ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಜಪಾನ್ ಮೂಲದ ದ್ವಿಚಕ್ರ ಕಂಪನಿಯಾದ ಕವಾಸಕಿ ತನ್ನ ಎಂಟ್ರಿ-ಲೆವೆಲ್ ನಿಂಜಾ 300 ಬೈಕನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಕವಾಸಕಿ ಕಂಪನಿಯು ತನ್ನ ನಿಂಜಾ 300 ಬೈಕನ್ನು ಹೊಸ ನವೀಕರಿರಣಗಳೊಂದಿಗೆ ಬಿಎಸ್-6 ಆವೃತಿಯಾಗಿ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಕೆಲವು ವರದಿಗಳ ಪ್ರಕಾರ, ಹೊಸ ಕವಾಸಕಿ ನಿಂಜಾ 300 ಬೈಕ್ ಈ ವರ್ಷದ ಮಾರ್ಚ್ ತಿಂಗಳ ಅಂತ್ಯದ ವೇಳೆಗೆ ದೇಶಿಯ ಮಾರುಕಟ್ಟೆಯಲ್ಲಿ ಲಗ್ಗೆ ಇಡಲಿದೆ. ಹೊಸ ಕವಾಸಕಿ ನಿಂಜಾ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು. ಈ ಹೊಸ ಕವಾಸಕಿ ನಿಂಜಾ 300 ಬೈಕಿನ ಬೆಲೆಯನ್ನು ರೂ.3.20 ಲಕ್ಷಕ್ಕೆ ನಿಗಧಿಪಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಭಾರತದಲ್ಲಿ ಕವಾಸಕಿ ನಿಂಜಾ 300 ಬೈಕನ್ನು 2018ರಲ್ಲಿ ಮೊದಲಗೆ ಬಿಡುಗಡೆಗೊಳಿಸಿತ್ತು.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಹಿಂದಿನ ನಿಂಜಾ 300 ಬೈಕಿನ ವಿವಿಧ ಬಾಡಿ ಪ್ಯಾನೆಲ್‌ಗಳು, ಬ್ರೇಕ್‌ಗಳು, ಟೈರ್‌ಗಳು ಮತ್ತು ಹೆಡ್‌ಲೈಟ್ ಅನ್ನು ಸ್ಥಳೀಯವಾಗಿ ಜೋಡಿಸಿದ್ದರು. ಇದೀಗ ಎಂಜಿನ್ ಜೋಡಣೆಯನ್ನು ಕೂಡ ಸ್ಥಳೀಯವಾಗಿ ಅಭಿವೃದ್ದಿ ಪಡಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ, ಇದು ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಈ ಹೊಸ ಕವಾಸಕಿ ನಿಂಜಾ 300 ಬೈಕಿನ ಎಂಜಿನ್ ಬಗ್ಗೆ ಹೇಳುವುದಾದರೆ, 296 ಸಿಸಿ ಪ್ಯಾರಲಲ್-ಟ್ವಿನ್ ಲಿಕ್ವೀಡ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 39 ಬಿಹೆಚ್‌ಪಿ ಮತ್ತು 27 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಹೊಸ ಕವಾಸಕಿ ನಿಂಜಾ 300 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಪ್ರೀ-ಲೋಡಡ್ ಮೊನೊ-ಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಇನ್ನು ಸುರಕ್ಷತೆಯ ದೃಷ್ಠಿಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 290 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಿದ್ದಾರೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ಬೆಂಬಲಿಸುತ್ತದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಹೊಸ ಕವಾಸಕಿ ನಿಂಜಾ 300 ಬೈಕಿನಲ್ಲಿ 17 ಇಂಚಿನ ಚಕ್ರಗಳು 110/70 ಫ್ರಂಟ್ ಮತ್ತು 140/70 ರಿಯರ್ ಟಯರ್ ಪ್ರೊಫೈಲ್‌ಗಳನ್ನು ಎಂಆರ್‌ಎಫ್ ರಬ್ಬರ್‌ನೊಂದಿಗೆ ಹೊಂದಿರುತ್ತದೆ. ಇನ್ನು ಹೊಸ ಕವಾಸಕಿ ನಿಂಜಾ 300 ಬೈಕ್ 17 ಲೀಟರ್ ಸಾಮರ್ಥ್ಯದ ದೊಡ್ಡ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿರಲಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಇನ್ನು ಹೊಸ ನಿಂಜಾ 300 ಬೈಕಿನ ವಿನ್ಯಾಸ ಮತ್ತು ಸ್ಟೈಲಿಂಗ್ ವಿಷಯದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ. ಇನ್ನು ಹಿಂದಿನ ಮಾದರಿಯಲ್ಲಿರುವಂತಹ ಫೀಚರ್ ಗಳನ್ನು ಹೊಸ ಕವಾಸಕಿ ನಿಂಜಾ 300 ಬೈಕಿನಲ್ಲಿ ಮುಂದುವರೆಸಲಾಗುತ್ತದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಕವಾಸಕಿ ನಿಂಜಾ 300 ಬೈಕ್

ಹೊಸ ಕವಾಸಕಿ ನಿಂಜಾ 300 ಬೈಕನ್ನು ಸ್ಥಳೀಯವಾಗಿ ಜೋಡಣೆ ಮಾಡುವುದರಿಂದ ಸ್ಪರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು. ಇನ್ನು ಹೊಸ ಕವಾಸಕಿ ನಿಂಜಾ 300 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಿವಿಎಸ್ ಅಪಾಚೆ ಆರ್ಆರ್ 310 ಬೈಕಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Tuesday, February 2, 2021, 9:49 [IST]
English summary
Kawasaki Ninja 300 BS6 India Launch Soon. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+