ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ದೇಶದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟವನ್ನು ಹೆಚ್ಚಿಸಲು ಫೇಮ್ 2 ಯೋಜನೆಯನ್ನು ಪುನರುಜ್ಜೀವನಗೊಳಿಸುವುದಕ್ಕೆ ಕೇಂದ್ರ ಸರ್ಕಾರವು ಮನ್ನಣೆ ನೀಡುತ್ತದೆ. ಈ ವರ್ಷದ ಜೂನ್‌ನಲ್ಲಿ ಫೇಮ್ 2 ಯೋಜನೆಯನ್ನು ಮರು ರೂಪಿಸಿದ ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟವು ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಭಾರೀ ಕೈಗಾರಿಕೆಗಳ ಇಲಾಖೆ ಹೇಳಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಫೇಮ್ 2 ಯೋಜನೆಯ ಅನುಷ್ಠಾನದ ನಂತರ, ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟವು ವಾರಕ್ಕೆ 700 ಯುನಿಟ್‌ಗಳಿಂದ 5,000 ಯುನಿಟ್‌ಗಳಿಗೆ ಹೆಚ್ಚಾಗಿದೆ ಎಂದು ಇಲಾಖೆ ತಿಳಿಸಿದೆ. ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ರೂ. 10,000 ಕೋಟಿ ಮೀಸಲಿಟ್ಟಿದೆ. ಈ ಮೊತ್ತದೊಂದಿಗೆ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಅಡಾಪ್ಷನ್ ಅಂಡ್ ಮ್ಯಾನುಫ್ಯಾಕ್ಚರಿಂಗ್ ಅಂದರೆ ಫೇಮ್ ಯೋಜನೆಯ ಎರಡನೇ ಹಂತವನ್ನು ಆರಂಭಿಸಿತು.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಕೇಂದ್ರ ಸರ್ಕಾರವು ಈ ಯೋಜನೆಯ ಮೂಲಕ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಬ್ಸಿಡಿ ನೀಡುತ್ತದೆ. ಜೊತೆಗೆ ಈ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ನಿರ್ಮಿಸಲಾಗುತ್ತದೆ. ಈ ವರ್ಷದ ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರವು ಆಟೋ ಉದ್ಯಮ ಹಾಗೂ ಬಳಕೆದಾರರ ಅನುಭವ ಮತ್ತು ಪ್ರತಿಕ್ರಿಯೆಯನ್ನು ಆಧರಿಸಿ ಫೇಮ್ 2 ಯೋಜನೆಯನ್ನು ಮರು ವಿನ್ಯಾಸಗೊಳಿಸಿತು.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಹೊಸ ಫೇಮ್ 2 ಯೋಜನೆಯು ಮುಂಗಡ ವೆಚ್ಚವನ್ನು ಕಡಿಮೆ ಮಾಡುವ ಮೂಲಕ ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಹರಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. 2021ರಲ್ಲಿ ಡಿಸೆಂಬರ್ 16 ರವರೆಗೆ ಒಟ್ಟು 1.4 ಲಕ್ಷ ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಉತ್ತೇಜನ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯಡಿಯಲ್ಲಿ ಈ ಎಲೆಕ್ಟ್ರಿಕ್ ವಾಹನಗಳಿಗೆ ಸುಮಾರು ರೂ. 500 ಕೋಟಿ ಹಣವನ್ನು ಪ್ರೋತ್ಸಾಹಕ ಮೊತ್ತವಾಗಿ ಮಂಜೂರು ಮಾಡಲಾಗಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಇದರ ಅಡಿಯಲ್ಲಿ 1.19 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಸುಮಾರು 20 ಸಾವಿರ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಹಾಗೂ 580 ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನಗಳಿಗೆ ಸಬ್ಸಿಡಿ ನೀಡಲಾಗಿದೆ. ಫೇಮ್ 2 ಯೋಜನೆಯಡಿಯಲ್ಲಿ ಇದುವರೆಗೂ ಒಟ್ಟು 1.85 ಲಕ್ಷ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಕಳೆದ ಕೆಲವು ವರ್ಷಗಳಿಂದ ಹಲವು ಕಾರಣಗಳಿಗಾಗಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಇವುಗಳಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಗಗನಕ್ಕೇರಿರುವುದು, ಸಾರ್ವಜನಿಕ ಸಾರಿಗೆಯನ್ನು ಬಳಸುವ ಬದಲು ವೈಯಕ್ತಿಕ ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿರುವಂತಹ ಕಾರಣಗಳು ಸೇರಿವೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತೆಗೆದುಕೊಳ್ಳುತ್ತಿರುವ ಕ್ರಮಗಳೂ ಸಹ ಸೇರಿವೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಇನ್ನು ವಿಶ್ವಾದ್ಯಂತ ದಿನೇ ದಿನೇ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪರಿಸರ ಸ್ನೇಹಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ನಾರ್ವೆ ಸೇರಿದಂತೆ ಯುರೋಪಿನ ಹಲವು ದೇಶಗಳಲ್ಲಿ 2030ರ ವೇಳೆಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಫೇಮ್ 2ನಂತಹ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಈಗ ದೇಶಿಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹಲವು ಹೊಸ ಸ್ಟಾರ್ಟ್ ಅಪ್‌ ಕಂಪನಿಗಳು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ ತಮ್ಮ ವಾಹನಗಳನ್ನು ಬಿಡುಗಡೆಗೊಳಿಸಲು ಮುಂದಾಗುತ್ತಿವೆ. ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಕೆಲವು ಹೊಸ ಹೆಸರುಗಳು ಹೊರಹೊಮ್ಮುತ್ತಿವೆ. ಸ್ಮಾರ್ಟ್‌ಫೋನ್ ತಯಾರಕ ಕಂಪನಿಗಳು ಸಹ ಕೂಡ ಈ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಲು ಮುಂದಾಗುತ್ತಿವೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಕೆಲವು ದಿನಗಳ ಹಿಂದಷ್ಟೇ ಖ್ಯಾತ ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ Xiaomi ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡುವುದಾಗಿ ತಿಳಿಸಿತ್ತು. ಇತ್ತೀಚೆಗಷ್ಟೇ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ ಒಪ್ಪೋ ಸಹ ತನ್ನ ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಈಗ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ VIVO ಸಹ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಇತ್ತೀಚೆಗೆ VIVO ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಟ್ರೇಡ್‌ಮಾರ್ಕ್ ಅನ್ನು ಸಲ್ಲಿಸಿದೆ. VIVO ಗಿಂತ ಮೊದಲು, ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ OnePlus ಸಹ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆಗೊಳಿಸುವುದಾಗಿ ತಿಳಿಸಿತ್ತು. ಮಾಹಿತಿಗಳ ಪ್ರಕಾರ, OnePlus ಕಂಪನಿಯು ಭಾರತದಲ್ಲಿ Oneplus Life ಹೆಸರಿನಲ್ಲಿ ಟ್ರೇಡ್‌ಮಾರ್ಕ್ ಸಲ್ಲಿಸಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಸ್ಮಾರ್ಟ್‌ಫೋನ್ ತಯಾರಕ ಕಂಪನಿಗಳು ಚಾಲಕರಹಿತ ಕಾರು, ಸೆಲ್ಫ್ ಬ್ಯಾಲೆನ್ಸ್ ಸ್ಕೂಟರ್‌, ಸೆಲ್ಫ್ ಬ್ಯಾಲೆನ್ಸ್ ಬೋರ್ಡ್‌, ರಿಮೋಟ್ ಕಂಟ್ರೋಲ್ ವಾಹನಗಳು, ನಾಗರಿಕ ಡ್ರೋನ್‌ಗಳು ಹಾಗೂ ಸೆಲ್ಫ್ ಬ್ಯಾಲೆನ್ಸ್ ಎಲೆಕ್ಟ್ರಿಕ್ ಯುನಿಸೈಕಲ್‌ಗಳಿಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. Oppo ತನ್ನ ಎಲೆಕ್ಟ್ರಿಕ್ ವಾಹನವನ್ನು 2024 ರ ಆರಂಭದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ಕೆಲವು ವರದಿಗಳಲ್ಲಿ ಬಹಿರಂಗಪಡಿಸಲಾಗಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

