Rugged ಇವಿ ಸ್ಕೂಟರ್ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಂಡ eBikeGo ಕಂಪನಿ
ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲಿ ವಿನೂತನ ಉತ್ಪನ್ನಗಳೊಂದಿಗೆ ಇಬೈಕ್‌ಗೊ (eBikeGo) ಕಂಪನಿಯು ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇಬೈಕ್‌ಗೊ ಕಂಪನಿಯು ಇತ್ತೀಚೆಗೆ ಬಿಡುಗಡೆ ಮಾಡಲಾದ ರಗಡ್ ಇವಿ ಸ್ಕೂಟರ್ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಇವಿ ಸ್ಕೂಟರ್ ಬಿಡುಗಡೆ ಮಾಡಿದ ಕೇವಲ ಎರಡು ತಿಂಗಳ ಅವಧಿಯಲ್ಲಿ ಬರೋಬ್ಬರಿ 1 ಲಕ್ಷ ಯುನಿಟ್‌ಗಳಿಗೆ ಬೇಡಿಕೆ ಪಡೆದುಕೊಂಡಿದೆ. ವಿನೂತನ ವಿನ್ಯಾಸದೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ರಗಡ್ ಇವಿ ಸ್ಕೂಟರ್ ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ದುಬಾರಿ ಇಂಧನಗಳ ದರ ಪರಿಣಾಮ ಎಲೆಕ್ಟ್ರಿಕ್ ವಾಹನ ಬಳಕ ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಇವಿ ವಾಹನಗಳ ಮಾರಾಟವು ಸಾಕಷ್ಟು ಏರಿಕೆಯಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆ ವಿವಿಧ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸುವಲ್ಲಿ ಸ್ಟಾರ್ಟ್ ಕಂಪನಿಗಳು ಯಶಸ್ವಿಯಾಗುತ್ತಿವೆ.

ಇಬೈಕ್‌ಗೊ ಕಂಪನಿಯು ಕೂಡಾ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಇವಿ ಸ್ಕೂಟರ್‌ಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ, ಉನ್ನತೀಕರಿಸಿ ಬ್ಯಾಟರಿ ಪ್ಯಾಕ್ ಹೊಂದಿರುವ ರಗಡ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೂ ಮುನ್ನ ಗ್ರಾಹಕರ ಬೇಡಿಕೆಗಳನ್ನು ಪೂರೈಸಲು ವಿವಿಧ ಹಂತದ ಮಾರುಕಟ್ಟೆ ಅಧ್ಯಯನಗಳನ್ನು ಕೈಗೊಂಡಿದ್ದ ಇಬೈಕ್‌ಗೊ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಸಾರವಾಗಿ ರಗಡ್ ಮೊಟೊ ಸ್ಕೂಟರ್ ಪರಿಚಯಿಸಿದೆ.

ಇಬೈಕ್‌ಗೊ ಕಂಪನಿಯು ಹೊಸ ಇವಿ ಮೊಟೊ-ಸ್ಕೂಟರ್ ಮಾದರಿಯನ್ನು ಸಂಪೂರ್ಣವಾಗಿ ದೇಶಿಯ ಮಾರುಕಟ್ಟೆಯಲ್ಲಿಯೇ ಅಭಿವೃದ್ದಿಗೊಳಿಸಿದ್ದು, ಮೇಕ್ ಇನ್ ಇಂಡಿಯಾ ಅಭಿಯಾನದಡಿ ಹೊಸ ಯೋಜನೆಗೆ ಚಾಲನೆ ನೀಡಲಾಗಿದೆ.

ರಗಡ್ ಎಲೆಕ್ಟ್ರಿಕ್ ಮೊಟೊ-ಸ್ಕೂಟರ್ ಮಾದರಿಯು ಐಸಿಎಟಿ(ICAT) ಸಂಸ್ಥೆಯಿಂದ ಅನುಮೋದನೆ ಪಡೆದುಕೊಂಡಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆಗೆ ಅರ್ಹವಾಗಿರುವುದು ಕೂಡಾ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಹೊಸ ಎಲೆಕ್ಟ್ರಿಕ್ ಮೊಟೊ ಸ್ಕೂಟರ್ ಮಾದರಿಯು ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ವೈಶಿಷ್ಟ್ಯಗಳು ಮತ್ತು ಆಧುನಿಕ ಸಲಕರಣೆಗಳೊಂದಿಗೆ ಬಿಡುಗಡೆಯಾಗಿದ್ದು, ಹೊಸ ಎಲೆಕ್ಟ್ರಿಕ್ ಮೊಟೊ-ಸ್ಕೂಟರ್ ಮಾದರಿಯು ಹಲವಾರು ಹೊಸ ವಿಶೇಷತೆಗಳನ್ನು ಒಳಗೊಂಡಿದೆ.

ರಗಡ್ ಎಲೆಕ್ಟ್ರಿಕ್ ಮೊಟೊ-ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ.79,999 ಬೆಲೆ ಹೊಂದಿದೆ.

ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ರಗಡ್ ಜಿ1 ಮತ್ತು ರಗಡ್ ಜಿ1 ಪ್ಲಸ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದ್ದು, ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 99,999 ಗಳಾಗಿದೆ.

ರಗಡ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 3kW ಹಬ್-ಮೌಂಟೆಡ್ ಬ್ರಷ್ ರಹಿತ ಡಿಸಿ ಮೋಟಾರ್ ನೊಂದಿಗೆ ಡ್ಯುಯಲ್ 1.9kWh ಲೀ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಜೋಡಿಸಲಾಗಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 160 ಕಿ.ಮೀ ಮೈಲೇಜ್ ರೇಂಜ್ ನೀಡುತ್ತದೆ.

ಹೊಸ ಸ್ಕೂಟರ್‌ನಲ್ಲಿ ಕಂಪನಿಯು ಎರಡು ರೈಡಿಂಗ್ ಮೋಡ್‌ಗಳನ್ನು ನೀಡಿದ್ದು, ಇಕೋ ಮೋಡ್‌ನಲ್ಲಿ ರಗಡ್ ಸ್ಕೂಟರ್ ಮಾದರಿಯು ಗರಿಷ್ಠ 160 ಕಿ,ಮೀ ರೇಂಜ್ ನೀಡಿದ್ದಲ್ಲಿ ಪವರ್ ಮೋಡ್ ನಲ್ಲಿ ಗರಿಷ್ಠ 135 ಕಿ.ಮೀ ರೇಂಜ್ ಅನ್ನು ಹೊಂದಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ 12 ಬಿಲ್ಟ್ ಇನ್ ಸ್ಮಾರ್ಟ್ ಸೆನ್ಸಾರ್‌ಗಳನ್ನು ಜೋಡಿಸಲಾಗಿದ್ದು, ಬಳಕೆದಾರರು ರಗಡ್ ಮೊಬೈಲ್ ಅಪ್ಲಿಕೇಶನ್ ಬಳಸಿ ವಿವಿಧ ಫೀಚರ್ಸ್ ಗಳನ್ನು ಕಂಟ್ರೋಲ್ ಮಾಡಬಹುದು. ಬಳಕೆದಾರರು ಈ ಅಪ್ಲಿಕೇಶನ್ ಮೂಲಕ ಅನ್ ಲಾಕ್ ಮಾಡಬಹುದು. ಇನ್ನು ಅಪಘಾತ ಅಥವಾ ಇತರ ತುರ್ತು ಸಂದರ್ಭಗಳಲ್ಲಿ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುವ ಆಂಟಿ ಥೇಫ್ಟ್ ಫೀಚರ್ಸ್ ಇದರಲ್ಲಿದೆ.

ಹೊಸ ಎಲೆಕ್ಟ್ರಿಕ್ ಮೊಟೊ ಸ್ಕೂಟರ್ ಮಾದರಿಯು ಬಾಡಿಯು ಕ್ರ್ಯಾಡಲ್ ಚಾಸಿಸ್ ಮತ್ತು ಸ್ಟೀಲ್ ಫ್ರೇಮ್ ನಿಂದ ಕೂಡಿದ್ದು,ಈ ಮೂಲಕ ಉತ್ತಮ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ, ಹೊಸ ಇವಿ ಸ್ಕೂಟರ್ ವಿತರಣೆಯು ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಆರಂಭವಾಗಲಿದ್ದು, ಹೊಸ ಸ್ಕೂಟರ್ ಮಾದರಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.


Click it and Unblock the Notifications








