Just In
- 9 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದುಬಾರಿಯಾಯ್ತು ಜನಪ್ರಿಯ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ ಹೆಚ್ಚು ಜನಪ್ರಿಯವಾದ ಕ್ಲಾಸಿಕ್ 350 ಬೈಕಿನ ಬೆಲೆಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಷ್ಕರಿಸಿದೆ. ಇದರ ಪರಿಣಾಮವಾಗಿ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ತುಸು ದುಬಾರಿಯಾಗಿದೆ.

ಬೈಕಿನ ಬೆಲೆ ಏರಿಕೆಯ ಬಳಿಕ, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಸಿಂಗಲ್-ಚಾನೆಲ್ ಎಬಿಎಸ್ ವೆರಿಯೆಂಟ್ ಬೆಲೆಯು ರೂ.1.63 ಲಕ್ಷಗಳಾದರೆ, ಟಾಪ್-ಎಂಡ್ ಡ್ಯುಯಲ್-ಚಾನೆಲ್ ಎಬಿಎಸ್ ವೆರಿಯೆಂಡ್ ಬೆಲೆಯು ರೂ.1.88 ಲಕ್ಷಗಳಾಗಿದೆ. ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಬೇಸ್ ಮಾದರಿಯ ಬೆಲೆಯನ್ನು ರೂ.1,873 ಗಳವರೆ ಹೆಚ್ಚಿಸಿದರೆ, ಪ್ರಿ ಲೋಡ್ ಟ್ರಿಮ್ ಬೆಲೆಯು ರೂ.2,045 ಗಳವರೆಗೆ ಹೆಚ್ಚಿಸಲಾಗಿದೆ. ಆದರೆ ಇದರ ಪ್ರತಿಸ್ಪರ್ಧಿ ಜಾವಾ ಬೈಕುಗಳಿಗೆ ಹೋಲಿಸಿದರೆ ಅಗ್ಗವಾಗಿದೆ.

ಇನ್ನು ರಾಯಲ್ ಎನ್‌ಫೀಲ್ಡ್ ಕಂಫನಿಯು ತನ್ನ ಹೆಚ್ಚು ಜನಪ್ರಿಯವಾದ ಕ್ಲಾಸಿಕ್ 350 ಬೈಕನ್ನು ಭಾರತದಲ್ಲಿ ನವೀಕರಿಸಲಾಗುತ್ತದೆ. ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ರೌಂಡ್ ಹೆಡ್‌ಲ್ಯಾಂಪ್, ಟಿಯರ್‌ಡ್ರಾಪ್-ಆಕಾರದ ಟರ್ನ್ ಇಂಡಿಕೇಟರ್ಸ್, ಕ್ರೋಮ್ ರಿಯರ್ ವ್ಯೂ ಮಿರರ್ಸ್, ಬ್ರ್ಯಾಂಡ್ ರಿಯರ್ ಫೆಂಡರ್ಸ್ ಮತ್ತು ಕ್ರೋಮ್ಡ್ ಎಕ್ಸಾಸ್ಟ್ ಸಿಸ್ಟಂ ಸೇರಿದಂತೆ ಮೂಲ ರೆಟ್ರೊ ವಿನ್ಯಾಸ ಅಂಶಗಳನ್ನು ಉಳಿಸಿಕೊಂಡಿದೆ.

ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಎಲ್ಇಡಿ ಡಿಆರ್ಎಲ್ ಜೊತೆಗೆ ಹೊಸ ಬಾಡಿ ಪ್ಯಾನಲ್ ಗಳನ್ನು ಹೊಂದಿದೆ. ಆದರೂ ರಾಯಲ್ ಎನ್‌ಫೀಲ್ಡ್ ಹೊಸ ತಲೆಮಾರಿನ ಕ್ಲಾಸಿಕ್ 350 ಬೈಕಿನಲ್ಲಿಯು ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ನೀಡಲಾಗಿಲ್ಲ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕ್ಲಾಸಿಕ್ 350 ಬೈಕ್ ಅಲಾಯ್ ವ್ಹೀಲ್ ಗಳು ಮತ್ತು ವಿಂಡ್ ಡಿಫ್ಲೆಕ್ಟರ್ ಅನ್ನು ಪಡೆದುಕೊಂಡಿದೆ. ಕೆಲವು ಪ್ರಮುಖ ವಿನ್ಯಾಸವು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್, ಹೊಸ ಗ್ರ್ಯಾಪ್ ರೈಲ್, ಕಡಿಮೆ ಹಿಂಭಾಗದ ಫೆಂಡರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಅನಲಾಗ್ ಸ್ಪೀಡೋಮೀಟರ್ ಹೊಂದಿರುವ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಒಳಗೊಂಡಿರುತ್ತದೆ.

ಪ್ರಸ್ತುತ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಕ್ಲಾಸಿಕ್ ಬ್ಲ್ಯಾಕ್, ಪ್ಯೂರ್ ಬ್ಲ್ಯಾಕ್, ಮರ್ಕ್ಯುರಿ ಸಿಲ್ವರ್, ಗನ್‌ಮೆಟಲ್ ಗ್ರೇ, ಸ್ಟ್ರೋಮೈಡರ್ ಸ್ಯಾಂಡ್, ಏರ್ ಬೋನ್ ಬ್ಲೂ, ಕ್ರೋಮ್, ಸ್ಟೆಲ್ತ್ ಬ್ಲ್ಯಾಕ್ ಆರೆಂಜ್ ಎಂಬರ್ ಮತ್ತು ಮೆಟಲ್ಲೊ ಸಿಲ್ವರ್ ಸೇರಿದಂತೆ 12 ರೀತಿಯ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಸೆಟಪ್‌ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗುವುದು. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗುವುದು.

ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕನ್ನು ಇದೇ ಪ್ಲಾಟ್‌ಫಾರ್ಮ್‌ನಡಿಯಲ್ಲಿ ತಯಾರಿಸಲಾಗಿದೆ. ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್ ಅಸ್ತಿತ್ವದಲ್ಲಿರುವ ಪ್ಲಾಟ್‌ಫಾರ್ಮ್‌ಗಿಂತ ಹಗುರವಾಗಿರುತ್ತದೆ, ಇನ್ನು 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ಹೊಸ 350ಸಿಸಿ, ಸುಧಾರಿತ ಎಸ್‌ಒಹೆಚ್‌ಸಿ ಕಾನ್ಫಿಗರೇಶನ್‌ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಬಹುದು.

350ಸಿಸಿ ಎಂಜಿನ್ 20.2 ಬಿಹೆಚ್‌ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ ಈ 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.