ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಗ್ರೀವ್ಸ್ ಕಾಟನ್ ಲಿಮಿಟೆಡ್‌ನ ಇ-ಮೊಬಿಲಿಟಿ ಭಾಗವಾದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ, ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಮಾರಾಟ ಮಾಡುವ ಪ್ರಮುಖ ರಿಟೇಲ್ ಕಂಪನಿಗಳಲ್ಲಿ ಒಂದಾಗಿದೆ. ಈಗ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ತಮಿಳುನಾಡಿನ ರಾಣಿಪೇಟ್ ನಲ್ಲಿ ಹೊಸ ಉತ್ಪಾದನಾ ಘಟಕವನ್ನು ತೆರೆದಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ತಮಿಳುನಾಡಿನ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 35 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಉತ್ಪಾದನಾ ಘಟಕದಲ್ಲಿ ಕಂಪನಿಯು ದೇಶಿಯ ಮಾರುಕಟ್ಟೆಗೆ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಗಳಿಗೂ ಎಲೆಕ್ಟ್ರಿಕ್ ವಾಹನಗಳನ್ನು ರಫ್ತು ಮಾಡಲಿದೆ. ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿಯು ಭಾರತೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸಲು ಸುಮಾರು ರೂ. 700 ಕೋಟಿಗಳ ಹೂಡಿಕೆಯೊಂದಿಗೆ ಈ ಉತ್ಪಾದನಾ ಘಟಕವನ್ನು ತೆರೆದಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಮೇಕ್ ಇನ್ ಇಂಡಿಯಾ ಹಾಗೂ ಆತ್ಮ ನಿರ್ಭರ್ ಭಾರತ್‌ನಂತಹ ಕೇಂದ್ರ ಸರ್ಕಾರದ ಯೋಜನೆಗಳಿಗೆ ಪೂರಕವಾಗಿ ಈ ಉತ್ಪಾದನಾ ಘಟಕಗಳನ್ನು ತೆರೆಯಲಾಗಿದ್ದು, ಹೊಸ ಉತ್ಪಾದನಾ ಘಟಕವು ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಗೆ ಎಲೆಕ್ಟ್ರಿಕ್ ಆಪರೇಟಿಂಗ್ ವಿಭಾಗದಲ್ಲಿ ಬೆಳವಣಿಗೆಯನ್ನು ಹೆಚ್ಚಿಸಲು ನೆರವಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

