ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿ ಪಡಿಸಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ. ಈಗ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‍‍ಸೈಕಲ್ ಸಹ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಲಿಮಿಟೆಡ್ ದೇಶಿಯ ಮಾರುಕಟ್ಟೆಯಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಹಾಗೂ ಅಭಿವೃದ್ಧಿಪಡಿಸಿದ ವಾಹನಗಳೊಂದಿಗೆ ಅದ್ಭುತ ಯಶಸ್ಸನ್ನು ಕಾಣುತ್ತಿದೆ. ಕಂಪನಿಯ Gixxer ಸರಣಿಯ ಬೈಕುಗಳು ಭಾರತದಲ್ಲಿ ಸಾಕಷ್ಟು ಜನಪ್ರಿಯವಾಗಿವೆ. ಇದರ ಜೊತೆಗೆ ಕಂಪನಿಯ ಸುಜುಕಿ ಆಕ್ಸೆಸ್, ಬರ್ಗ್‌ಮ್ಯಾನ್ ಹಾಗೂ ಇಂಟ್ರುಡರ್ ವಾಹನಗಳು ಸಹ ತಮ್ಮ ತಮ್ಮ ಸೆಗ್ ಮೆಂಟ್'ಗಳಲ್ಲಿ ಜನಪ್ರಿಯವಾಗಿವೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಜುಕಿ ಮೋಟಾರ್‌ಸೈಕಲ್ ಸಹ ಈ ಸೆಗ್ ಮೆಂಟಿನಲ್ಲಿ ತನ್ನ ವಾಹನವನ್ನು ಬಿಡುಗಡೆಗೊಳಿಸಲು ಸಿದ್ಧವಾಗಿದೆ. ಭಾರತದಲ್ಲಿ ಪ್ರಮುಖ ದ್ವಿಚಕ್ರ ವಾಹನ ಕಂಪನಿಗಳಾದ ಬಜಾಜ್ ಆಟೋ ಹಾಗೂ ಟಿವಿಎಸ್ ಮೋಟಾರ್ ಕಂಪನಿಗಳು ಕ್ರಮವಾಗಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಹಾಗೂ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿವೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಇದರ ಜೊತೆಗೆ ಹೀರೋ ಮೋಟೋಕಾರ್ಪ್ ಕಂಪನಿಯು ಸಹ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು 2022 ರಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದೆ. ಹೋಂಡಾ ಹಾಗೂ ಯಮಹಾ ಕಂಪನಿಗಳು ಸಹ ಈ ವಿಭಾಗವನ್ನು ಪ್ರವೇಶಿಸುವ ಯೋಜನೆಯನ್ನು ಹೊಂದಿವೆ. ಈ ಸನ್ನಿವೇಶದಲ್ಲಿ ಸುಜುಕಿ ಮೋಟಾರ್‌ಸೈಕಲ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗಕ್ಕೆ ಪ್ರವೇಶಿಸುವ ಮುಂದಿನ ಕಂಪನಿಯಾಗಬಹುದು.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಸುಜುಕಿ ಮೋಟಾರ್‌ಸೈಕಲ್‌ ಕಂಪನಿಯ ಸುಜುಕಿ ಬರ್ಗ್‌ಮ್ಯಾನ್ ಎಲೆಕ್ಟ್ರಿಕ್ ಸ್ಕೂಟರ್ ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಹಲವು ಬಾರಿ ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಕಂಡುಬಂದಿದೆ. ಈಗ ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ಮಾಧ್ಯಮ ಆಹ್ವಾನವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಂಪನಿಯು ನವೆಂಬರ್ 18 ರ ದಿನಾಂಕದ ಬಗ್ಗೆ ತಿಳಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಇದರ ಅನ್ವಯ ಕಂಪನಿಯು ತನ್ನ ಸುಜುಕಿ ಬರ್ಗ್‌ಮ್ಯಾನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ನವೆಂಬರ್ 18 ರಂದು ಜಾಗತಿಕವಾಗಿ ಪರಿಚಯಿಸಲಿದೆ ಎಂದು ಹೇಳಲಾಗಿದೆ. ಸುಜುಕಿ ಬರ್ಗ್‌ಮ್ಯಾನ್ ಎಲೆಕ್ಟ್ರಿಕ್ ಸ್ಕೂಟರ್, ಮಾರುಕಟ್ಟೆಯಲ್ಲಿರುವ ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ 125 ಸ್ಕೂಟರಿನಲ್ಲಿರುವಂತಹ ವಿನ್ಯಾಸವನ್ನು ಹೊಂದಿದೆ. ಪರೀಕ್ಷಾರ್ಥ ಸಂದರ್ಭದಲ್ಲಿ ಇದು ಬಹಿರಂಗವಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಬರ್ಗ್‌ಮನ್ ಸ್ಟ್ರೀಟ್‌ ಸ್ಕೂಟರಿನಲ್ಲಿರುವ ದೊಡ್ಡ ಹೆಡ್‌ಲೈಟ್ ಹಾಗೂ ಮುಂಭಾಗದ ಏಪ್ರನ್ ಅನ್ನು ಈ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಳಸಲಾಗಿದೆ. ಮಾಹಿತಿಯ ಪ್ರಕಾರ, ಸುಜುಕಿ ಬರ್ಗ್‌ಮ್ಯಾನ್ ಎಲೆಕ್ಟ್ರಿಕ್‌ ಸ್ಕೂಟರಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಸ್ಪ್ರಿಂಗ್ ಲೋಡ್ ಡ್ಯುಯಲ್ ಸಸ್ಪೆಂಷನ್ ಸೆಟಪ್ ನೀಡಲಾಗಿದೆ. ಈ ಸ್ಕೂಟರ್ 5 ಸ್ಪೋಕ್ ಅಲಾಯ್ ವ್ಹೀಲ್ ಹಾಗೂ ರೇರ್ ಟಯರ್ ಮಡ್ಗಾರ್ಡ್ ಅನ್ನು ಸಹ ಹೊಂದಿದೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಇದರ ಜೊತೆಗೆ ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಎಲ್ಇಡಿ ಹೆಡ್ ಲೈಟ್, ಎಲ್ಇಡಿ ಟೇಲ್ ಲೈಟ್ ಯು‌ಎಸ್‌ಬಿ ಚಾರ್ಜಿಂಗ್ ಸೇರಿದಂತೆ ಹಲವಾರು ಫೀಚರ್ ಗಳನ್ನು ನೀಡಲಾಗುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣ ಬಿಳಿ ಬಣ್ಣವನ್ನು ಹೊಂದಿರಲಿದ್ದು, ಸೈಡ್ ಪ್ರೊಫೈಲ್‌ನಲ್ಲಿ ಬ್ಲೂ ಅಸೆಂಟ್ ನೀಡಲಾಗುತ್ತದೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಈ ಎಲೆಕ್ಟ್ರಿಕ್ ಸ್ಕೂಟರ್ ಬರ್ಗ್‌ಮ್ಯಾನ್ ಸ್ಟ್ರೀಟ್‌ನಷ್ಟು ದೊಡ್ಡದಾಗಿ ಹಾಗೂ ವಿಶಾಲವಾಗಿರಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಬರ್ಗ್‌ಮ್ಯಾನ್ ಸ್ಟ್ರೀಟ್ 110 ಸಿಸಿ ಕಾರ್ಯಕ್ಷಮತೆಗಿಂತ ಉತ್ತಮವಾಗಿರುತ್ತದೆ. ಈ ಸ್ಕೂಟರ್‌ ಬೆಲ್ಟ್ ಡ್ರೈವ್ ಬಳಸುವ ಸಾಧ್ಯತೆಗಳಿವೆ. ವರದಿಗಳ ಪ್ರಕಾರ ಬರ್ಗ್‌ಮ್ಯಾನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 100 - 120 ಕಿ.ಮೀಗಳವರೆಗೆ ಚಲಿಸಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಈ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಸುಜುಕಿ ಬರ್ಗ್‌ಮ್ಯಾನ್ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ. 1.20 ಲಕ್ಷಗಳಾಗುವ ಸಾಧ್ಯತೆಗಳಿವೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಹೆಚ್ಚುತ್ತಿರುವ ಇಂಧನ ದರಗಳ ಕಾರಣಕ್ಕೆ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಭಾರತದಲ್ಲಿ ಈಗಾಗಲೇ ಹಲವು ಸ್ಟಾರ್ಟ್ ಅಪ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿವೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಹೆಚ್ಚು ಬೇಡಿಕೆಯಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಲವು ಕೊಡುಗೆಗಳನ್ನು ನೀಡುತ್ತಿವೆ.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಬಗ್ಗೆ ನಿರೀಕ್ಷೆ ಮೂಡಿಸಿದ ಸುಜುಕಿ ಮಾಧ್ಯಮ ಆಹ್ವಾನ

ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಜೊತೆಗೆ ದೆಹಲಿ ಹಾಗೂ ಗುಜರಾತ್ ನಂತಹ ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನಿಡುವಲ್ಲಿ ದೆಹಲಿ ಸರ್ಕಾರವು ಇತರ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Burgman electric scooter could be launched next week details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X