Xiaomi, Huawei ಹಾಗೂ Apple ನಂತಹ ಜನಪ್ರಿಯ ಮೊಬೈಲ್ ತಯಾರಕ ಕಂಪನಿಗಳು ಸಹ ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರವನ್ನು ಪ್ರವೇಶಿಸಲು ಸಜ್ಜಾಗುತ್ತಿವೆ. ಇನ್ನು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ Oppo ಬಗ್ಗೆ ಮಾತನಾಡುವುದಾದರೆ, ಕಂಪನಿಯು ಭಾರತಕ್ಕಾಗಿ ಎಲೆಕ್ಟ್ರಿಕ್ ಕಾರ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ವರದಿಯಾಗಿದೆ.

ಫೇಮ್ 2 ಯೋಜನೆಯಡಿಯಲ್ಲಿ ಹೆಚ್ಚಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ

ಈ ಎಲೆಕ್ಟ್ರಿಕ್ ಕಾರ್ ಅನ್ನು 2024 ರಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. OPPO, Realme ಹಾಗೂ OnePlus ನಂತಹ ಕಂಪನಿಗಳು BBK ಎಲೆಕ್ಟ್ರಾನಿಕ್ಸ್ ಒಡೆತನದಲ್ಲಿದೆ. OPPO, Realme ಹಾಗೂ OnePlus ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಪಡಿಸಿ, ಬಿಡುಗಡೆಗೊಳಿಸಲು ನಿರ್ಧರಿಸುತ್ತಿವೆ. Oppo ಕಂಪನಿಯು 2024 ರ ಆರಂಭದಲ್ಲಿ ಸಂಭವನೀಯ ಉಡಾವಣೆಯೊಂದಿಗೆ ತನ್ನ ವಾಹನವನ್ನು ಬಿಡುಗಡೆಗೊಳಿಸಬಹುದು.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Electric two wheeler vehicle sales increased under fame ii scheme details
Story first published: Thursday, December 23, 2021, 17:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X