ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಬ್ಯಾಟರಿ ವಿನಿಯಮ ಕೇಂದ್ರಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಮುಗಿದಿರುವ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿನ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹಭಾಗಿತ್ವ ಯೋಜನೆ ಅಡಿಯಲ್ಲಿ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ದೇಶದ ಅತಿದೊಡ್ಡ ಬೈಕ್ ತಯಾರಕ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಕೂಡಾ ಸಹಭಾಗಿತ್ವ ಯೋಜನೆಯಲ್ಲಿ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಮತ್ತು ಸ್ಥಿರ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಸಿದ್ದವಾಗಿದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ತೈವಾನ್ ಮೂಲದ ಗೊಗೊರೊ ಕಂಪನಿಯ ಜೊತೆಗೆ ಹೊಸ ಒಪ್ಪಂದಕ್ಕೆ ಸಹಿಹಾಕಿರುವ ಹೀರೋ ಮೋಟಾಕಾರ್ಪ್ ಕಂಪನಿಯು ಭಾರತದಲ್ಲಿ ಇವಿ ವಾಹನ ಮಾರಾಟದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗಿದಿದ್ದು, ಕೊನೆಯ ಮೈಲಿಯ ವರೆಗೂ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪಿಸುವ ಗುರಿಯೊಂದಿಗೆ ಗೊಗೊರೊ ನಿರ್ಮಾಣದ ಪ್ರಮುಖ ಇವಿ ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡಲಿದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಹೀರೋ ಎಲೆಕ್ಟ್ರಿಕ್ ಹೊರತುಪಡಿಸಿ ಹೀರೋ ಮೋಟೊಕಾರ್ಪ್ ಕಂಪನಿಯು ಪ್ರತ್ಯೇಕವಾಗಿ ಇವಿ ವಾಹನ ಉದ್ಯಮ ಕೈಗೊಳ್ಳಲಿದ್ದು, ಹೀರೋ ಮೋಟೊಕಾರ್ಪ್ ಕಂಪನಿ 2022-23ರ ಹಣಕಾಸು ವರ್ಷದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಬಿಡುಗಡೆಯಾಗಲಿರುವ ಹೀರೋ ಮತ್ತು ಗೊಗೊರೊ ಎಲೆಕ್ಟ್ರಿಕ್ ಕಂಪನಿಗಳು ವಿವಾ ಎನ್ನುವ ಹೊಸ ಮಾದರಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣೆ ಮಾಡಲಾಗಿರುವ ಹಕ್ಕು ಸ್ವಾಮ್ಯ ಪ್ರತಿಯಲ್ಲಿ ಗೊಗೊರೊ ವಿವಾ ನಮೂದುಮಾಡಲಾಗಿದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಗೊಗೊರೊ ಕಂಪನಿಯು ಸದ್ಯ ತೈವಾನ್‌ನಲ್ಲಿ ವಿವಿಧ ಮಾದರಿಯ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಂದಿಗೆ ಸೌರವಿದ್ಯುತ್ ಮೂಲಕವೇ ಬ್ಯಾಟರಿ ಸ್ವಾಪಿಂಗ್ ಸೌಲಭ್ಯವನ್ನು ಜೋಡಣೆ ಮಾಡುವಲ್ಲಿ ಯಶಸ್ವಿ ಕಂಡುಕೊಂಡಿದ್ದು, ಹೀರೋ ಕಂಪನಿಯು ಕೂಡಾ ಇದೀಗ ಗೊಗೊರೊ ಜೊತೆಗೂಡಿ ಹೊಸ ಉದ್ಯಮದಲ್ಲಿ ತೊಡಗಿಸಿಕೊಳ್ಳುತ್ತಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಇನ್ನು ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲೂ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಸಹ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಇವಿ ವಾಹನ ಬಳಕೆಯು ಗರಿಷ್ಠ ಏರಿಕೆ ಕಾಣುತ್ತಿದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಖಾಸಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಫೇಮ್ 2 ಯೋಜನೆ ಅಡಿ ಸಬ್ಸಡಿ ಪ್ರಕಟಿಸಿದ್ದು, ಹೊಸ ಯೋಜನೆಗಾಗಿ ಕೇಂದ್ರ ಸರ್ಕಾರವು ಒಟ್ಟು ರೂ.10 ಸಾವಿರ ಕೋಟಿ ಮೀಸಲಿಟ್ಟಿದೆ.

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ಫೇಮ್ ಯೋಜನೆಯ ಮೊದಲ ಹಂತದಲ್ಲಿ ಸುಮಾರು ರೂ. 3 ಸಾವಿರ ಕೋಟಿ ನೀಡಿದ್ದ ಕೇಂದ್ರ ಸರ್ಕಾರವು ಎರಡನೇ ಹಂತದ ಯೋಜನೆಗಾಗಿ ರೂ. 10 ಸಾವಿರ ಕೋಟಿ ಮೀಸಲಿಟ್ಟಿದ್ದು, ಎರಡನೇ ಹಂತದಲ್ಲಿ 62 ಸಾವಿರ ಪ್ಯಾಸೆಂಜರ್ ಕಾರುಗಳು ಮತ್ತು ಬಸ್‌ಗಳಿಗೆ, 15 ಲಕ್ಷ ದ್ವಿಚಕ್ರ ವಾಹನಗಳ ಮತ್ತು ತ್ರಿ ಚಕ್ರ ವಾಹನಗಳು ಸಬ್ಸಡಿ ಪಡೆದುಕೊಳ್ಳಲಿವೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೀರೋ ಮೋಟೊಕಾರ್ಪ್ ಹೆಸರಿನಲ್ಲಿ ಮಾರಾಟಗೊಳ್ಳಲಿವೆ ಗೊಗೊರೊ ಇವಿ ವಾಹನಗಳು

ವ್ಯಯಕ್ತಿಕ ಬಳಕೆಯ ವಾಹನಗಳ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಎಲೆಕ್ಟ್ರಿಕ್ ವಾಹನಗಳ ಅಳವಡಿಸಿಕೊಳ್ಳಲು ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಮಾಲಿನ್ಯ ತಡೆ ಜೊತೆಗೆ ಹೆಚ್ಚುತ್ತಿರುವ ಇಂಧನ ಬಳಕೆ ಪ್ರಮಾಣವನ್ನು ತಗ್ಗಿಸಲು ಇದರ ಪ್ರಮುಖ ಉದ್ದೇಶವಾಗಿದೆ.

Most Read Articles

Kannada
English summary
Gogoro Viva Electric Scooter Patented In India. Read in Kannada.
Story first published: Wednesday, May 19, 2021, 1:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X