Just In
- 22 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ವರ್ಷಕ್ಕೆ 850 ಮಿಲಿಯನ್ ಸ್ಪುಟ್ನಿಕ್ V ಲಸಿಕೆ ತಯಾರಿಸಲಿದೆ ಭಾರತ
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಕಿ.ಮೀಗೆ 20 ಪೈಸೆ ರನ್ನಿಂಗ್ ಕಾಸ್ಟ್ ಹೊಂದಿರುವ ವಿನೂತನ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸಾಂಪ್ರಾದಾಯಿಕ ವಾಹನ ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳೇ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ದೆಹಲಿ ಮೂಲದ ಗೆಲಿಯೋಸ್ ಮೊಬಿಲಿಟಿ ಕಂಪನಿಯು ಕೂಡಾ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಹೋಪ್ ಎಲೆಕ್ಟ್ರಿಕ್ ಮೊಪೆಡ್ ಬಿಡುಗಡೆ ಮಾಡಿದೆ.

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರಾರಂಭಿಸಿರುವ ಸ್ಟಾರ್ಟ್ ಅಪ್ ಗೆಲಿಯೋಸ್ ಮೊಬಿಲಿಟಿ ಸಂಸ್ಥೆಯು ಮೊದಲ ಬಾರಿಗೆ ವಾಣಿಜ್ಯ ಬಳಕೆಗೆ ಸಹಕಾರಿಯಾಗುವ ಇವಿ ಮೊಪೆಡ್ ಸಿದ್ದಪಡಿಸಿದ್ದು, ಹೊಸ ಹೋಪ್ ಎಲೆಕ್ಟ್ರಿಕ್ ಮಾದರಿಯ ಬೆಲೆಯನ್ನು ರೂ.46,999ಕ್ಕೆ ನಿಗದಿಪಡಿಸಿದೆ.

ಹೊಸ ಇವಿ ಮೊಪೆಡ್ ಮಾದರಿಯನ್ನು ಸದ್ಯ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಮಾತ್ರ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಈಗಾಗಲೇ ಸಾವಿರಾರು ಗ್ರಾಹಕರು ಹೊಸ ಮೊಪೆಡ್ ಖರೀದಿಗೆ ಸಿದ್ದವಾಗಿದ್ದಾರೆ.

ಲೋ ಸ್ಪೀಡ್ ಇವಿ ಮೊಪೆಡ್ ಆವೃತ್ತಿಯಾಗಿರುವ ಹೋಪ್ ಮಾದರಿಯು ಎರಡು ಪ್ರಮುಖ ವೆರಿಯೆಂಟ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ 50 ಕಿ.ಮೀ(ಆರಂಭಿಕ ಮಾದರಿ) ಮತ್ತು ಟಾಪ್ ಎಂಡ್ ಮಾದರಿಯು 75 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಈ ಸ್ಕೂಟರ್‌ನ ಉನ್ನತ ವೇಗವನ್ನು ಗಂಟೆಗೆ 25 ಕಿಲೋಮೀಟರ್‌ಗೆ ಸೀಮಿತಗೊಳಿಸಲಾಗಿದ್ದು, ಲೋ ಸ್ಪೀಡ್ ಮಾದರಿಯಾಗಿರುವುದರಿಂದ ಕಡಿಮೆ ವೇಗದ ಎಲೆಕ್ಟ್ರಿಕ್ ವಾಹನದ ವ್ಯಾಪ್ತಿಯಲ್ಲಿ ಬರುತ್ತದೆ.

ಲೋ ಸ್ಪೀಡ್ ಮಾದರಿಯಾಗಿರುವುದರಿಂದ ಈ ಮೊಪೆಡ್ ಚಲಾಯಿಸಲು ಡ್ರೈವಿಂಗ್ ಲೈನೆಸ್ಸ್ ಮತ್ತು ವಾಹನದ ನೋಂದಣಿ ಪ್ರಕ್ರಿಯೆಯು ಈ ಸ್ಕೂಟರ್‌ನ ಪ್ರಮುಖ ಆಕರ್ಷಣೆಯಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಬಹುದಾಗಿದೆ.

ಪೋರ್ಟಬಲ್ ಚಾರ್ಜರ್ ಮತ್ತು ಪೋರ್ಟಬಲ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿರುವ ಹೋಪ್ ಇವಿ ಸ್ಕೂಟರ್ ಅನ್ನು ಹೋಂ ಚಾರ್ಜರ್ ಮೂಲಕ ನಾಲ್ಕು ಗಂಟೆಗಳಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್ ಮಾಡಬಹುದಾಗಿದ್ದು, ಈ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಪ್ರತ್ಯೇಕ ಚಾರ್ಜರ್ ಅನ್ನು ಸ್ಥಾಪಿಸುವ ಅಗತ್ಯವಿಲ್ಲ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಸಾರಿಗೆ ಅಗತ್ಯಗಳಿಗೆ ಅನುಗುಣವಾಗಿ, ಕಂಪನಿಯು ಸ್ಕೂಟರ್‌ಗೆ ಎರಡು ವಿಭಿನ್ನ ಬ್ಯಾಟರಿ ಸಾಮರ್ಥ್ಯದ ಆಯ್ಕೆಯನ್ನು ಒದಗಿಸಿದ್ದು, ಅಗತ್ಯ ಸಂದರ್ಭದಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿರುವ ಪ್ಯಾಡಲ್ ಅಸಿಸ್ಟ್ ಸಹ ಬಳಕೆ ಮಾಡಬಹುದು.

ಈ ಮೂಲಕ ಈ ಎಲೆಕ್ಟ್ರಿಕ್ ಸ್ಕೂಟರ್ ನಿರ್ವಹಣಾ ವೆಚ್ಚವು ಪ್ರತಿ ಕಿ.ಮೀ ಗೆ 20 ಪೈಸೆಗಿಂತಲೂ ಕಡಿಮೆ ಖರ್ಚಾಗಲಿದ್ದು, ನೋಂದಣಿ, ಇಂಧನ ವೆಚ್ಚ ಇಲ್ಲದಿರುವುದು ಆರ್ಥಿಕವಾಗಿ ಹೆಚ್ಚು ಲಾಭದಾಯಕ ವಾಹನವಾಗಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ಹೊಸ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಗರಿಷ್ಠ ಶೇ.96 ರಷ್ಟು ದೇಶಿಯ ಮಾರುಕಟ್ಟೆಯಲ್ಲಿ ಉತ್ಪಾದನೆಗೊಂಡ ಬಿಡಿಭಾಗಗಳನ್ನೇ ಬಳಕೆ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹೊಸ ಉತ್ಪನ್ನಗಳನ್ನು ಸಿದ್ದಪಡಿಸುತ್ತಿದೆ.