Just In
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್
ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಳಕ್ಕಾಗಿ ಕ್ರೆಡರ್ ಕಂಪನಿಯು ವಿವಿಧ ಆಟೋ ಉತ್ಪಾದನಾ ಕಂಪನಿಗಳ ಜೊತೆಗೂಡಿ ಎಕ್ಸ್ಚೆಂಜ್ ಆಫರ್ಗಳನ್ನು ಆರಂಭಿಸಿದ್ದು, ಪೆಟ್ರೋಲ್ ಎಂಜಿನ್ ಹೊಂದಿರುವ ದ್ವಿಚಕ್ರಗಳನ್ನು ಎಲೆಕ್ಟ್ರಿಕ್ ವಾಹನಗಳೊಂದಿಗೆ ಬದಲಾಯಿಸಿಕೊಳ್ಳುವ ಸುವರ್ಣಾವಕಾಶ ನೀಡಿದೆ.

ಕ್ರೆಡರ್ ಕಂಪನಿಯು ಸದ್ಯ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ವಿವಿಧ ರಾಜ್ಯಗಳಲ್ಲಿ ಹಲವಾರು ಮಾರಾಟ ಮಳಿಗೆಗಳನ್ನು ಹೊಂದಿದೆ. ಇದೀಗ ಬಿಲೈವ್ ಕಂಪನಿಯ ಜೊತೆಗೂಡಿ ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿರುವ ಕ್ರೆಡರ್ ಕಂಪನಿಯು ಪೆಟ್ರೋಲ್ ಬೈಕ್ ಅಥವಾ ಸ್ಕೂಟರ್ಗಳನ್ನು ಎಲೆಕ್ಟ್ರಿಕ್ ಸ್ಕೂಟರ್ಗಳೊಂದಿಗೆ ಎಕ್ಸ್ಚೆಂಜ್ ಮಾಡಿಕೊಳ್ಳಲು ಗ್ರಾಹಕರಿಗೆ ಸಹಕಾರಿಯಾಗುವ ಒಪ್ಪಂದ ಮಾಡಿಕೊಂಡಿವೆ.

ಇ-ಬೈಕ್ ಟೂರ್ ಆಯೋಜಿಸುವ ಬಿಲೈವ್ ಕಂಪನಿಯು ವಿವಿಧ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಸಹ ಮಾರಾಟ ಮಾಡುತ್ತಿದ್ದು, ಎಕ್ಸ್ಚೆಂಜ್ ಆಫರ್ಗಳಿಗಾಗಿ ಕ್ರೆಡರ್ ಕಂಪನಿಯು ಬಿಲೈವ್ ಕಂಪನಿಗೆ ಸಹಕಾರಿಯಾಗಲಿದೆ.

ಆಸಕ್ತ ಗ್ರಾಹಕರು ತಮ್ಮ ಸಾಮಾನ್ಯ ಬೈಕ್ ಅಥವಾ ಸ್ಕೂಟರ್ಗಳನ್ನು ಎಲೆಕ್ಟ್ರಿಕ್ ಮಾದರಿಯೊಂದಿಗೆ ಬದಲಾಯಿಸಿರುವ ಆಸಕ್ತಿ ಇದ್ದಲ್ಲಿ ಕ್ರೆಡರ್ ಕಂಪನಿಯು ಉತ್ತಮ ಬೆಲೆಯೊಂದಿಗೆ ಎಕ್ಸ್ಚೆಂಜ್ ಆಫರ್ಗಳನ್ನು ಪ್ರಕಟಿಸಲಿದ್ದು, ಬಿಲೈವ್ ಕಂಪನಿಯು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಎಕ್ಸ್ಚೆಂಜ್ ಆಫರ್ಗಳಲ್ಲಿ ಮಾರಾಟ ಮಾಡಲಿದೆ.

ಕ್ರೆಡರ್ ಕಂಪನಿಯು ಸಾಮಾನ್ಯ ಬೈಕ್ಗಳನ್ನು ಆಕರ್ಷಕ ಬೆಲೆಗಳೊಂದಿಗೆ ಖರೀದಿ ಮಾಡಲಿದ್ದು, ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಸುಲಭ ಎಕ್ಸ್ಚೆಂಜ್ ಆಫರ್ ನೀಡಲಿದೆ. ಜೊತೆಗೆ ಕರೋನಾ ವೈರಸ್ ಹಿನ್ನಲೆಯಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಹೊಸ ಸೇವೆಗಳನ್ನು ಒದಗಿಸಲಿದೆ. ಜೊತೆಗೆ ಕ್ರೆಡರ್ ಮೂಲಕ ಬರುವ ಗ್ರಾಹಕರಿಗೆ ಬಿಲೈವ್ ಕಂಪನಿಯು ವಿಶೇಷ ಆಫರ್ಗಳನ್ನು ಸಹ ನೀಡಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಅತ್ಯುತ್ತಮ ಬೆಲೆ ನಿರ್ಧರಿಸುವಲ್ಲಿ ಕ್ರೆಡರ್ ಮುಂಚೂಣಿಯಲ್ಲಿದೆ.

ಇನ್ನು ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದರೂ ಚಾರ್ಜಿಂಗ್ ಸೌಲಭ್ಯಗಳ ಸಮಸ್ಯೆಯು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದ ಮೇಲೆ ಹೆಚ್ಚಿನ ಗಮನಹರಿಸಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ತ್ವರಿತವಾಗಿ ಚಾರ್ಜಿಂಗ್ ಸೌಲಭ್ಯ ಒದಗಿಸಲು ದೇಶದ ಪ್ರಮುಖ ನಗರಗಳಲ್ಲಿ ಚಾರ್ಜಿಂಗ್ ಪಾಯಿಂಟ್ಗಳನ್ನು ಹೆಚ್ಚಿಸಲಾಗುತ್ತಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಪ್ರೋತ್ಸಾಹ ಧನ ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಇದು ಕೂಡಾ ಸಹಜವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬದಲಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿದೆ.