ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಚೀನಾ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸಿಎಫ್‌ಮೋಟೋ ತನ್ನ ಬಿಎಸ್-6 300ಎನ್‌ಕೆ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.2.29 ಲಕ್ಷಗಳಾಗಿದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಇದೀಗ ಸಿಎಫ್‌ಮೋಟೋ ಕಂಪನಿಯು ಈ ಹೊಸ 300ಎನ್‌ಕೆ ಬೈಕಿನ ವಿತರಣೆಯನ್ನು ಪ್ರಾರಂಭಿಸಿದೆ ಎಂದು ವರದಿಗಳಾಗಿದೆ. ಈ ಹೊಸ ಬೈಕಿನಲ್ಲಿ ನವೀಕರಿಸಿದ ಎಂಜಿನ್ ಸ್ಪೆಕ್ಸ್ ಮತ್ತು ಹೊಸ ಬೈಕಿನಲ್ಲಿ ಮಾಡಿದ ಬದಲಾವಣೆಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಬಿಎಸ್-6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ಫುಲ್-ಎಲ್ಇಡಿ ಹೆಡ್‌ಲ್ಯಾಂಪ್, ಮಸ್ಕ್ಲರ್ ಫ್ಯೂಯಲ್ ಟ್ಯಾಂಕ್, ಅಪ್‌ಸ್ಪೆಟ್ ಹಿಂಭಾಗದ ವಿಭಾಗ, ಸ್ಪ್ಲಿಟ್-ಸೀಟ್ ಸೆಟಪ್, ಅಂಡರ್ ಬೆಲ್ಲಿ ಎಕ್ಸಾಸ್ಟ್, ರಿಯರ್-ಫೆಂಡರ್ ಮೌಂಟಡ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಇನ್ನು ಇದರೊಂದಿಗೆ 5-ಸ್ಪೋಕ್ ಅಲಾಯ್ ವ್ಹೀಲ್ ಅನ್ನು ನೀಡಲಾಗಿದೆ. ಇನ್ನು ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್ ಬಣ್ಣ ಮತ್ತು ಗ್ರಾಫಿಕ್ಸ್ ಹಿಂದಿನ ಮಾದರಿಗೆ ಹೋಲುತ್ತದೆ. ಫೀಚರ್ ಗಳು ಕೂಡ ಹಿಂದಿನ ಮಾದರಿಯಲ್ಲಿರುವುದನ್ನು ಅದೇ ರೀತಿ ಮುಂದುವರೆಸಲಾಗಿದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಈ ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್ ಫುಲ್ ಎಲ್ಇಡಿ ಲೈಟಿಂಗ್ ಮತ್ತು ಎರಡು ಡಿಸ್ ಪ್ಲೇ ಮೋಡ್ ಗಳೊಂದಿಗೆ ಕಲರ್ ಟಿಎಫ್ಟಿ ಸ್ಕ್ರೀನ್ ಅನ್ನು ಹೊಂದಿದೆ. ಬಿಎಸ್-6 3 ಸಿಎಫ್‌ಮೋಟೋ 300ಎನ್‌ಕೆ ಬೈಕ್ ಹೊಸ ಫೀಚರ್ ಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ 1,990 ಎಂಎಂ ಉದ್ದ, 1,070 ಎಂಎಂ ಎತ್ತರವಿದೆ ಮತ್ತು 1,360 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ ಬೈಕು ಸೀಟ್ ಎತ್ತರವನ್ನು 795ಎಂಎಂ ನೀಡಿದರೆ, ಗ್ರೌಂಡ್ ಕ್ಲಿಯರೆನ್ಸ್ 150 ಎಂಎಂ ಆಗಿದೆ. ಇನ್ನು 2.5-ಲೀಟರ್ ಇಂಧನ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಇನ್ನು ಈ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಒದಗಿಸುತ್ತದೆ. ಈ ಬೈಕ್ ಒಟ್ಟು 151 ಕೆ.ಜಿ. ತೂಕವಿದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಸ್ಟೈಲಿಂಗ್ ಮತ್ತು ಫೀಚರ್ ಗಳಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಿಲ್ಲ. ಆದರೆ ಇದರಲ್ಲಿ ಪ್ರಮುಖ ಬದಲಾವಣೆ ಎಂದರೆ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಇನ್ನು ಈ ಹೊಸ ಬೈಕಿನಲ್ಲಿ ಅದೇ 292.4ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇದರ ಹಿಂದಿನ ಬಿಎಸ್ 4 ಮಾದರಿಯು 28 ಬಿಹೆಚ್‌ಪಿ ಪವರ್ ಮತ್ತು 25 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತಿತ್ತು. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್‌ನೊಂದಿಗೆ ಜೋಡಿಸಲಾಗುತ್ತದೆ.

ಭಾರತದಲ್ಲಿ ಬಿಎಸ್6 ಸಿಎಫ್‌ಮೋಟೋ 300ಎನ್‌ಕೆ ಬೈಕ್ ವಿತರಣೆ ಆರಂಭ

ಆದರೆ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಪವರ್ ಮತ್ತು ಟಾರ್ಕ್ ಅಂಕಿಅಂಶಗಳು ಇದೇ ರೀತಿ ಇರಬಹುದು ಎಂದು ನಿರೀಕ್ಷಿಸುತ್ತೇವೆ. ಶೀಘ್ರದಲ್ಲೇ ಸಿಎಫ್‌ಮೊಟೊ ಕಂಪನಿಯು ತನ್ನ ಬಿಎಸ್6 300ಎನ್‌ಕೆ ಬೈಕಿನ ತಾಂತ್ರಿಕ ಮಾಹಿತಿಗಳನ್ನು ಬಹಿರಂಗಪಡಿಸಬಹುದು.

More from DriveSpark

Article Published On: Monday, June 14, 2021, 17:25 [IST]
English summary
Cfmoto 300nk Bs6 Deliveries Begin. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+