ಎಲೆಕ್ಟ್ರಿಕ್ ಕ್ರೂಸರ್, ಸ್ಪೋರ್ಟ್ ಬೈಕ್‌ಗಳನ್ನು ಬಿಡುಗಡೆ ಮಾಡಲಿದೆ ಇಗ್ನಿಟ್ರಾನ್ ಮೋಟೋಕಾರ್ಪ್
ಇಗ್ನಿಟ್ರಾನ್ ಮೋಟೋಕಾರ್ಪ್(Ignitron Motocorp) ಕಂಪನಿಯು ಭಾರತೀಯ ಇವಿ ಆಟೋ ಉದ್ಯಮಕ್ಕೆ ಪ್ರೀಮಿಯಂ ಮೋಟಾರ್‌ಸೈಕಲ್‌ಗಳನ್ನು ಪರಿಚಯಿಸುತ್ತಿದ್ದು, ಹೊಸ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾದರಿಗಳು ಹೊಸ ಸಂಚಲನ ಮೂಡಿಸುವ ತವಕದಲ್ಲಿವೆ.
ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಹೊಸ ಯೋಜನೆಗಳ ಪರಿಣಾಮ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ. ಹೊಸ ಯೋಜನೆಗಳ ಪರಿಣಾಮ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಉತ್ಪಾದನೆಗೆ ಪ್ರವೇಶಿಸಿದ್ದು, ಗುರಾಗ್ರಾಮ್ ಮೂಲದ ಇಗ್ನಿಟ್ರಾನ್ ಮೋಟೋಕಾರ್ಪ್ ಕಂಪನಿಯು ಹೊಸ ಮಾದರಿಯ ಇವಿ ದ್ವಿಚಕ್ರ ವಾಹನಗಳನ್ನು ಪರಿಚಯಿಸುವ ಸಿದ್ದವಾಗಿದೆ.

ಇಗ್ನಿಟ್ರಾನ್ ಮೋಟೋಕಾರ್ಪ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಸೈಬೋರ್ಗ್ ಬ್ರಾಂಡ್‌ನಡಿಯಲ್ಲಿ ವಿವಿಧ ಸೆಗ್ಮೆಂಟ್‌ಗಳ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ಕ್ರೂಸರ್, ಸ್ಪೋರ್ಟ್ ಮತ್ತು ರೆಗ್ಯೂಲರ್ ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ. ಸೈಬೋರ್ಗ್ ಬ್ರಾಂಡ್ ಅಡಿಯಲ್ಲಿ ಯೋಧ ಕ್ರೂಸರ್ ಮಾದರಿಯು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕ್ರೂಸರ್ ಬೈಕ್ ಮಾದರಿಯು ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ.
ಹೊಸ ಸೈಬೋರ್ಗ್ ಯೋಧ ಕ್ರೂಸರ್ ಬೈಕ್ ಮಾದರಿಯ ಬೈಕ್ ಚಿತ್ರವನ್ನು ಕಂಪನಿಯು ಈಗಾಗಲೇ ಹಂಚಿಕೊಂಡಿದ್ದು, 2022ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಸೈಬೋರ್ಗ್ ಕಂಪನಿಯು ಹೊಸ ಇವಿ ಬೈಕ್ ಮಾದರಿಗಳನ್ನು ಸಂಪೂರ್ಣವಾಗಿ ಸ್ಥಳೀಯ ಬಿಡಿಭಾಗಗಳೊಂದಿಗೆ ಅಭಿವೃದ್ದಿಪಡಿಸಲಿದ್ದು, ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ವಾರ್ಷಿಕವಾಗಿ 40 ಸಾವಿರ ಯುನಿಟ್ ಉತ್ಪಾದನೆಗೆ ಯೋಜಿಸಿದೆ.

ಗುರುಗ್ರಾಮ್‌ನಲ್ಲಿ ತನ್ನ ಮೊದಲ ಇವಿ ಬೈಕ್ ಉತ್ಪಾದನಾ ಘಟಕವನ್ನು ತೆರೆಯಲು ಉದ್ದೇಶಿಸಿರುವ ಇಗ್ನಿಟ್ರಾನ್ ಮೋಟೋಕಾರ್ಪ್ ಕಂಪನಿಯು ಇವಿ ವಾಹನಗಳೊಂದಿಗೆ ಬ್ಯಾಟರಿ ವಿನಿಯಮ ಕೇಂದ್ರಗಳ ಸ್ಥಾಪನೆಯ ಮೇಲೂ ಹೆಚ್ಚಿನ ಗಮನಹರಿಸಿದೆ. ಇವಿ ವಾಹನಗಳ ಬ್ಯಾಟರಿ ರೀಚಾರ್ಜ್‌ಗಾಗಿ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಲು ಬ್ಯಾಟರಿ ವಿನಿಯಮ ಕೇಂದ್ರಗಳು ಸಾಕಷ್ಟು ಸಹಕಾರಿಯಾಗಲಿದ್ದು, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಪ್ರತಿ ಕಿ.ಮೀ ಗೆ ಒಂದರಂತೆ ಬ್ಯಾಟರಿ ವಿನಿಯಮ ಕೇಂದ್ರಗಳನ್ನು ತೆರೆಯುವ ಬೃಹತ್ ಯೋಜನೆ ರೂಪಿಸುತ್ತಿದೆ.
ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.
ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು ಕೇಂದ್ರ ಫೇಮ್ 2 ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡುತ್ತಿವೆ.
ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.


Click it and Unblock the Notifications