ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಇಟಲಿ ಮೂಲದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಡುಕಾಟಿ ತನ್ನ ಮಲ್ಟಿಸ್ಟ್ರಾಡಾ ವಿ2 ಅಡ್ವೆಂಚರ್-ಸ್ಪೋರ್ಟ್ ಬೈಕ್ ಅನ್ನು ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಅನಾವರಣಗೊಳಿಸಿದೆ. ಈ ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ2 ಬೈಕ್ ಸ್ಟ್ಯಾಂಡರ್ಡ್ ಮತ್ತು ಎಸ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ2 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಅಡ್ವೆಂಚರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ2 ಬೈಕ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ದೊಡ್ಡ ಮಲ್ಟಿಸ್ಟ್ರಾಡಾ 1260 ನಿಂದ ಸ್ಫೂರ್ತಿ ಪಡೆದ. ಹೊಸ ಮಲ್ಟಿಸ್ಟ್ರಾಡಾ ವಿ2 ಬೈಕ ಫ್ಲೇರ್ಡ್ ಏರ್-ಇಂಟೇಕ್ ಮತ್ತು ಸ್ಪ್ಲಿಟ್, ಫುಲ್-ಎಲ್ಇಡಿ ಹೆಡ್ ಲ್ಯಾಂಪ್ ಗಳನ್ನು ಹೊಂದಿದೆ. ಇನ್ನು ದೊಡ್ಡ ವಿಂಡ್‌ಸ್ಕ್ರೀನ್ ಮತ್ತು ಫ್ಯೂಯಲ್ ಟ್ಯಾಂಕ್ ಜೊತೆಗೆ ಎಲ್‌ಇಡಿ ಟೈಲ್ ಲ್ಯಾಂಪ್ ವಿನ್ಯಾಸವನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ2 ಬೈಕ್ ನವೀಕರಣವು ಸ್ಟ್ರೀಟ್ ಗ್ರೇ ಎಂಬ ಹೊಸ ಬಣ್ಣವನ್ನು ಪಡೆದುಕೊಂಡಿದೆ. ಸ್ಟ್ರೀಟ್ ಗ್ರೇ ಪೇಂಟ್ ಸ್ಕೀಮ್ ಕೆಂಪು ರಿಮ್‌ಗಳನ್ನು ಒಳಗೊಂಡಿದೆ. ಮತ್ತೊಂದೆಡೆ ಡುಕಾಟಿ ರೆಡ್ ಒಂದೇ ಆಗಿರುತ್ತದೆ ಮತ್ತು ಎರಡೂ ಆವೃತ್ತಿಗಳಲ್ಲಿ ನೀಡಲಾಗುತ್ತದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಈ ಅಡ್ವೆಂಚರ್ ಬೈಕಿನಲ್ಲಿ ಮಲ್ಟಿಸ್ಟ್ರಾಡಾ 950 ಮಾದರಿಯಂತೆಯೇ 937 ಸಿಸಿ ಟೆಸ್ಟಾಸ್ಟ್ರೆಟ್ಟಾ, ಟ್ವಿನ್-ಸಿಲಿಂಡರ್ ಎಂಜಿನ್ ನೊಂದಿಗೆ ಮುಂದುವರಿಯುತ್ತದೆ. ಇದು ಹಿಂದಿನಂತೆಯೇ 111.5 ಬಿಹೆಚ್ ಪಿ ಪವರ್ ಮತ್ತು 94 ನಿಂದ 96 ವರೆಗೆ ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಇದರ ಪರಿಣಾಮವಾಗಿ ಮಲ್ಟಿ ವಿ 2 950 ಗಿಂತ 5 ಕೆಜಿ ಹಗುರವಾಗಿರುತ್ತದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ2 ಬೈಕ್ ಡುಕಾಟಿ ಟ್ರಾಕ್ಷನ್ ಕಂಟ್ರೋಲ್, ವೆಹಿಕಲ್ ಹೋಲ್ಡ್ ಕಂಟ್ರೋಲ್ ಮತ್ತು ಸ್ಪೋರ್ಟ್, ಟೂರಿಂಗ್, ಅರ್ಬನ್ ಮತ್ತು