Just In
- 26 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಟೀಸರ್ ಬಿಡುಗಡೆ
ಚೀನಾ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸಿಎಫ್‌ಮೋಟೋ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಿಎಸ್-6 300ಎನ್‌ಕೆ ಬೈಕನ್ನು ಪರಿಚಯಿಸಲಿದೆ. ಇದೀಗ ಸಿಎಫ್‌ಮೋಟೋ ತನ್ನ ಈ ಹೊಸ 300ಎನ್‌ಕೆ ಬೈಕಿನ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.

ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಟೀಸರ್ ಚಿತ್ರ ಹೆಡ್‌ಲೈಟ್ ಬೆಳಕಿನ ಪ್ರದರ್ಶನದಿಂದ ಕೂಡಿದೆ. ಇದು ಹಿಂದಿನ ಬಿಎಸ್-4 ಮಾದರಿಯನ್ನು ಹೋಲುತ್ತದೆ. ಸ್ಟೈಲಿಂಗ್‌ನಲ್ಲಿ ಯಾವುದೇ ಪ್ರಮುಖ ಬದಲಾವಣೆಗಳನ್ನು ನಿರೀಕ್ಷಿಸುವುದಿಲ್ಲ, ಆದರೂ ಹೊಸ ಮಾದರಿಯನ್ನು ಹಿಂದಿನ ಮಾದರಿಗಿಂತ ವಿಭಿನ್ನವಾಗಿ ಕಾಣಲು ಹೊಸ ಬಣ್ಣಗಳ ಆಯ್ಕೆ ಮತ್ತು ಗ್ರಾಫಿಕ್ಸ್ ಅನ್ನು ಪರಿಷ್ಕರಿಸಬಹುದು.

ಇನ್ನು ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್ ಡ್ಯುಯಲ್-ಟೋನ್ ಬಣ್ಣ, ಸ್ಪ್ಲಿಟ್-ಸ್ಟೈಲ್ ಸೀಟ್, ಹಿಂಭಾಗದ ಫೆಂಡರ್ ಮೌಂಟಡ್ ನಂಬರ್‌ಪ್ಲೇಟ್ ಮತ್ತು ಅಂಡರ್‌ಬೆಲ್ಲಿ ಎಕ್ಸಾಸ್ಟ್ ಫಿಚರ್ ನೊಂದಿಗ ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿರುತ್ತದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ಈ ಬಿಎಸ್-6 300ಎನ್‌ಕೆ ಬೈಕ್ ಫುಲ್ ಎಲ್ಇಡಿ ಲೈಟಿಂಗ್ ಮತ್ತು ಕಲರ್ ಟಿಎಫ್ಟಿ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಈ ಸಿಎಫ್‌ಮೋಟೋ 300ಎನ್‌ಕೆ ಬೈಕಿನಲ್ಲಿ ಕೆಲವು ಹೊಸ ಫೀಚರ್ ಗಳು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

ಇನ್ನು ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಅಪ್ ಸೈಡ್-ಡೌನ್ ಫೋರ್ಕ್‌ಗಳು ಮತ್ತು ಹಿಂಭಾಗದ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿರುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಸಿಎಫ್‌ಮೋಟೋ 300ಎನ್‌ಕೆ ಬೈಕ್ ಎರಡು ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಬಹುದು. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಒದಗಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಸಿಎಫ್‌ಮೋಟೋ 300ಎನ್‌ಕೆ ಬೈಕಿನ ಸ್ಟೈಲಿಂಗ್ ಮತ್ತು ಫೀಚರ್ ಗಳಲ್ಲಿ ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಆದರೆ ಇದರಲ್ಲಿ ಪ್ರಮುಖ ಬದಲಾವಣೆ ಅಂದರೆ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ.

ಇನ್ನು ಈ ಹೊಸ ಬೈಕಿನಲ್ಲಿ ಅದೇ 292.4ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇದರ ಹಿಂದಿನ ಬಿಎಸ್ 4 ಮಾದರಿಯು 33.5 ಬಿಹೆಚ್‌ಪಿ ಪವರ್ ಮತ್ತು 20.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತಿತ್ತು.

ಆದರೆ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಪವರ್ ಮತ್ತು ಟಾರ್ಕ್ ಅಂಕಿಅಂಶಗಳು ಸ್ವಲ್ಪ ಭಿನ್ನವಾಗಿರಬಹುದು. ಇನ್ನು ಈ ಹೊಸ ಸಿಎಫ್‌ಮೋಟೋ 300ಎನ್‌ಕೆ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.