ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದೆ.

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳ ಉತ್ಪನ್ನಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳು ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಮುಂಬೈ ಮೂಲದ ಅರ್ಥ್ ಎನರ್ಜಿ ಕಂಪನಿಯು ಕೂಡಾ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಆರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಮುಂಬೈನಲ್ಲಿಯೇ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಅರ್ಥ್ ಎನರ್ಜಿ ಕಂಪನಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದ್ದು, ಮಾಹಿತಿಗಳ ಪ್ರಕಾರ ಇದೇ ತಿಂಗಳು 26ರಂದು ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳನ್ನು ಅನಾವರಣಗೊಳಿಸಲಿದೆ.

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕುರಿತಾಗಿ ಅರ್ಥ್ ಎನರ್ಜಿ ಕಂಪನಿಯು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲವಾದರೂ ಅಧಿಕೃತ ಫೇಸ್‌ಬುಕ್ ಖಾತೆ ಮೂಲಕ ಹೊಸ ದ್ವಿಚಕ್ರ ವಾಹನಗಳ ಕೆಲವು ಪ್ರಮುಖ ತಾಂತ್ರಿಕ ಅಂಶಗಳ ಕುರಿತಾಗಿ ಟೀಸರ್ ಬಿಡುಗಡೆ ಮಾಡಲಿದೆ.

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಅರ್ಥ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಜೊತೆಗೆ ಎಲೆಕ್ಟ್ರಿಕ್ ಬೈಕ್ ಮಾದರಿಗಳನ್ನು ಸಿದ್ದಪಡಿಸುತ್ತಿದ್ದು, ಹೊಸ ವಾಹನಗಳ ಉತ್ಪಾದನೆಗಾಗಿ ಗರಿಷ್ಠ ಶೇ.96 ರಷ್ಟು ದೇಶಿಯ ಮಾರುಕಟ್ಟೆಯಲ್ಲಿ ಉತ್ಪಾದನೆಗೊಂಡ ಬಿಡಿಭಾಗಗಳನ್ನೇ ಬಳಕೆ ಮಾಡುತ್ತಿರುವುದಾಗಿ ಹೇಳಿಕೊಂಡಿದೆ.

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಜೊತೆಗೆ ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಉತ್ಪನ್ನವನ್ನು ತಾನೇ ಉತ್ಪಾದನೆ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಅರ್ಥ್ ಎನರ್ಜಿ ಕಂಪನಿಯು ಇನ್‌ಹೌಸ್ ಬ್ಯಾಟರಿ ಬಳಕೆಯಿಂದಾಗಿ ಇವಿ ವಾಹನಗಳ ಬೆಲೆಯನ್ನು ಪೆಟ್ರೋಲ್ ಮಾದರಿಗಳಿಂತಲೂ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿ ಹೇಳಿಕೊಂಡಿದೆ.

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಅರ್ಥ್ ಎನರ್ಜಿ ಕಂಪನಿಯು ಭಾರತದಲ್ಲಿ ಮೊದಲ ಇವಿ ವಾಹನ ಮಾದರಿಯಾಗಿ ಗ್ಲೆಡೆ ಎನ್ನುವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದ್ದು, ತದನಂತರ ಹಂತ-ಹಂತವಾಗಿ ಆರು ದ್ವಿಚಕ್ರ ವಾಹನಗಳನ್ನು ಇದೇ ವರ್ಷಾಂತ್ಯದ ತನಕವು ಬಿಡುಗಡೆ ಮಾಡಲಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಗ್ಲೆಡೆ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಈ ಸ್ಕೂಟರಿನ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಲು ಗರಿಷ್ಠ ಎರಡೂವರೆ ಗಂಟೆ ತೆಗೆದುಕೊಳ್ಳುತ್ತದೆ.

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಗ್ಲೆಡೆ ಸ್ಕೂಟರ್ ಬಿಡುಗಡೆಯ ನಂತರ ಮೂರು ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿ ಟು ಬಿ ಉದ್ದೇಶಗಳಿಗೆ ಪೂರೈಕೆ ಮಾಡುವ ಯೋಜನೆ ಹೊಂದಿರುವ ಅರ್ಥ್ ಎನರ್ಜಿ ಕಂಪನಿಯು 2021ರ ಅಂತ್ಯಕ್ಕೆ 4,500 ಯುನಿಟ್ ಇವಿ ವಾಹನ ಮಾರಾಟ ಗುರಿಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ವಿನೂತನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲಿದೆ ಅರ್ಥ್ ಎನರ್ಜಿ

ಆರು ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಪಟ್ಟಿಯಲ್ಲಿ ಅರ್ಥ್ ಎನರ್ಜಿ ಕಂಪನಿಯು ಒಂದು ಕ್ರೂಸರ್ ಬೈಕ್ ಮಾದರಿಯನ್ನು ಪರಿಚಯಿಸಲಿದ್ದು, ಸದ್ಯಕ್ಕೆ ಮುಂಬೈನಲ್ಲಿ ಮಾತ್ರ ವಾಹನ ಮಾರಾಟ ಪ್ರಕ್ರಿಯೆ ಆರಂಭಿಸಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಜಾಲ ವಿಸ್ತರಿಸುವ ಯೋಜನೆ ಹೊಂದಿದೆ.

Article Published On: Tuesday, January 19, 2021, 18:56 [IST]
English summary
Earth Energy To Launch 6 New Electric Vehicles Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+