Just In
- 1 hr ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 2 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 2 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 3 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಯಲ್ಲಾಪುರ ಭೂಕುಸಿತ: ಯುವತಿಯ ಮದುವೆ ಕನಸು "ಮಣ್ಣು'ಪಾಲು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Movies
ಬಿಗ್ಬಾಸ್: ಎರಡನೇ ವಾರಕ್ಕೆ ಎಂಟು ಮಂದಿ ಮೇಲೆ ನಾಮಿನೇಷನ್ ಕತ್ತಿ
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಫೆಬ್ರುವರಿ 3ಕ್ಕೆ ಹೊಸ ಇವಿ ಉತ್ಪನ್ನಗಳನ್ನು ಅನಾವರಣಗೊಳಿಸಿಲಿದೆ ಅರ್ಥ್ ಎನರ್ಜಿ
ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಬಿಡುಗಡೆಗೊಳಿಸುತ್ತಿವೆ.

ಮುಂಬೈ ಮೂಲದ ಅರ್ಥ್ ಎನರ್ಜಿ ಕಂಪನಿಯು ಕೂಡಾ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಆರು ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಉತ್ಪನ್ನಗಳಲ್ಲಿ ವಾಣಿಜ್ಯ ಬಳಕೆ ಮಾದರಿಗಳು ಮತ್ತು ವ್ಯಯಕ್ತಿಕ ಬಳಕೆಯ ವಾಹನಗಳು ಸಹ ಸೇರಿವೆ. ಮುಂದಿನ ವಾರ ಫೆಬ್ರುವರಿ 3ರಂದು ಹೊಸ ಅರ್ಥ್ ಎನರ್ಜಿಯ ಹೊಸ ಇವಿ ವಾಹನಗಳು ಅನಾವರಣಗೊಳ್ಳುತ್ತಿದ್ದು, ಅನಾವರಣಗೊಂಡ ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿವೆ.

ಮುಂಬೈನಲ್ಲಿಯೇ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಅರ್ಥ್ ಎನರ್ಜಿ ಕಂಪನಿಯು ಹೊಸ ಇವಿ ಉತ್ಪನ್ನಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದ್ದು, ಅತ್ಯುತ್ತಮ ಬ್ಯಾಟರಿ ಸೌಲಭ್ಯವನ್ನು ಹೊಂದಿರಲಿವೆ.

ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕುರಿತಾಗಿ ಅರ್ಥ್ ಎನರ್ಜಿ ಕಂಪನಿಯು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲವಾದರೂ ಅಧಿಕೃತ ಫೇಸ್‌ಬುಕ್ ಖಾತೆ ಮೂಲಕ ಹೊಸ ದ್ವಿಚಕ್ರ ವಾಹನಗಳ ಕೆಲವು ಪ್ರಮುಖ ತಾಂತ್ರಿಕ ಅಂಶಗಳ ಕುರಿತಾಗಿ ಟೀಸರ್ ಬಿಡುಗಡೆ ಮಾಡಲಿದೆ.

ಅರ್ಥ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಜೊತೆಗೆ ಎಲೆಕ್ಟ್ರಿಕ್ ಬೈಕ್ ಮಾದರಿಗಳನ್ನು ಸಿದ್ದಪಡಿಸುತ್ತಿದ್ದು, ಹೊಸ ವಾಹನಗಳ ಉತ್ಪಾದನೆಗಾಗಿ ಗರಿಷ್ಠ ಶೇ.96 ರಷ್ಟು ದೇಶಿಯ ಮಾರುಕಟ್ಟೆಯಲ್ಲಿ ಉತ್ಪಾದನೆಗೊಂಡ ಬಿಡಿಭಾಗಗಳನ್ನೇ ಬಳಕೆ ಮಾಡುತ್ತಿರುವುದಾಗಿ ಹೇಳಿಕೊಂಡಿದೆ.

ಜೊತೆಗೆ ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಉತ್ಪನ್ನವನ್ನು ತಾನೇ ಉತ್ಪಾದನೆ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಅರ್ಥ್ ಎನರ್ಜಿ ಕಂಪನಿಯು ಇನ್‌ಹೌಸ್ ಬ್ಯಾಟರಿ ಬಳಕೆಯಿಂದಾಗಿ ಇವಿ ವಾಹನಗಳ ಬೆಲೆಯನ್ನು ಪೆಟ್ರೋಲ್ ಮಾದರಿಗಳಿಂತಲೂ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿ ಹೇಳಿಕೊಂಡಿದೆ.

ಅರ್ಥ್ ಎನರ್ಜಿ ಕಂಪನಿಯು ಭಾರತದಲ್ಲಿ ಮೊದಲ ಇವಿ ವಾಹನ ಮಾದರಿಯಾಗಿ ಗ್ಲೆಡೆ ಎನ್ನುವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದ್ದು, ತದನಂತರ ಹಂತ-ಹಂತವಾಗಿ ಆರು ದ್ವಿಚಕ್ರ ವಾಹನಗಳನ್ನು ಇದೇ ವರ್ಷಾಂತ್ಯದ ತನಕವು ಬಿಡುಗಡೆ ಮಾಡಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಗ್ಲೆಡೆ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಈ ಸ್ಕೂಟರಿನ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಲು ಗರಿಷ್ಠ ಎರಡೂವರೆ ಗಂಟೆ ತೆಗೆದುಕೊಳ್ಳುತ್ತದೆ.

ಗ್ಲೆಡೆ ಸ್ಕೂಟರ್ ಬಿಡುಗಡೆಯ ನಂತರ ಮೂರು ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿ ಟು ಬಿ ಉದ್ದೇಶಗಳಿಗೆ ಪೂರೈಕೆ ಮಾಡುವ ಯೋಜನೆ ಹೊಂದಿರುವ ಅರ್ಥ್ ಎನರ್ಜಿ ಕಂಪನಿಯು 2021ರ ಅಂತ್ಯಕ್ಕೆ 4,500 ಯುನಿಟ್ ಇವಿ ವಾಹನ ಮಾರಾಟ ಗುರಿಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಆರು ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಪಟ್ಟಿಯಲ್ಲಿ ಅರ್ಥ್ ಎನರ್ಜಿ ಕಂಪನಿಯು ಒಂದು ಕ್ರೂಸರ್ ಬೈಕ್ ಮಾದರಿಯನ್ನು ಪರಿಚಯಿಸಲಿದ್ದು, ಸದ್ಯಕ್ಕೆ ಮುಂಬೈನಲ್ಲಿ ಮಾತ್ರ ವಾಹನ ಮಾರಾಟ ಪ್ರಕ್ರಿಯೆ ಆರಂಭಿಸಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಜಾಲ ವಿಸ್ತರಿಸುವ ಯೋಜನೆ ಹೊಂದಿದೆ.