ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ ಹಾರ್ಲೆ ಡೇವಿಡ್ಸನ್ ತನ್ನ ಹೊಸ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.16.90 ಲಕ್ಷಗಳಾಗಿದೆ.

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಬೇಸ್ ಸ್ಪೆಕ್ ಬೆಲೆಯು ರೂ.ರೂ.16.90 ಲಕ್ಷಗಳಾದರೆ, ಟಾಪ್-ಸ್ಪೆಕ್ ಪ್ಯಾನ್ ಅಮೇರಿಕಾ 1250 ಸ್ಪೆಷಲ್‌ಗೆ ರೂ.19.99 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಈ ಹೊಸ ಬೈಕಿನ ಎರಡು ಬೈಕಿನಲ್ಲಿ ವಿಭಿನ್ನವಾಗಿ ಫೀಚರ್ ಗಳನ್ನು ನೀಡಲಾಗಿದೆ.

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಆದರೆ ಕೆಲವು ಫೀಚರ್ ಗಳು ಎರಡು ರೂಪಾಂತರಗಳಲ್ಲಿ ಒಂದೇ ರೀತಿಯಲ್ಲಿ ನೀಡಿದ್ದಾರೆ. ಇದು ಫುಲ್-ಎಲ್ಇಡಿ ಲೈಟಿಂಗ್, ಬ್ಲೂಟೂತ್-ಕನೆಕ್ಟಿವಿಟಿ ಹೊಂದಿರುವ 6.8-ಇಂಚಿನ ಕಲರ್ ಡಿಸ್ ಪ್ಲೇ ಮತ್ತು ಯುಎಸ್‌ಬಿ ಸಿ-ಟೈಪ್ ಔಟ್ ಲೈಟ್ ಅನ್ನು ಒಳಗೊಂಡಿವೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಪ್ಯಾನ್ ಅಮೆರಿಕ 1250 ಸಂಪೂರ್ಣವಾಗಿ ಹೊಸ ಬೈಕ್ ಆಗಿದ್ದು, ಇದನ್ನು ಸಂಪೂರ್ಣವಾಗಿ ಹೊಸದಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ. ಇದರ ವಿನ್ಯಾಸದ ಬಗ್ಗೆ ಹೇಳುವುದಾದರೆ, ಅಡ್ವೆಂಚರ್ ಪ್ರಿಯರನ್ನು ಸೆಳೆಯುವಂತೆ ವಿಶಿಷ್ಟವಾದ ವಿನ್ಯಾಸಗೊಳಿಸಿದ್ದಾರೆ.

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಇನ್ನು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಸ್ಟ್ಯಾಂಡರ್ಡ್ ರೂಪಾಂತರದಲ್ಲಿ ಐದು ರೈಡಿಂಗ್ ಮೋಡ್ ಗಳನ್ನು ಪಡೆಯುತ್ತದೆ. ನಾಲ್ಕು ಪ್ರಿ-ಪ್ರೊಗಾಮ್ ಮಾಡಲಾದ ರೋಡ್, ಸ್ಪೋರ್ಟ್, ರೈನ್, ಆಫ್-ರೋಡ್ ಮತ್ತು ಒಂದು ಕಸ್ಟಮ್ ಮೋಡ್ ಅನ್ನು ರೈಡರ್ ತನ್ನ ಸ್ವಂತ ಆದ್ಯತೆಯ ಪ್ರಕಾರ ಹೊಂದಿಸಬಹುದು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಇನ್ನು ಟಾಪ್-ಸ್ಪೆಕ್ ಆದ ಸ್ಪೆಷಲ್ ರೂಪಾಂತರದಲ್ಲಿ ಕಸ್ಟಮೈಸ್ ಮಾಡಬಹುದಾದ ಎರಡು ಹೆಚ್ಚುವರಿ ಮೋಡ್‌ಗಳನ್ನು ಪಡೆಯುತ್ತದೆ. ಮೆಕ್ಯಾನಿಕಲ್‌ಗಳ ವಿಷಯದಲ್ಲಿ ಎರಡು ರೂಪಾಂತರಗಳಲ್ಲಿ ಒಂದೇ 1,252 ಸಿಸಿ, ರೆವಲ್ಯೂಷನ್ ಮ್ಯಾಕ್ಸ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಈ ಎಂಜಿನ್ 9,000 ಆರ್‌ಪಿಎಂನಲ್ಲಿ 150 ಬಿಹೆಚ್‌ಪಿ ಪವರ್ ಮತ್ತು 6,750 ಆರ್‌ಪಿಎಂನಲ್ಲಿ 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಯುನಿಟ್ ಅನ್ನು ಜೋಡಿಸಲಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಪ್ಯಾನ್ ಅಮೇರಿಕಾ 1250 ಸ್ಪೆಷಲ್ ರೂಪಾಂತರವು ಲೋಡ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಸ್ಟ್ಯಾಂಡರ್ಡ್ ಸೆಂಟರ್ ಸ್ಟ್ಯಾಂಡ್, ಹೊಂದಾಣಿಕೆ ಮಾಡಬಹುದಾದ ರಿಯರ್ ಬ್ರೇಕ್ ಪೆಡಲ್, ಅಲ್ಯೂಮಿನಿಯಂ ಸ್ಕಿಡ್-ಪ್ಲೇಟ್, ಸ್ಟೀರಿಂಗ್ ಡ್ಯಾಂಪರ್ ಮತ್ತು ಅಡಾಪ್ಟಿವ್ ರೈಡ್ ಎಂಬ ಫೀಚರ್ ಗಳನ್ನು ಹೊಂದಿವೆ.

ಭಾರತದಲ್ಲಿ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಬಿಡುಗಡೆ

ಇನ್ನು ಈ ಐಷಾರಾಮಿ ಅಡ್ವೆಂಚರ್ ಬೈಕಿನಲ್ಲಿ ಸೆಮಿ-ಆಕ್ಟಿವ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ. ಪ್ಯಾನ್ ಅಮೇರಿಕಾ 1250 ಹಾರ್ಲೆ-ಡೇವಿಡ್ಸನ್‌ನಿಂದ ಬಂದ ಮೊದಲ ಅಡ್ವೆಂಚರ್ ಬೈಕ್ ಆಗಿದೆ. ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಅಗ್ರೇಸಿವ್ ಮತ್ತು ರಗಡ್ ಲುಕ್ ಅನ್ನು ಹೊಂದಿರುವ ಫ್ಯೂಚರಿಸ್ಟಿಕ್ ಫ್ರಂಟ್ ಎಂಡ್ ಪಡೆದುಕೊಂಡಿದೆ.

Article Published On: Wednesday, April 28, 2021, 17:26 [IST]
English summary
2021 Harley-Davidson Pan America 1250 ADV Launched. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+