿಸ್ಟ್ ಸ್ಲಿಪ್ಪರ್ ಕ್ಲಚ್ ಅನ್ನು ಪಡೆಯುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಕವಾಸಕಿ ನಿಂಜಾ 300 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಹಿಂದಿನ ಮಾದರಿಗೆ ಹೋಲಿಸಿದರೆ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದರ ಮುಂಭಾಗದಲ್ಲಿ 37ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ.

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಕವಾಸಕಿ ನಿಂಜಾ 300 ಬೈಕಿನ ಮುಂಭಾಗ 290 ಎಂಎಂ ಪೆಡಲ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗ 220 ಎಂಎಂ ಪೆಡಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಇದರ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಕೂಡ ಬದಲಾಯಿಸಲಾಗಿಲ್ಲ. ಎಂಆರ್ಎಫ್ ನೈಲೋಗ್ರಿಪ್ ಟಯರ್ ಗಳನ್ನು ಇದರಲ್ಲಿ ನೀಡಲಾಗಿದೆ. ಹೊಸ ಕವಾಸಕಿ ನಿಂಜಾ 300 ಬೈಕಿನ ವಿನ್ಯಾಸದಲ್ಲಿ ಯಾವುದೇ ಪ್ರಮಖ ಬದಲಾವಣೆಗಳನ್ನು ಮಾಡಲಾಗಿಲ್ಲ.

ಆದರೆ ನಿಂಜಾ ಸರಣಿಯ ಇತರ ದೊಡ್ಡ ಬೈಕ್‌ಗಳಿಂದ ಪ್ರೇರಿತವಾದ ಹೊಸ ಡೆಕಲ್‌ಗಳೊಂದಿಗೆ ಹೊಸ ಮೂರು ಬಣ್ಣಗಳ ಆಯ್ಕೆಗಳನ್ನು ಕೂಡ ಪಡೆದುಕೊಂಡಿದೆ. ಈ 2021ರ ಕವಾಸಕಿ ನಿಂಜಾ 300 ಬೈಕ್ ಗ್ರೀನ್, ಕ್ಯಾಂಡಿ ಲೈಮ್ ಗ್ರೀನ್ ಮತ್ತು ಎಬೊನಿ ಎಂಬ ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಹೊಸ ಕವಾಸಕಿ ನಿಂಜಾ 300 ಬೆಲೆಯನ್ನು ಅದೇ ಸರಣಿಯ ಬೈಕುಗಳಿಗೆ ಹೋಲಿಸಿದರೆ ತುಸು ದುಬಾರಿಯಾಗಿದೆ. 2021ರ ಕವಾಸಕಿ ನಿಂಜಾ 300 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್ಆರ್310 ಮತ್ತು ಕೆಟಿಎಂ ಆರ್‍ಸಿ 390 ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications