ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಭಾರತದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ರೂ. 100 ರ ಗಡಿ ದಾಟಿದೆ. ಪೆಟ್ರೋಲ್ ಬೆಲೆ ಏರಿಕೆಯು ವಾಹನ ಸವಾರರನ್ನು ಪರದಾಡುವಂತೆ ಮಾಡಿದೆ. ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಭಾರತದಲ್ಲಿ ಸದ್ಯಕ್ಕೆ ಕೆಲವೇ ಕೆಲವು ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ಮಾತ್ರ ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಮಾರಾಟ ಮಾಡುತ್ತಿವೆ. ಇನ್ನುಳಿದಂತೆ ಹಲವು ಸ್ಟಾರ್ಟ್ ಅಪ್ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಮಾರಾಟ ಮಾಡುತ್ತಿವೆ. ಭಾರತೀಯ ಮೂಲದ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಇ-ಅಶ್ವ ಆಟೋ ಮೋಟಿವ್ ದೇಶದಲ್ಲಿ ಒಟ್ಟು 12 ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಹಾಗೂ 8 ಇ-ಆಟೋಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಇ-ಅಶ್ವಾ ಅಡಿಯಲ್ಲಿ ಬಿಸಿನೆಸ್ ಟು ಬಿಸಿನೆಸ್ ಹಾಗೂ ಬಿಸಿನೆಸ್ ಟು ಕಸ್ಟಮರ್ ಮಾರುಕಟ್ಟೆಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಆರಂಭಿಸುವ ಬಗ್ಗೆ ಕಂಪನಿಯು ಮಾಹಿತಿ ನೀಡಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಇ-ಅಶ್ವ ಆಟೋಮೋಟಿವ್ ಭಾರತದಲ್ಲಿ ವ್ಯಾಪಕ ಶ್ರೇಣಿಯ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟಕ್ಕೆ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಎರಡು ವಿಭಾಗಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕಂಪನಿ ಹೇಳಿದೆ. ಈ ವಾಹನಗಳು ದೇಶಿಯ ಮಾರುಕಟ್ಟೆಯಲ್ಲಿ ಎಲ್ಲಾ ಗ್ರಾಹಕರಿಗೆ ಲಭ್ಯವಿರುತ್ತವೆ. ಇ-ಅಶ್ವ ಆಟೋಮೋಟಿವ್ ಈ ಹಿಂದೆ ತನ್ನ ಉತ್ಪನ್ನಗಳನ್ನು ಇತರ ಬ್ರಾಂಡ್‌ಗಳ ಅಡಿಯಲ್ಲಿ ಮಾರಾಟಕ್ಕೆ ನೀಡಿದೆ. ಕಂಪನಿಯು ಕಳೆದ ಕೆಲವು ವರ್ಷಗಳಿಂದ ಒಕ್ಕೂಟದ ಆಧಾರದ ಮೇಲೆ ಈ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಈ ಹಿನ್ನೆಲೆಯಲ್ಲಿ ಸಂಸ್ಥೆಯು ತನ್ನದೇ ಬ್ರಾಂಡ್‌ನಲ್ಲಿ ಮಾರಾಟ ಮಾಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಇ-ಅಶ್ವದೊಂದಿಗೆ ಒಟ್ಟು 12 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಜೊತೆಗೆ ಕಂಪನಿಯು ಎಂಟು ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ಚಿಂತನೆ ನಡೆಸುತ್ತಿದೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಈ ಮಾಹಿತಿಯನ್ನು ಇ-ಅಶ್ವ ಆಟೋಮೋಟಿವ್ ನಿನ್ನೆ (ನವೆಂಬರ್ 14) ಹೊರಡಿಸಿದ ಹೇಳಿಕೆಯಲ್ಲಿ ಖಚಿತಪಡಿಸಿದೆ. ಕಂಪನಿಯು ದೇಶಾದ್ಯಂತ 630 ವಿಶೇಷ ಮಳಿಗೆ ಹಾಗೂ ರಿಟೇಲ್ ಜಾಲವನ್ನು ಹೊಂದಿದೆ. ಕಂಪನಿಯ ಎಲ್ಲಾಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಈ ವಿಶೇಷ ಮಳಿ ಹಾಗೂ ರಿಟೇಲ್ ನೆಟ್‌ವರ್ಕ್‌ಗಳ ಮೂಲಕ ಮಾರಾಟ ಮಾಡಲಾಗುವುದು. ಕಂಪನಿಯು ಸದ್ಯಕ್ಕೆ ಈ ಬಗ್ಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಇದರ ಆಧಾರದ ಮೇಲೆ ಈಗ ದೊಡ್ಡ ಸರಣಿಯ ವಾಹನಗಳನ್ನು ಘೋಷಿಸಲಾಗಿದೆ ಎಂದು ಕಂಪನಿ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ನಿರಂತರವಾಗಿ ಹೆಚ್ಚಾಗುತ್ತಿದೆ. ಇದಲ್ಲದೇ ಕೇಂದ್ರ ಸರ್ಕಾರದ ಜೊತೆಗೆ ಹಲವು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತಿವೆ. ಈ ಅಗತ್ಯವನ್ನು ಪೂರೈಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳಿಗೆ ಅನುಗುಣವಾಗಿ ಇ-ಅಶ್ವ ಆಟೋಮೋಟಿವ್ ತನ್ನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಇ-ಅಶ್ವ ಕಡಿಮೆ ವೇಗದಲ್ಲಿ ಚಾಲನೆಯಾಗುವ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಸಿದ್ಧವಾಗಿದೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಇದರ ಜೊತೆಗೆ ಕಂಪನಿಯು ಹಲವು ಫೀಚರ್ ಗಳನ್ನು ಹೊಂದಿರುವ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ. ಕಸ ವಿಲೇವಾರಿ, ಸರಕು ನಿರ್ವಹಣೆಗೆ ಸುಸಜ್ಜಿತವಾದ ತ್ರಿಚಕ್ರ ವಾಹನಗಳು ವಿವಿಧ ಆಯ್ಕೆಗಳೊಂದಿಗೆ ಮಾರಾಟವಾಗಲಿವೆ. ಇದರ ಜೊತೆಗೆ ಕಂಪನಿಯು ಪ್ರಯಾಣಿಕರ ಸಾರಿಗೆಗಾಗಿ ಆಟೋ ರಿಕ್ಷಾವನ್ನು ಬಿಡುಗಡೆಗೊಳಿಸಲು ಚಿಂತನೆ ನಡೆಸಿದೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಇವು ಇ-ಸ್ಕೂಟರ್‌, ಇ-ಮೋಟರ್‌ಬೈಕ್‌, ಇ-ರಿಕ್ಷಾ, ಇ-ಆಟೋ, ಇ-ಲೋಡರ್‌, ಇ-ಫುಡ್ ಕಾರ್ಟ್‌ ಹಾಗೂ ಇ-ಜಂಕ್ ವಾಹನಗಳಂತಹ ಬಹು ಆಯ್ಕೆಗಳಲ್ಲಿ ಲಭ್ಯವಾಗಲಿವೆ. ಕಂಪನಿಯು ಈಗಾಗಲೇ ಈ ವರ್ಗಗಳ ಅಡಿಯಲ್ಲಿ 6,000 ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟಕ್ಕೆ ನೀಡಿದೆ. ಭಾರತದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಸಾರ್ವಜನಿಕ ಸಾರಿಗೆಯತ್ತ ಮುಖ ಮಾಡುತ್ತಿದ್ದಾರೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಇನ್ನೂ ಕೆಲವರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ. ಇದರಿಂದ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣವು ಗರಿಷ್ಠ ಮಟ್ಟದಲ್ಲಿದೆ. ಅದರಲ್ಲೂ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಭಾರತದಲ್ಲಿ ಈಗಾಗಲೇ ಬಜಾಜ್ ಚೇತಕ್ ಎಲೆಕ್ಟ್ರಿಕ್, ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.

ಹಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಇ-ಅಶ್ವ ಆಟೋಮೋಟಿವ್

ಇತ್ತೀಚಿಗೆ ಬಿಡುಗಡೆಯಾದ ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಸಹ ಗ್ರಾಹಕರಿಂದ ವ್ಯಾಪಕ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಓಲಾ ಎಲೆಕ್ಟ್ರಿಕ್ ಕಂಪನಿಯು ಸದ್ಯ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಮಾತ್ರವೇ ಟೆಸ್ಟ್ ರೈಡ್ ಒದಗಿಸಿ ಸ್ಕೂಟರ್ ಖರೀದಿಯನ್ನು ಖಚಿತಪಡಿಸಿಕೊಳ್ಳುತ್ತಿದೆ. ಡಿಸೆಂಬರ್ 15ರಿಂದ ಹಂತ ಹಂತವಾಗಿ ಫೆಬ್ರವರಿ ಕೊನೆಯ ತನಕ ಹೊಸ ಸ್ಕೂಟರ್ ಗಳನ್ನು ವಿತರಣೆ ಮಾಡಲಾಗುವುದು ಎಂದು ಕಂಪನಿ ಹೇಳಿದೆ.

ಗಮನಿಸಿ: ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
E ashwa automotive to launch many electric vehicles in india details
Story first published: Tuesday, December 14, 2021, 19:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X