ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಗುಜರಾತ್ ಸರ್ಕಾರವು ತನ್ನ ರಾಜ್ಯದಲ್ಲಿರುವ ನಿರ್ಮಾಣ ಹಾಗೂ ಕೈಗಾರಿಕಾ ಕಾರ್ಮಿಕರಿಗೆ ಸಬ್ಸಿಡಿ ದರದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಒದಗಿಸುವ ಯೋಜನೆಯನ್ನು ಆರಂಭಿಸಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರವರು ಸೋಮವಾರ ಎಲೆಕ್ಟ್ರಿಕ್ ವಾಹನಗಳ ಮೂಲಕ ಪರಿಸರವನ್ನು ಬೆಂಬಲಿಸುವ ಗುರಿಯನ್ನು ಹೊಂದಿರುವ ಗೋ ಗ್ರೀನ್ ಯೋಜನೆಗೆ ಚಾಲನೆ ನೀಡಿದರು.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಈ ಯೋಜನೆಯಲ್ಲಿ ಇಂಧನದ ಮೇಲೆ ಮಾಡಲಾಗುತ್ತಿರುವ ವೆಚ್ಚವನ್ನು ಕಡಿಮೆ ಮಾಡಿ, ವಾಹನಗಳಿಂದ ಉಂಟಾಗುವ ಹೊರ ಸೂಸುವಿಕೆಯನ್ನು ತಡೆಯುವ ಗುರಿಯನ್ನು ಹೊಂದಲಾಗಿದೆ. ಗುಜರಾತ್'ನ ಮಹಾತ್ಮಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವರು ಈ ಯೋಜನೆ ಹಾಗೂ ಅದರ ಪೋರ್ಟಲ್'ಗೆ ಚಾಲನೆ ನೀಡಿದರು. ಗೋ ಗ್ರೀನ್ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಅವರು ಕಾರ್ಮಿಕರನ್ನು ಒತ್ತಾಯಿಸಿದರು.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಈ ಯೋಜನೆಯಡಿಯಲ್ಲಿ ಸಂಘಟಿತ ವಲಯದ ಯಾವುದೇ ಕಾರ್ಮಿಕರು ಎಲೆಕ್ಟ್ರಿಕ್ ವಾಹನ ವೆಚ್ಚದ 30% ನಷ್ಟು ಅಥವಾ ರೂ. 30,000 ಯಾವುದು ಕಡಿಮೆಯೋ ಅದನ್ನು ಸಬ್ಸಿಡಿಯಾಗಿ ಪಡೆಯಬಹುದು. ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಖರೀದಿಸುವ ಕಾರ್ಮಿಕರಿಗೆ ಮಾತ್ರ ಈ ಸಬ್ಸಿಡಿ ದೊರೆಯಲಿದೆ. ಇನ್ನು ನಿರ್ಮಾಣ ವಲಯದ ಕಾರ್ಮಿಕರಿಗೆ ಪ್ರತ್ಯೇಕ ಮಾನದಂಡ ನಿಗದಿಪಡಿಸಲಾಗಿದೆ.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಈ ಯೋಜನೆಯಡಿಯಲ್ಲಿ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನವನ್ನು ಖರೀದಿಸುವ ನಿರ್ಮಾಣ ವಲಯದ ಕಾರ್ಮಿಕರು 50% ನಷ್ಟು ಅಥವಾ ರೂ. 30,000 ಗಳ ರಿಯಾಯಿತಿ ಪಡೆಯಬಹುದು. ಎಲೆಕ್ಟ್ರಿಕ್ ವಾಹನಗಳ ಮೇಲೆ ಸಬ್ಸಿಡಿ ಪಡೆಯುವ ಕಾರ್ಮಿಕರಿಗೆ ವಾಹನ ನೋಂದಣಿ ಹಾಗೂ ರಸ್ತೆ ತೆರಿಗೆಯಲ್ಲಿ ಒಂದು ಬಾರಿ ವಿನಾಯಿತಿ ನೀಡಲಾಗುತ್ತದೆ.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಗೋ ಗ್ರೀನ್ ಯೋಜನೆಯ ಆರಂಭಿಕ ಹಂತದಲ್ಲಿ 1,000 ಕಟ್ಟಡ ಕಾರ್ಮಿಕರು ಹಾಗೂ 2,000 ಸಂಘಟಿತ ವಲಯದ ಕಾರ್ಮಿಕರಿಗೆ ಇಂತಹ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸುವ ಗುರಿಯನ್ನು ಗುಜರಾತ್ ರಾಜ್ಯ ಸರ್ಕಾರವು ಹೊಂದಿದೆ. ಈ ಯೋಜನೆಯಡಿಯಲ್ಲಿ ಸರ್ಕಾರಿ ಅನುಮೋದಿತ ಹಾಗೂ ಸ್ಥಳೀಯವಾಗಿ ತಯಾರಿಸಿದ ವಾಹನಗಳನ್ನು ಮಾತ್ರ ಸಬ್ಸಿಡಿಗೆ ಅರ್ಹವೆಂದು ಪರಿಗಣಿಸಲಾಗುತ್ತದೆ.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಈ ಯೋಜನೆಯಡಿ ನೀಡಲಾಗುವ ಎಲೆಕ್ಟ್ರಿಕ್ ವಾಹನಗಳು ಒಂದು ಬಾರಿ ಸಂಪೂರ್ಣವಾಗಿ ಚಾರ್ಜ್ ಆದ ನಂತರ 50 ಕಿ.ಮೀ ದೂರ ಚಲಿಸುವ ಸಾಮರ್ಥ್ಯವಿರುವ ಹೈ ಸ್ಪೀಡ್ ಮಾದರಿಗಳಾಗಿವೆ ಎಂದು ರಾಜ್ಯ ಸರ್ಕಾರವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಶುಲ್ಕ ಹಾಗೂ ರಸ್ತೆ ತೆರಿಗೆಯನ್ನು ರದ್ದುಗೊಳಿಸಲಾಗಿದೆ.