ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಳಕ್ಕಾಗಿ ಕ್ರೆಡರ್ ಕಂಪನಿಯು ವಿವಿಧ ಆಟೋ ಉತ್ಪಾದನಾ ಕಂಪನಿಗಳ ಜೊತೆಗೂಡಿ ಎಕ್ಸ್‌ಚೆಂಜ್ ಆಫರ್‌ಗಳನ್ನು ಆರಂಭಿಸಿದ್ದು, ಪೆಟ್ರೋಲ್ ಎಂಜಿನ್ ಹೊಂದಿರುವ ದ್ವಿಚಕ್ರಗಳನ್ನು ಎಲೆಕ್ಟ್ರಿಕ್ ವಾಹನಗಳೊಂದಿಗೆ ಬದಲಾಯಿಸಿಕೊಳ್ಳುವ ಸುವರ್ಣಾವಕಾಶ ನೀಡಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಕ್ರೆಡರ್ ಕಂಪನಿಯು ಸದ್ಯ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ವಿವಿಧ ರಾಜ್ಯಗಳಲ್ಲಿ ಹಲವಾರು ಮಾರಾಟ ಮಳಿಗೆಗಳನ್ನು ಹೊಂದಿದೆ. ಇದೀಗ ಬಿಲೈವ್ ಕಂಪನಿಯ ಜೊತೆಗೂಡಿ ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿರುವ ಕ್ರೆಡರ್ ಕಂಪನಿಯು ಪೆಟ್ರೋಲ್ ಬೈಕ್ ಅಥವಾ ಸ್ಕೂಟರ್‌ಗಳನ್ನು ಎಲೆಕ್ಟ್ರಿಕ್ ಸ್ಕೂಟರ್‌ಗಳೊಂದಿಗೆ ಎಕ್ಸ್‌ಚೆಂಜ್ ಮಾಡಿಕೊಳ್ಳಲು ಗ್ರಾಹಕರಿಗೆ ಸಹಕಾರಿಯಾಗುವ ಒಪ್ಪಂದ ಮಾಡಿಕೊಂಡಿವೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಇ-ಬೈಕ್ ಟೂರ್ ಆಯೋಜಿಸುವ ಬಿಲೈವ್ ಕಂಪನಿಯು ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಸಹ ಮಾರಾಟ ಮಾಡುತ್ತಿದ್ದು, ಎಕ್ಸ್‌ಚೆಂಜ್ ಆಫರ್‌ಗಳಿಗಾಗಿ ಕ್ರೆಡರ್ ಕಂಪನಿಯು ಬಿಲೈವ್ ಕಂಪನಿಗೆ ಸಹಕಾರಿಯಾಗಲಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಆಸಕ್ತ ಗ್ರಾಹಕರು ತಮ್ಮ ಸಾಮಾನ್ಯ ಬೈಕ್‌ ಅಥವಾ ಸ್ಕೂಟರ್‌ಗಳನ್ನು ಎಲೆಕ್ಟ್ರಿಕ್ ಮಾದರಿಯೊಂದಿಗೆ ಬದಲಾಯಿಸಿರುವ ಆಸಕ್ತಿ ಇದ್ದಲ್ಲಿ ಕ್ರೆಡರ್ ಕಂಪನಿಯು ಉತ್ತಮ ಬೆಲೆಯೊಂದಿಗೆ ಎಕ್ಸ್‌ಚೆಂಜ್ ಆಫರ್‌ಗಳನ್ನು ಪ್ರಕಟಿಸಲಿದ್ದು, ಬಿಲೈವ್ ಕಂಪನಿಯು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಎಕ್ಸ್‌ಚೆಂಜ್ ಆಫ‌ರ್‌ಗಳಲ್ಲಿ ಮಾರಾಟ ಮಾಡಲಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಕ್ರೆಡರ್ ಕಂಪನಿಯು ಸಾಮಾನ್ಯ ಬೈಕ್‌ಗಳನ್ನು ಆಕರ್ಷಕ ಬೆಲೆಗಳೊಂದಿಗೆ ಖರೀದಿ ಮಾಡಲಿದ್ದು, ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಸುಲಭ ಎಕ್ಸ್‌ಚೆಂಜ್ ಆಫರ್ ನೀಡಲಿದೆ. ಜೊತೆಗೆ ಕರೋನಾ ವೈರಸ್ ಹಿನ್ನಲೆಯಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಹೊಸ ಸೇವೆಗಳನ್ನು ಒದಗಿಸಲಿದೆ. ಜೊತೆಗೆ ಕ್ರೆಡರ್ ಮೂಲಕ ಬರುವ ಗ್ರಾಹಕರಿಗೆ ಬಿಲೈವ್ ಕಂಪನಿಯು ವಿಶೇಷ ಆಫರ್‌ಗಳನ್ನು ಸಹ ನೀಡಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಅತ್ಯುತ್ತಮ ಬೆಲೆ ನಿರ್ಧರಿಸುವಲ್ಲಿ ಕ್ರೆಡರ್ ಮುಂಚೂಣಿಯಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಇನ್ನು ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದರೂ ಚಾರ್ಜಿಂಗ್ ಸೌಲಭ್ಯಗಳ ಸಮಸ್ಯೆಯು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದ ಮೇಲೆ ಹೆಚ್ಚಿನ ಗಮನಹರಿಸಿವೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ತ್ವರಿತವಾಗಿ ಚಾರ್ಜಿಂಗ್ ಸೌಲಭ್ಯ ಒದಗಿಸಲು ದೇಶದ ಪ್ರಮುಖ ನಗರಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಹೆಚ್ಚಿಸಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಪ್ರೋತ್ಸಾಹ ಧನ ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಇದು ಕೂಡಾ ಸಹಜವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬದಲಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿದೆ.

Most Read Articles

Kannada
English summary
CredR Blive comes into partnership to launch two wheeler exchange program. Read in Kannada.
Story first published: Saturday, January 23, 2021, 22:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X