ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಹೊಸ ಯೋಜನೆಗಳ ಪರಿಣಾಮ ಇವಿ ವಾಹನ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ.

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೋತ್ಸಾಹ ಯೋಜನೆಗಳಿಂದ ಹಲವಾರು ಸ್ಟಾರ್ಟ್ ಕಂಪನಿಗಳು ಇವಿ ವಾಹನ ಉದ್ಯಮ ಪ್ರವೇಶಿಸುತ್ತಿದ್ದು, ಚೀನಿ ಮೂಲದ ದಾವೊ ಕೂಡಾ ಇದೀಗ ಭಾರತದಲ್ಲಿ ಹೊಸ ಇವಿ ಸ್ಕೂಟರ್ ಮಾರಾಟ ಆರಂಭಿಸುತ್ತಿದೆ.

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಭಾರತದಲ್ಲಿ ಬಿಡುಗಡೆಯಾಗಲಿರುವ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯನ್ನು ಖಚಿತಪಡಿಸಿರುವ ದಾವೊ ಕಂಪನಿಯು ಶೀಘ್ರದಲ್ಲೇ ಹೊಸ ಸ್ಕೂಟರ್ ಬೆಲೆ ಮಾಹಿತಿ ಹಂಚಿಕೊಳ್ಳುವುದಾಗಿ ಹೇಳಿಕೊಂಡಿದ್ದು, ಹೊಸ ಸ್ಕೂಟರ್ ವಿತರಣೆಯನ್ನು ಶೀಘ್ರದಲ್ಲೇ ಕೈಗೊಳ್ಳುವ ಯೋಜನೆಯಲ್ಲಿದೆ.

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹೊಸ ಉದ್ಯಮ ವ್ಯವಹಾರಕ್ಕಾಗಿ ಭಾರತೀಯ ಮೂಲದ ಕಂಪನಿಯೊಂದರ ಜೊತೆ ಸಹಭಾಗೀತ್ವ ಹೊಂದಿರುವ ದಾವೊ ಕಂಪನಿಯು ಮೊದಲ ಹಂತದಲ್ಲಿ 703 ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ರೆಟ್ರೋ ಶೈಲಿ ಹೊಂದಿರುವ ಹೊಸ ಇವಿ ಸ್ಕೂಟರ್ ಮಾದರಿಯು ತಾಂತ್ರಿಕವಾಗಿ ಬಲಿಷ್ಠವಾಗಿದೆ.

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಲೀಥಿಯಂ ಐರನ್ ಫಾಸ್ಫೇಟ್ ಬ್ಯಾಟರಿ ಸೌಲಭ್ಯವನ್ನು ಹೊಂದಿದ್ದು, 3.5 ಕಿ.ವ್ಯಾ ಬಿಎಲ್‌ಡಿಸಿ ಮೋಟಾರ್ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ 100 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಜೊತೆಗೆ ಹೊಸ ಸ್ಕೂಟರ್ ಪ್ರೀಮಿಯಂ ಆವೃತ್ತಿಯಾಗಿ ಗುರುತಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಪ್ರತಿ ಗಂಟೆಗೆ 70ಕಿ.ಮೀ ಟಾಪ್ ಮೈಲೇಜ್ ಹೊಂದಿದೆ.

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

70 ಕಿ.ಮೀ ಟಾಪ್ ಸ್ಪೀಡ್ ಮತ್ತು ಗರಿಷ್ಠ 100 ಕಿ.ಮೀ ಮೈಲೇಜ್ ಹೊಂದಿರುವ ಮಾರುಕಟ್ಟೆಯಲ್ಲಿರುವ ಹಲವು ಎಲೆಕ್ಟ್ರಿಕ್ ಪ್ರೀಮಿಯಂ ಸ್ಕೂಟರ್‌ಗಳಿಗೆ ಭರ್ಜರಿ ಪೈಪೋಟಿ ನೀಡುವ ಸಿದ್ದತೆಯಲ್ಲಿದ್ದು, ಮುಂದಿನ ಕೆಲವೇ ಹೊಸ ಸ್ಕೂಟರ್ ಬೆಲೆ ಮಾಹಿತಿ ಲಭ್ಯವಾಗಲಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ 9 ಇಂಚಿನ ಎಲ್‌ಸಿಡಿ ಡಿಸ್ಪ್ಲೇ, ಇ-ಸ್ಕೂಟರ್‌ಗಳ ಸಾಂಪ್ರದಾಯಿಕ ಸ್ವಿಚ್ ಬದಲಿಗೆ ರಿವರ್ಸ್ ಗೇರ್ ಸೌಲಭ್ಯ ಪಡೆದುಕೊಂಡಿದ್ದು, ಕ್ರೂಸ್ ಮೋಡ್, ಚಾರ್ಜಿಂಗ್ ಪೋರ್ಟ್, ಸೆಂಟ್ರಲ್ ಲಾಕ್, ಕೀ ಲೆಸ್ ಎಂಟ್ರಿ ಪಡೆದುಕೊಂಡಿದೆ.

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ಆಂಟಿ-ಥೆಫ್ಟ್ ಅಲಾರ್ಮ್, ಎಲ್‌ಇಡಿ ಲೈಟ್ಸ್, ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಸಸ್ಷೆಷನ್, ಎರಡು ಬದಿಗಳಲ್ಲೂ ಡಿಸ್ಕ್ ಬ್ರೇಕ್ ಸೇರಿದಂತೆ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಪ್ರತಿ ಚಾರ್ಜ್‌ಗೆ 100ಕಿ.ಮೀ ಮೈಲೇಜ್ ನೀಡುವ ದಾವೊ 703 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಬಜಾಜ್ ಚೇತಕ್, ಟಿವಿಎಸ್ ಐಕ್ಯೂಬ್ ಮತ್ತು ಎಥರ್ 450 ಎಕ್ಸ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ಸಿದ್ದತೆಯಲ್ಲಿದ್ದು, ಹೊಸ ಸ್ಕೂಟರ್ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1 ಲಕ್ಷದಿಂದ ರೂ. 1.20 ಲಕ್ಷ ಬೆಲೆ ಹೊಂದುವ ನೀರಿಕ್ಷೆಯಿದೆ.

Most Read Articles

Kannada
English summary
ಇನ್ನು ಆಟೋ ಮಾರುಕಟ್ಟೆಯಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಜೋರಾಗಿದ್ದು, ಎಥರ್ ಸೇರಿದಂತೆ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ಅತ್ಯುತ್ತಮ ಮೈಲೇಜ್ ಪ್ರೇರಿತ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿವೆ.
Story first published: Wednesday, April 21, 2021, 19:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X