2021 - 22ರ ಹಣಕಾಸು ವರ್ಷದ ಅಂತ್ಯದ ವೇಳೆಗೆ ಹೊಸ ಉತ್ಪಾದನಾ ಘಟಕದಲ್ಲಿ 1.2 ಲಕ್ಷ ಯೂನಿಟ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಉತ್ಪಾದಿಸಲು ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ನಿರ್ಧರಿಸಿದೆ. ಭವಿಷ್ಯದಲ್ಲಿ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 1 ಮಿಲಿಯನ್ ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಈ ಉತ್ಪಾದನಾ ಘಟಕದಲ್ಲಿ 70% ಮಹಿಳಾ ಉದ್ಯೋಗಿಗಳನ್ನು ನೇಮಿಸಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಹೊಸ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡು ಕೈಗಾರಿಕಾ ಸಚಿವ ತಂಗಂ ತೆನ್ನರಸು, ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಟೋಮೊಬೈಲ್ ಉದ್ಯಮಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿಯಂತಹ ಕಂಪನಿಗಳು ಸಮುದಾಯವನ್ನು ಸುಧಾರಿಸುತ್ತವೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಕಂಪನಿಯು ಈ ಉತ್ಪಾದನಾ ಘಟಕದಲ್ಲಿ ಬಹುಪಾಲು ಮಹಿಳಾ ಕಾರ್ಮಿಕರನ್ನು ನೇಮಿಸಿಕೊಂಡಿರುವುದು ನಿಜಕ್ಕೂ ರೋಮಾಂಚನಕಾರಿಯಾಗಿದೆ. ಭಾರತವನ್ನು ವಿಶ್ವದ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು, ನಮ್ಮ ಮಹಿಳಾ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಸುಧಾರಿಸಲು ಹಾಗೂ ಉದ್ಯೋಗಗಳನ್ನು ಸೃಷ್ಟಿಸಲು ನಾವು ಆದ್ಯತೆ ನೀಡಬೇಕು ಎಂದು ಹೇಳಿದರು.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ನಂತರ ಮಾತನಾಡಿದ ಗ್ರೀವ್ಸ್ ಕಾಟನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ನಾಗೇಶ್ ಎ.ಬಸವಹಳ್ಳಿ, ನಾವು ದೇಶಾದ್ಯಂತ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಿದ್ದೇವೆ. ಲಾಸ್ಟ್ ಮೈಲ್ ಮೊಬಿಲಿಟಿಯನ್ನು ಕಾರ್ಬನ್ ಮುಕ್ತವಾಗಿಸುವ ನಮ್ಮ ಉದ್ದೇಶಕ್ಕೆ ಇದು ಅನುಗುಣವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಈ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕೇಂದ್ರವು ವಿವೇಚನಾಶೀಲ ಗ್ರಾಹಕರು ಹಾಗೂ ವ್ಯಾಪಾರ ಬಳಕೆಗಾಗಿ ಖರೀದಿದಾರರ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ನೆರವಾಗಲಿದೆ. ಈ ಘಟಕವು ಲಾಸ್ಟ್ ಮೈಲ್ ಮೊಬಿಲಿಟಿ ನೀಡಲು ವರ್ಷಕ್ಕೆ ಒಂದು ಮಿಲಿಯನ್ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಇದರಿಂದ ನಮಗೆ ಹೆಚ್ಚು ನುರಿತ ಉದ್ಯೋಗಿಗಳನ್ನು ಅಭಿವೃದ್ಧಿಪಡಿಸಲು ಹಾಗೂ ಸ್ಥಳೀಯ ಸಮುದಾಯಕ್ಕೆ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗಲಿದೆ ಎಂದು ಹೇಳಿದರು. ಗ್ರೀವ್ಸ್ ಎಲೆಕ್ಟ್ರಿಕ್‌ನ ಮಹತ್ವಾಕಾಂಕ್ಷೆಯ ಗುರಿಯು #MovingBillionsWithGreaves ಆಗಿದ್ದು, ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವುದಕ್ಕೆ ಆದ್ಯತೆ ನೀಡುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಗ್ರೀವ್ಸ್ ಎಲೆಕ್ಟ್ರಿಕ್‌ನ ಎರಡು ರೀತಿಯ ವ್ಯವಹಾರಗಳಾದ, ವ್ಯಾಪಾರ - ಗ್ರಾಹಕ ಮತ್ತು ವ್ಯಾಪಾರ - ವ್ಯವಹಾರವು ಜನರು, ಸರಕು ಹಾಗೂ ಸೇವೆಗಳ ನಿರಂತರ ಲಾಸ್ಟ್ ಮೈಲ್ ಮೊಬಿಲಿಟಿಯೊಂದಿಗೆ ಇಡೀ ಪರಿಸರ ವ್ಯವಸ್ಥೆಯೊಂದಿಗೆ ಸಾಮರಸ್ಯದಿಂದ ಕಾರ್ಯನಿರ್ವಹಿಸಲು ನೆರವಾಗುತ್ತವೆ. ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿಯು 7,000 ಕ್ಕೂ ಹೆಚ್ಚು ಟಚ್ ಸೆಂಟರ್‌, 12,000 ಅಸಿಸ್ಟೆಂಟ್ ಮೆಕ್ಯಾನಿಕ್ಸ್ ಹಾಗೂ ಡೆಡಿಕೇಟೆಡ್ ಆನ್ ಕಾಲ್ ಬೆಂಬಲ ತಂಡದೊಂದಿಗೆ ಬಲವಾದ ಚಿಲ್ಲರೆ ಹಾಗೂ ಮಾರಾಟದ ನಂತರದ ಜಾಲವನ್ನು ಹೊಂದಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಕಂಪನಿಯು ಕಳೆದ ತಿಂಗಳು ಅಂದರೆ ಅಕ್ಟೋಬರ್ ತಿಂಗಳಿನಲ್ಲಿಯೇ 7,500ಕ್ಕೂ ಹೆಚ್ಚು ಯೂನಿಟ್ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಿದೆ. ಅನೇಕ ಜನರು ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿಗಿಂತ ಹೆಚ್ಚಾಗಿ ಆಂಪಿಯರ್ ವೆಹಿಕಲ್ ಪ್ರೈವೇಟ್ ಲಿಮಿಟೆಡ್ ಬಗ್ಗೆಯೇ ಹೆಚ್ಚು ತಿಳಿದಿದ್ದಾರೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಹೊಸ ಉತ್ಪಾದನಾ ಘಟಕ ತೆರೆದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ

ಗ್ರೀವ್ಸ್ ಕಾಟನ್ ಲಿಮಿಟೆಡ್ ಕಂಪನಿಯು ಎಲೆಕ್ಟ್ರಿಕ್ ವಾಹನಗಳಿಗಾಗಿ ಇವಿ ತಂತ್ರಜ್ಞಾನವನ್ನು ವಿನ್ಯಾಸಗೊಳಿಸುವುದು, ತಯಾರಿಸುವುದು ಹಾಗೂ ಆವಿಷ್ಕರಿಸುವುದರಲ್ಲಿ 13 ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದೆ. ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ 1 ಲಕ್ಷಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ ಎಂಬುದು ಗಮನಾರ್ಹ. ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಕಂಪನಿಗಳು ತಮ್ಮದೇ ಆದ ಇವಿ ಉತ್ಪಾದನಾ ಘಟಕಗಳನ್ನು ತೆರೆಯುತ್ತಿವೆ. ಅವುಗಳ ಸಾಲಿಗೆ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಸಹ ಸೇರ್ಪಡೆಯಾಗಿದೆ.

Most Read Articles

Kannada
English summary
Greaves electric mobility opens new production plant for ev production details
Story first published: Wednesday, November 24, 2021, 14:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X