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಇದರಿಂದ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರು ನೋಂದಣಿ ಶುಲ್ಕವನ್ನು ಉಳಿಸಬಹುದು. ಕೇಂದ್ರ ಸರ್ಕಾರದ ಜೊತೆಗೆ ಹಲವು ರಾಜ್ಯ ಸರ್ಕಾರಗಳು ತಮ್ಮ ಎಲೆಕ್ಟ್ರಿಕ್ ವಾಹನ ನೀತಿಗಳ ಅಡಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡುತ್ತಿವೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಿಗೆ ಉತ್ತೇಜನ ನೀಡಲು ಎಲ್ಲಾ ಬ್ಯಾಟರಿ ಚಾಲಿತ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 12% ನಿಂದ 5% ಗಳಿಗೆ ಇಳಿಸಲಾಗಿದೆ.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ರಾಜ್ಯ ಸರ್ಕಾರಗಳು ಸಬ್ಸಿಡಿ ಹಾಗೂ ರಿಯಾಯಿತಿಗಳನ್ನು ನೀಡುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹಾಗೂ ಮಾರಾಟವನ್ನು ಪ್ರೋತ್ಸಾಹಿಸುತ್ತಿವೆ. ಇತ್ತೀಚಿಗಷ್ಟೇ ಹರಿಯಾಣ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸ ಬಯಸುವ ಸರ್ಕಾರಿ ನೌಕರರಿಗೆ ವಿಶೇಷ ಕೊಡುಗೆಗಳನ್ನು ನೀಡಲು ನಿರ್ಧರಿಸಿತ್ತು. ಈ ಕೊಡುಗೆಯನ್ವಯ ಸರ್ಕಾರಿ ನೌಕರರು ಖರೀದಿಸುವ ಮೊದಲ ಎಲೆಕ್ಟ್ರಿಕ್ ವಾಹನಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಇದರ ಜೊತೆಗೆ ಹರಿಯಾಣ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಿರುವ ಯಾವುದೇ ರಾಜ್ಯ, ರಾಷ್ಟ್ರೀಯ ಹಾಗೂ ಅಂತರ್ ರಾಷ್ಟ್ರೀಯ ಸಂಸ್ಥೆಗಳಿಗೆ ರೂ. 5 ಕೋಟಿಗಳವರೆಗೆ ಪ್ರೋತ್ಸಾಹ ಧನ ನೀಡಲಾಗುವುದು. ಹರಿಯಾಣ ಸರ್ಕಾರದ ಎಲೆಕ್ಟ್ರಿಕ್ ವಾಹನ ನೀತಿ 2021 ಮುಂದಿನ ಒಂದು ತಿಂಗಳಲ್ಲಿ ಜಾರಿಗೆ ಬರಲಿದೆ.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಬಹುತೇಕ ಎಲ್ಲಾ ರಾಜ್ಯಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿಗಳನ್ನು ಘೋಷಿಸುತ್ತಿವೆ. ಈ ಸಂದರ್ಭದಲ್ಲಿಯೇ ಹರಿಯಾಣ ಸರ್ಕಾರವು ಎಲೆಕ್ಟ್ರಿಕ್ ವಾಹನ ನೀತಿ 2021 ಜಾರಿಗೆ ತರಲು ಮುಂದಾಗಿದೆ. ಈ ನೀತಿಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹಾಗೂ ಮಾರಾಟವನ್ನು ಹೆಚ್ಚಿಸಲು ವಿವಿಧ ಕೊಡುಗೆಗಳನ್ನು ನೀಡುವ ನಿರೀಕ್ಷೆಗಳಿವೆ. ಇವಿ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲು ಪ್ರೋತ್ಸಾಹ ನೀಡಲಾಗುವುದು.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ರಾಜಸ್ಥಾನ ರಾಜ್ಯದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆಯು ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ರಿಯಾಯಿತಿ ದರದಲ್ಲಿ ಸರ್ಕಾರಿ ಭೂಮಿಯನ್ನು ಒದಗಿಸಲಿದೆ. ಈ ಭೂಮಿಗಳಿಗೆ ಕಡಿಮೆ ಶುಲ್ಕವನ್ನು ವಿಧಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ಖರೀದಿಸುವ ನಿರ್ಮಾಣ ಕಾರ್ಮಿಕರಿಗೆ ಸಿಗಲಿದೆ 30% ಸಬ್ಸಿಡಿ

ಅದರಂತೆ ಸರ್ಕಾರಿ ಭೂಮಿಯನ್ನು 50% ನಷ್ಟು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಈ ಕೊಡುಗೆ 5 ವರ್ಷಗಳಲ್ಲಿ ಸ್ಥಾಪಿಸಲ್ಪಡುವ ಮೊದಲ 500 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರಗಳಿಗೆ ಅನ್ವಯವಾಗುತ್ತದೆ. ಕಳೆದ ತಿಂಗಳು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ರಾಜಸ್ಥಾನದಲ್ಲಿ ಫಾಸ್ಟ್ ಹಾಗೂ ಸ್ಲೋ ಎಂಬ ಎರಡು ವಿಧದ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸಹ ನಿರ್ಧರಿಸಲಾಗಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Gujarat government to give subsidy to workers to purchase electric two wheeler details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X