ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಎಲ್ಲಾ ಕಂಪನಿಯ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಕಡೆ ಮಾರಾಟ ಮಾಡಲು ಪ್ರಮುಖ ಕಂಪನಿಯೊಂದು ಹೊಸ ಹೆಸರಿನಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ನೋಡೋಣ.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಮಲ್ಟಿ ಬ್ರಾಂಡ್ ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕಂಪನಿಗಳು ಮಲ್ಟಿ ಬ್ರಾಂಡ್ ಎಲೆಕ್ಟ್ರಿಕ್ ವಾಹನ ಡೀಲರ್‌ಶಿಪ್ ಗಳನ್ನು ಆರಂಭಿಸುವ ಪ್ರಕ್ರಿಯೆ ಶುರುವಾಗುತ್ತಿದೆ. ಖ್ಯಾತ ಕಂಪನಿಯಾದ ಗ್ರೀವ್ಸ್ ಕಾಟನ್ ಒಂದೇ ಸ್ಥಳದಲ್ಲಿ ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಗ್ರೀವ್ಸ್ ಕಾಟನ್ ದೇಶದ ಪ್ರಮುಖ ಮಲ್ಟಿ ಡಿಸಿಪ್ಲೀನರಿ ಎಂಜಿನಿಯರಿಂಗ್ ಕಂಪನಿಯಾಗಿದೆ. ಈ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲೂ ತೊಡಗಿಕೊಂಡಿದೆ ಎಂಬುದು ಗಮನಾರ್ಹ. ಈಗ ಕಂಪನಿಯು ಎಲ್ಲಾ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಕಂಪನಿಯು ಆಟೋಇವಿಮಾರ್ಟ್ ಹೆಸರಿನಲ್ಲಿ ಮಲ್ಟಿ ಬ್ರಾಂಡ್ ಎಲೆಕ್ಟ್ರಿಕ್ ವಾಹನ ಮಳಿಗೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಮಳಿಗೆಗಳ ಮೂಲಕ ಎಲ್ಲಾ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸ್ಥಳದಲ್ಲಿ ಲಭ್ಯವಾಗುವಂತೆ ಮಾಡಲಿದೆ. ಈ ಶೋರೂಂಗಳ ಮೂಲಕ ಕೇವಲ ಗ್ರೀವ್ಸ್ ಕಾಟನ್ ಕಂಪನಿಯು ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿ ಚಕ್ರ ವಾಹನಗಳನ್ನು ಮಾರಾಟ ಮಾಡುವ ಉದ್ದೇಶವನ್ನು ಹೊಂದಿದೆ.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಹಲವು ಕಂಪನಿಗಳ ಉತ್ಪನ್ನಗಳನ್ನು ಒಂದೇ ಸ್ಥಳದಲ್ಲಿ ಪ್ರದರ್ಶಿಸುವುದರಿಂದ, ಗ್ರಾಹಕರು ಪ್ರತಿಯೊಂದು ಕಂಪನಿಯ ವಾಹನಗಳ ಬಗ್ಗೆ ತಿಳಿದುಕೊಳ್ಳಲು ವಿವಿಧ ಸ್ಥಳಗಳಿಗೆ ಅಲೆದಾಡುವುದು ತಪ್ಪಲಿದೆ. ಇದರ ಜೊತೆಯಲ್ಲಿ ಎಲ್ಲಾ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸ್ಥಳದಲ್ಲಿ ಹೋಲಿಕೆ ಮಾಡಿ ಸರಿ ಎನಿಸುವ ಕಂಪನಿಯ ಎಲೆಕ್ಟ್ರಿಕ್ ವಾಹನವನ್ನು ಖರೀದಿಸಬಹುದು.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಈ ಹಿನ್ನೆಲೆಯಲ್ಲಿ ಗ್ರೀವ್ಸ್ ಕಾಟನ್‌ ಕಂಪನಿಯ ಈ ಶೋರೂಂಗಳು ಜನಪ್ರಿಯವಾಗುವ ಸಾಧ್ಯತೆಗಳಿವೆ. ಇದರ ಜೊತೆಯಲ್ಲಿ ಕಂಪನಿಯು ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಿರುವ ಬಿಡಿಭಾಗಗಳ ಮಾರಾಟದಲ್ಲಿಯೂ ತೊಡಗಿಸಿ ಕೊಂಡಿದೆ ಎಂದು ವರದಿಯಾಗಿದೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳು ಹಾಗೂ ಇತರ ಪ್ರಮುಖ ಬಿಡಿ ಭಾಗಗಳು ಆಟೋ ಇವಿಮಾರ್ಟ್ ಶೋರೂಂಗಳಲ್ಲಿ ಮಾರಾಟಕ್ಕೆ ಲಭ್ಯವಾಗುವ ನಿರೀಕ್ಷೆಗಳಿವೆ.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಇದರ ಜೊತೆಗೆ ಕಂಪನಿಯು ವಾಹನ ಸವಾರರಿಗಾಗಿ ಪ್ರಮುಖ ಬಿಡಿ ಭಾಗಗಳನ್ನು ಮಾರಾಟ ಮಾಡಲಿದೆ ಎಂದು ಹೇಳಲಾಗಿದೆ. ಇದರಿಂದ ಗ್ರೀವ್ಸ್ ಕಾಟನ್ ಕಂಪನಿಯ ಹೊಸ ಶೋರೂಂಗಳ ಮೂಲಕ ಹಲವು ಕಂಪನಿಯ ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವಲ್ಲದೆ ಇನ್ನೂ ಹಲವು ವಿಶೇಷತೆಗಳನ್ನು ಪಡೆಯಬಹುದು.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಹೊಸತನವನ್ನು ನೀಡುವ ಉದ್ದೇಶದಿಂದ ಗ್ರೀವ್ಸ್ ಕಾಟನ್ ಕಂಪನಿಯು ಇಂತಹ ಯೋಜನೆಯನ್ನು ಕೈಗೆತ್ತಿ ಕೊಂಡಿದೆ. ಕಂಪನಿಯು ಆಂಪಿಯರ್ ಹೆಸರಿನಲ್ಲಿ ಬಹುವರ್ಣದ ಎಲೆಕ್ಟ್ರಿಕ್ ಬೈಕ್ ಗಳನ್ನು ಮಾರಾಟ ಮಾಡುತ್ತಿದೆ. ಗಮನಿಸಬೇಕಾದ ಸಂಗತಿಯೆಂದರೆ ಇವುಗಳನ್ನು ಗ್ರೀವ್ಸ್ ಕಾಟನ್ ಕಂಪನಿಯ ಶೋರೂಂಗಳಲ್ಲಿ ಖರೀದಿಸಬಹುದು.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣವು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರುವುದರಿಂದ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಗ್ರೀವ್ಸ್ ಕಾಟನ್ ಕಂಪನಿಯ ಹೊಸ ಶೋರೂಂಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ನೆರವಾಗಲಿವೆ.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಗ್ರೀವ್ಸ್ ಕಾಟನ್ ಆಟೋ ಎವಿಮಾರ್ಟ್ Hero Electric, Ather, TVS iQube, Bajaj Chetak ನಂತಹ ಪ್ರಮುಖ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಪ್ರದರ್ಶಿಸುವ ನಿರೀಕ್ಷೆಗಳಿವೆ. Ola ಕಂಪನಿಯು ಮಾರಾಟಗಾರರ ಮೂಲಕ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವುದಿಲ್ಲವೆಂದು ಈಗಾಗಲೇ ಸ್ಪಷ್ಟ ಪಡಿಸಿದೆ.