ಎಂಡ್ಯೂರೋ ಎಂಬ ನಾಲ್ಕು ರೈಡಿಂಗ್ ಮೋಡ್‌ಗಳನ್ನು ಹೊಂದಿವೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಎಸ್ ವೇರಿಯಂಟ್, ಡುಕಾಟಿ ಸ್ಕೈಹೂಕ್ ಸಸ್ಪೆನ್ಷನ್ ಇವಿಒ ಸೆಮಿ-ಆಕ್ಟಿವ್ ಸಸ್ಪೆಂಕ್ಷನ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಸಿಸ್ಟಮ್, ಡುಕಾಟಿ ಕಾರ್ನಿಂಗ್ ಲೈಟ್ಸ್, ಡುಕಾಟಿ ಕ್ವಿಕ್ ಶಿಫ್ಟ್ ಅಪ್ & ಡೌನ್, ಐದು ಇಂಚಿನ ಬಣ್ಣದ ಟಿಎಫ್‌ಟಿ ಡಿಸ್‌ಪ್ಲೇ ಮತ್ತು ಬ್ಯಾಕ್‌ಲಿಟ್ ಹ್ಯಾಂಡಲ್‌ಬಾರ್ ಕಂಟ್ರೋಲ್ ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಇನ್ನು ಡುಕಾಟಿ ಕಂಪನಿಯು ತನ್ನ ಮಲ್ಟಿಸ್ಟ್ರಾಡಾ ವಿ4 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿತ್ತು. ಈ ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ4 ಅಡ್ವೆಂಚರ್ ಟೂರರ್ ಬೈಕ್ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ4 ಬೈಕ್ ಮಲ್ಟಿಸ್ಟ್ರಾಡಾ ವಿ4 ಮತ್ತು ಮಲ್ಟಿಸ್ಟ್ರಾಡಾ ವಿ4 ಎಸ್ ಎಂಬ ಎರಡು ರೂಪಾಂತರಗಳನ್ನು ಹೊಂದಿದೆ. ಡುಕಾಟಿ ಮಲ್ಟಿಸ್ಟ್ರಾಡಾ ವಿ4 ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜನಪ್ರಿಯ ಅಡ್ಬೆಂಚರ್ ಟೂರರ್ ಬೈಕ್ ಗಳಲ್ಲಿ ಒಂದಾಗಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಭಾರತದಲ್ಲಿ ಬಿಡುಗಡೆಯಾಗಿರುವ ಈ ಅಡ್ವೆಂಚರ್ ಟೂರರ್ ಬೈಕ್ ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನವನ್ನು ಹೊಂದಿದೆ.ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ4 ಬೈಕಿನಲ್ಲಿ 1,158 ಸಿಸಿ ವಿ-ಟ್ವಿ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 10,500 ಆರ್‌ಪಿಎಂನಲ್ಲಿ 167 ಬಿಹೆಚ್‍ಪಿ ಪವರ್ ಮತ್ತು 8,750 ಆರ್‌ಪಿಎಂನಲ್ಲಿ 125 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ ಡುಕಾಟಿ ಕ್ವಿಕ್ ಶಿಫ್ಟ್ (ಡಿಕ್ಯೂಎಸ್) ಅಪ್&ಡೌನ್ ಸಿಸ್ಟಂ ಅನ್ನು ಹೊಂದಿದೆ. ವಿ4 ಗ್ರ್ಯಾಂಟುರಿಸ್ಮೊ ಎಂಜಿನ್ ಅತಿ ಮುಖ್ಯ ಬದಲಾವಣೆಯೆಂದರೆ ಇದು ಡೆಸ್ಮೋಡ್ರೊಮಿಕ್ ವಾಲ್ವ್ ಆಕ್ಟಿವೇಷನ್ ಬಳಸುವುದಿಲ್ಲ

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಡುಕಾಟಿ ಮಲ್ಟಿಸ್ಟ್ರಾಡಾ ವಿ4 ಬೈಕಿನ ಮುಂಭಾಗದಲ್ಲಿ 170 ಎಂಎಂ ವ್ಹೀಲ್ ಟ್ರ್ಯಾವೆಲ್ ಮತ್ತು ಹಿಂಭಾಗದಲ್ಲಿ 180 ಎಂಎಂ ಹೊಂದಿದೆ, ಮಲ್ಟಿಸ್ಟ್ರಾಡಾ ವಿ4 ಮಾರ್ಜೋಚಿ ಮೆಕ್ಯಾನಿಕಲ್ ಸಸ್ಪೆಂಕ್ಷನ್ ಸ್ಟ್ಯಾಂಚಿಯನ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸೆಟಪ್ ಅನ್ನು ಪಡೆದುಕೊಂಡದೆ. ಇನ್ನು ಈ ಬೈಕಿನ ಮುಂಭಾಗದಲ್ಲಿ ಎಂ 4.32 ಕ್ಯಾಲಿಪರ್‌ಗಳನ್ನು ಟ್ವಿನ್ 320 ಎಂಎಂ ಡಿಸ್ ಬ್ರೇಕ್ ಮತ್ತು ಹಿಂಭಾಗದಲ್ಲಿ 330 ಎಂಎಂ ಡಿಸ್ಕ್ ಬ್ರೇಕ್ ನೊಂದಿಗೆ ಬ್ರೆಂಬೊ ಸ್ಟೈಲ್ಮಾ ಕ್ಯಾಲಿಪರ್‌ಗಳನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಈ ಅಡ್ವೆಂಚರ್ ಟೂರರ್ ಬೈಕ್ ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ. ಈ ಬೈಕಿನ ನ್ಯಾವಿಗೇಷನ್ ಸಿಸ್ಟಂ ಡೈರಕ್ಷನಲ್, ಟಾರ್ಗೆಟ್ ರಿಚ್ ಆಗಲು ಉಳಿದಿರುವ ದೂರ ಮತ್ತು ಇತರ ಡೇಟಾದ ನಡುವೆ ಬರುವ ಅಂದಾಜು ಸಮಯದಂತಹ ವಿವಿಧ ಮಾಹಿತಿಗಳು ನೀಡುತ್ತದೆ. ಇದರೊಂದಿಗೆ ವಿಂಡ್‌ಸ್ಕ್ರೀನ್, ನಕಲ್ ಗಾರ್ಡ್‌ಗಳು, ಫ್ರೇಮ್ ಪ್ರೊಟೆಕ್ಟರ್‌ಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನ ಮೇಲಿರುವ ಜಿಪಿಎಸ್ ಮೌಂಟ್ಸ್ ಜೊತೆಗೆ 12ವಿ ಚಾರ್ಜಿಂಗ್ ಸಾಕೆಟ್, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, ಇಂಟಿಗ್ರೇಟೆಡ್ ರಿಯರ್ ಲಗೇಜ್ ರ್ಯಾಕ್ ಮತ್ತು ಅಪ್-ಸ್ವೀಪ್ಟ್ ಎಕ್ಸಾಸ್ಟ್ ಅನ್ನು ಒಳಗೊಂಡಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Ducati Multistrada V2 ಬೈಕ್

ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ2 ಬೈಕ್ ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆ ಬಿಡುಗಡೆಯಾಗಬಹುದು. ಇನ್ನು ಈ ಹೊಸ ಡುಕಾಟಿ ಮಲ್ಟಿಸ್ಟ್ರಾಡಾ ವಿ2 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ. ಈ ಅಡ್ವೆಂಚರ್ ಬೈಕ್ ಮುಂದಿನ ವರ್ಷ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
Read more on ಡುಕಾಟಿ ducati
English summary
Ducati revealed new multistrada v2 features engine details
Story first published: Friday, October 1, 2021, 21:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X