ಫೆಬ್ರವರಿ ತಿಂಗಳಿನಲ್ಲಿ ಏರಿಕೆ ಕಂಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ
ದೇಶದಲ್ಲಿ ದಿನೇ ದಿನೇ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಫೆಬ್ರವರಿ ತಿಂಗಳಿನಲ್ಲಿಯೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಬೇಡಿಕೆ ಹೊಂದಿರುವುದು ಮಾರಾಟದ ಅಂಕಿ ಅಂಶಗಳಿಂದ ಕಂಡು ಬಂದಿದೆ.

ಕಳೆದ ತಿಂಗಳು ದೇಶಾದ್ಯಂತ ಒಟ್ಟು 6059 ಯುನಿಟ್ ದ್ವಿಚಕ್ರ ವಾಹನಗಳು ಮಾರಾಟವಾಗಿವೆ. ಈ ಪ್ರಮಾಣವು 2020ರ ಫೆಬ್ರವರಿ ತಿಂಗಳಿಗೆ ಹೋಲಿಸಿದರೆ 170%ನಷ್ಟು ಹೆಚ್ಚಾಗಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ ಪಟ್ಟಿಯಲ್ಲಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಮೊದಲನೇ ಸ್ಥಾನದಲ್ಲಿದ್ದರೆ, ಒಕಿನಾವಾ ಕಂಪನಿಯು ಎರಡನೇ ಸ್ಥಾನದಲ್ಲಿದೆ.

ಹೀರೋ ಎಲೆಕ್ಟ್ರಿಕ್ ಕಂಪನಿಯು ಫೆಬ್ರವರಿ ತಿಂಗಳಿನಲ್ಲಿ 2201 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಕಂಪನಿಯು 2020ರ ಫೆಬ್ರವರಿಯಲ್ಲಿ 614 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು. ಈ ಮೂಲಕ ಕಂಪನಿಯು ಮಾರಾಟದಲ್ಲಿ 258%ನಷ್ಟು ಬೆಳವಣಿಗೆಯನ್ನು ದಾಖಲಿಸಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಳೆದ ವರ್ಷ 27%ನಷ್ಟಿದ್ದ ಕಂಪನಿಯ ಮಾರುಕಟ್ಟೆ ಪಾಲು ಈ ವರ್ಷ 36%ಗಳಿಗೆ ಏರಿಕೆಯಾಗಿದೆ. ಒಕಿನಾವಾ ಕಂಪನಿಯು ಫೆಬ್ರವರಿ ತಿಂಗಳಿನಲ್ಲಿ 1059 ಯುನಿಟ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಒಕಿನಾವಾ ಕಂಪನಿಯು ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ 664 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು. ಈ ಮೂಲಕ ಕಂಪನಿಯು ಮಾರಾಟದಲ್ಲಿ 59%ನಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಂಪನಿಯ ಮಾರುಕಟ್ಟೆ ಪಾಲು 17%ನಷ್ಟಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಮೂರನೆಯ ಸ್ಥಾನದಲ್ಲಿ ಆಂಪಿಯರ್ ಕಂಪನಿಯು ಫೆಬ್ರವರಿ ತಿಂಗಳಿನಲ್ಲಿ 800 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ, ಕಂಪನಿಯು 2020ರ ಫೆಬ್ರವರಿಯಲ್ಲಿ 286 ಯುನಿಟ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿತ್ತು.

ಈ ಮೂಲಕ ಆಂಪಿಯರ್ ಕಂಪನಿಯು ಮಾರಾಟದಲ್ಲಿ 179%ನಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಂಪನಿಯು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ 12%ನಷ್ಟು ಪಾಲನ್ನು ಹೊಂದಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ನಾಲ್ಕನೇ ಸ್ಥಾನದಲ್ಲಿರುವ ಎಥೆರ್ ಎನರ್ಜಿ ಕಂಪನಿಯು ಫೆಬ್ರವರಿ ತಿಂಗಳಿನಲ್ಲಿ 624 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಎಥೆರ್ ಕಂಪನಿಯು ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ 369 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು.

ಎಥೆರ್ ಕಂಪನಿಯು ಕಳೆದ ವರ್ಷಕ್ಕಿಂತ 69%ನಷ್ಟು ಹೆಚ್ಚು ಬೆಳವಣಿಗೆಯನ್ನು ದಾಖಲಿಸಿದೆ. ಕಂಪನಿಯು 10%ನಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಐದನೇ ಸ್ಥಾನದಲ್ಲಿರುವ ಪ್ಯೂರ್ ಎನರ್ಜಿ ಫೆಬ್ರವರಿಯಲ್ಲಿ 404 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಪ್ಯೂರ್ ಎನರ್ಜಿ ಕಂಪನಿಯು, ಮಾರುಕಟ್ಟೆಯಲ್ಲಿ 6%ನಷ್ಟು ಪಾಲನ್ನು ಹೊಂದಿದೆ. ಬೆನೆಲ್ಲಿಂಗ್ ಹಾಗೂ ಟಿವಿಎಸ್ ಮೋಟರ್ ಕಂಪನಿಗಳು ನಂತರದ ಸ್ಥಾನಗಳಲ್ಲಿವೆ.

ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವುದರಿಂದ ಕೇವಲ 111 ಯುನಿಟ್'ಗಳನ್ನು ಮಾರಾಟ ಮಾಡಲು ಸಾಧ್ಯವಾಗಿದೆ. ಮ್ಯೂ ಹಾಗೂ ರಿವೋಲ್ಟ್ ಕಂಪನಿಗಳು ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಇತ್ತೀಚಿಗಷ್ಟೇ ಬಿಡುಗಡೆಯಾದ ಕಬೀರಾ ಮೊಬಿಲಿಟಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಆದರೂ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕಂಪನಿಯ 5,000ಕ್ಕೂ ಹೆಚ್ಚು ಯುನಿಟ್ ಬೈಕ್'ಗಳನ್ನು ಬುಕ್ ಮಾಡಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಮಾರಾಟವು ಸ್ಥಿರವಾಗಿದೆ. ಈಗ ಇಂಧನದ ಬೆಲೆಗಳು ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಮತ್ತಷ್ಟು ಹೆಚ್ಚಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.


Click it and Unblock the Notifications