ಈ ಹಿನ್ನೆಲೆಯಲ್ಲಿ ಗ್ರೀವ್ಸ್ ಕಾಟನ್ ಕಂಪನಿಯ ಶೋರೂಂಗಳಲ್ಲಿ Ola ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಗಳು ಪ್ರದರ್ಶನಗೊಳ್ಳುತ್ತವೆಯೇ ಇಲ್ಲವೇ ಎಂಬುದನ್ನು ಕಾದುನೋಡಬೇಕಿದೆ. ಈ ಶೋರೂಂನಲ್ಲಿ ಯಾವ ಯಾವ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಪ್ರದರ್ಶಿಸಲಾಗುವುದು ಎಂಬುದರ ಬಗ್ಗೆ ಗ್ರೀವ್ಸ್ ಕಾಟನ್ ಕಂಪನಿಯು ಮಾಹಿತಿ ನೀಡಿಲ್ಲ.

ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಿದೆ ಗ್ರೀವ್ಸ್ ಕಾಟನ್

ಭಾರತದಲ್ಲಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳಲು ಪ್ರತಿ ವರ್ಷ ಲಕ್ಷಾಂತರ ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುತ್ತದೆ. ಇದು ದೇಶದ ಆರ್ಥಿಕತೆಯ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಇದರ ಜೊತೆಗೆ ಪೆಟ್ರೋಲ್, ಡೀಸೆಲ್ ವಾಹನಗಳಿಂದ ವಾಯು ಮಾಲಿನ್ಯವೂ ಉಂಟಾಗುತ್ತಿದೆ. ಈ ಕಾರಣಕ್ಕೆ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ತನ್ನ ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿ ನೀಡುತ್ತದೆ. ಕೆಲವು ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಕೊಡುಗೆ ಹಾಗೂ ರಿಯಾಯಿತಿಗಳನ್ನು ನೀಡುತ್ತಿವೆ. ಜೊತೆಗೆ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದಿವೆ.

Most Read Articles

Kannada
English summary
Greaves cotton to sell multi brand ev under one roof details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X